ADVERTISEMENT
Thursday, February 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ಬೆಂಗಳೂರು

ಮೆಟ್ರೋ ಪ್ರಯಾಣಿಕರ ಜೇಬಿಗೆ ಕತ್ತರಿ: ಸುಳ್ಳು ಹೇಳೋಕೆ ನಾಚಿಕೆ ಆಗಲ್ವಾ? ಏನ್ ತಿಂತೀರಿ? ಸಿಎಂ ವಿರುದ್ಧ ಏಕವಚನದಲ್ಲೇ ಗುಡುಗಿದ ತೇಜಸ್ವಿ ಸೂರ್ಯ

Namma Metro fare hike: Aren't you ashamed to lie? What will you eat? Tejaswi Surya thundered against the CM in a single sentence

Shwetha by Shwetha
February 8, 2026
in ಬೆಂಗಳೂರು, Newsbeat, State, ರಾಜ್ಯ
Share on FacebookShare on TwitterShare on WhatsappShare on Telegram

ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ವಿಚಾರ ಇದೀಗ ರಾಜಕೀಯ ರಣರಂಗವಾಗಿ ಮಾರ್ಪಟ್ಟಿದೆ. ಬೆಂಗಳೂರಿನ ಜನರ ಜೀವನಾಡಿಯಾಗಿರುವ ಮೆಟ್ರೋ ದರವನ್ನು ಮತ್ತೆ ಏರಿಸಲು ಮುಂದಾಗಿರುವ ಬೆಳವಣಿಗೆಗೆ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ರಾಜ್ಯ ಸರ್ಕಾರದ ವಿರುದ್ಧ ನೇರ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಅಕ್ಷರಶಃ ಕೆಂಡಾಮಂಡಲವಾಗಿದ್ದಾರೆ.

ದೇಶದ ಅತ್ಯಂತ ದುಬಾರಿ ಮೆಟ್ರೋ ಎಂಬ ಅಪಖ್ಯಾತಿ

Related posts

ಸ್ಪೀಕರ್ ಪದಚ್ಯುತಿ ನೋಟಿಸ್‌ನಲ್ಲಿ ದೋಷಗಳು ಪತ್ತೆ.. ವಿಪಕ್ಷಗಳಿಗೆ ಮುಖಭಂಗ!

ಸ್ಪೀಕರ್ ಪದಚ್ಯುತಿ ನೋಟಿಸ್‌ನಲ್ಲಿ ದೋಷಗಳು ಪತ್ತೆ.. ವಿಪಕ್ಷಗಳಿಗೆ ಮುಖಭಂಗ!

February 12, 2026
ದೆಹಲಿಗೆ ಶಿಫ್ಟ್ ಆದ ಕಾಂಗ್ರೆಸ್ ‘ಕುರ್ಚಿ ಕಾಳಗ’… ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ

ದೆಹಲಿಗೆ ಶಿಫ್ಟ್ ಆದ ಕಾಂಗ್ರೆಸ್ ‘ಕುರ್ಚಿ ಕಾಳಗ’… ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ

February 12, 2026

ರಾಜ್ಯ ಸರ್ಕಾರವು ಸತ್ಯವನ್ನು ಮರೆಮಾಚಿ ಪದೇ ಪದೇ ಸುಳ್ಳು ಹೇಳುವ ಮೂಲಕ ಜನರನ್ನು ದಾರಿ ತಪ್ಪಿಸುತ್ತಿದೆ ಎಂದು ಆರೋಪಿಸಿದ ತೇಜಸ್ವಿ ಸೂರ್ಯ, ಕೇವಲ ಎಂಟು ತಿಂಗಳ ಹಿಂದೆಯಷ್ಟೇ ಮೆಟ್ರೋ ದರದಲ್ಲಿ ಬರೋಬ್ಬರಿ ಶೇ. 71ರಷ್ಟು ಏರಿಕೆ ಮಾಡಲಾಗಿತ್ತು. ಆ ಆರ್ಥಿಕ ಹೊಡೆತದಿಂದ ಸಾಮಾನ್ಯ ಜನರು ಚೇತರಿಸಿಕೊಳ್ಳುವ ಮುನ್ನವೇ, ಮತ್ತೊಮ್ಮೆ ಬೆಲೆ ಏರಿಕೆ ಮಾಡಿ ಜನರ ಜೇಬಿಗೆ ಕತ್ತರಿ ಹಾಕಲು ಸರ್ಕಾರ ನಿರ್ಧರಿಸಿದೆ. ಈ ಮೂಲಕ ಬಡವರು ಮತ್ತು ಮಧ್ಯಮ ವರ್ಗದವರ ಪಾಲಿನ ಸಾರಿಗೆಯಾಗಿದ್ದ ನಮ್ಮ ಮೆಟ್ರೋವನ್ನು, ದೇಶದಲ್ಲೇ ಅತ್ಯಂತ ದುಬಾರಿ ಮೆಟ್ರೋ ಎಂಬ ಕುಖ್ಯಾತಿಗೆ ರಾಜ್ಯ ಸರ್ಕಾರ ಗುರಿ ಮಾಡುತ್ತಿದೆ ಎಂದು ಕಿಡಿಕಾರಿದರು.

ಕೇಂದ್ರದ ಮೇಲೆ ಗೂಬೆ ಕೂರಿಸುವ ನಾಟಕ ಬಂದ್ ಮಾಡಿ

ದರ ಏರಿಕೆಗೂ ರಾಜ್ಯ ಸರ್ಕಾರಕ್ಕೂ ಸಂಬಂಧವಿಲ್ಲ, ಇದು ಕೇಂದ್ರ ಸರ್ಕಾರದ ನಿರ್ಧಾರ ಎಂಬ ಮುಖ್ಯಮಂತ್ರಿಗಳ ಹೇಳಿಕೆಗೆ ತಿರುಗೇಟು ನೀಡಿದ ಸಂಸದರು, ದರ ನಿಗದಿ ಸಮಿತಿ (Fare Fixation Committee) ರಚನೆಯ ಅಸಲಿಯತ್ತನ್ನು ಎಳೆಎಳೆಯಾಗಿ ಬಿಚ್ಚಿಟ್ಟರು. ಕೇಂದ್ರ ಸರ್ಕಾರ ತಾನಾಗಿಯೇ ಬಂದು ಈ ಕಮಿಟಿ ರಚನೆ ಮಾಡಿಲ್ಲ. ರಾಜ್ಯ ಸರ್ಕಾರವೇ ಸ್ವತಃ ನಾಲ್ಕು ಬಾರಿ ಕೇಂದ್ರಕ್ಕೆ ಪತ್ರ ಬರೆದು, ನಮಗೆ ಆರ್ಥಿಕ ಹೊರೆಯಾಗುತ್ತಿದೆ, ಕೂಡಲೇ ದರ ಪರಿಷ್ಕರಣೆ ಸಮಿತಿ ರಚಿಸಿ ಎಂದು ಒತ್ತಡ ಹೇರಿದ ಬಳಿಕವಷ್ಟೇ ಈ ಸಮಿತಿ ರಚನೆಯಾಗಿದೆ. ಅಷ್ಟೇ ಅಲ್ಲದೆ, ಪ್ರತಿ ವರ್ಷವೂ ದರ ಏರಿಕೆ ಮಾಡಬೇಕೆಂದು ಸ್ವತಃ ರಾಜ್ಯ ಸರ್ಕಾರದ ಅಧಿಕಾರಿಗಳೇ ಸಮಿತಿಗೆ ಶಿಫಾರಸು ಮಾಡಿದ್ದಾರೆ. ಇಷ್ಟೆಲ್ಲಾ ಮಾಡಿ ಈಗ ಕೇಂದ್ರದ ಕಡೆ ಬೆರಳು ತೋರಿಸುವುದು ಹೇಡಿತನ ಎಂದು ಜರಿದರು.

ಗ್ಯಾರಂಟಿ ಹೆಸರಲ್ಲಿ ಬೊಕ್ಕಸ ಖಾಲಿ: ಈಗ ಜನರ ಮೇಲೆ ಬರೆ

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದಾಗಿ ರಾಜ್ಯದ ಬೊಕ್ಕಸ ಸಂಪೂರ್ಣ ದಿವಾಳಿಯಾಗಿದೆ ಎಂದು ಗಂಭೀರ ಆರೋಪ ಮಾಡಿದ ಸೂರ್ಯ, ಹಣಕಾಸಿನ ಮುಗ್ಗಟ್ಟು ಸರಿದೂಗಿಸಲು ಸರ್ಕಾರ ಮೆಟ್ರೋ ಪ್ರಯಾಣಿಕರನ್ನು ಬಲಿಪಶು ಮಾಡುತ್ತಿದೆ ಎಂದರು. ಈ ಹಿಂದೆ ಬಿಎಂಆರ್‌ಸಿಎಲ್‌ನ ಸಾಲದ ಬಡ್ಡಿ ಹೊರೆಯನ್ನು ತಗ್ಗಿಸಲು ರಾಜ್ಯ ಸರ್ಕಾರ ಶಾಡೋ ಕ್ಯಾಶ್ ಸಪೋರ್ಟ್ ನೀಡುತ್ತಿತ್ತು. ಆದರೆ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಈ ಆರ್ಥಿಕ ನೆರವನ್ನು ನಿಲ್ಲಿಸಲಾಗಿದೆ. ಮೆಟ್ರೋ ಸಂಸ್ಥೆಯ ಆರ್ಥಿಕ ಹೊರೆಯನ್ನು ನೇರವಾಗಿ ಜನಸಾಮಾನ್ಯರ ತಲೆಗೆ ಕಟ್ಟಲಾಗುತ್ತಿದೆ. ಇದು ಬಡವರಿಗೆ ಮಾಡುತ್ತಿರುವ ಪರಮ ಅನ್ಯಾಯ ಎಂದು ಅವರು ದೂರಿದರು.

ಏನ್ ತಿಂತೀರಿ ನೀವು? ನಾವೇನು ಅನಕ್ಷರಸ್ಥರಾ?

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಧ್ಯಮಗಳ ಮುಂದೆ ದರ ಏರಿಕೆಯ ಹೊಣೆಯನ್ನು ಕೇಂದ್ರದ ಮೇಲೆ ಹಾಕಿದ್ದಕ್ಕೆ ತೀವ್ರ ಸಿಟ್ಟಾದ ತೇಜಸ್ವಿ ಸೂರ್ಯ, ಸಾರ್ವಜನಿಕವಾಗಿ ಏಕವಚನದಲ್ಲೇ ವಾಗ್ದಾಳಿ ನಡೆಸಿದರು. ನಾವೇನು ಅನಕ್ಷರಸ್ಥರಾ? ನಮಗೆ ಓದಲು ಬರುವುದಿಲ್ಲವೇ? ಕೋರ್ಟ್ ಆದೇಶ ಮತ್ತು ಸರ್ಕಾರಿ ದಾಖಲೆಗಳಲ್ಲಿ ಏನಿದೆ ಎಂಬುದು ತಿಳಿಯುವುದಿಲ್ಲವೇ? ಮಾಧ್ಯಮಗಳ ಮುಂದೆ ಬಂದು ಹಸಿ ಸುಳ್ಳು ಹೇಳುತ್ತೀರಲ್ಲಾ, ನಿಮಗೆ ನಾಚಿಕೆ ಆಗಲ್ವಾ? ಏನ್ ತಿಂತೀರಿ ನೀವು? ಎಂದು ಅತ್ಯಂತ ಕಟುವಾದ ಶಬ್ದಗಳಲ್ಲಿ ಪ್ರಶ್ನಿಸಿದರು.

ಸೋಮವಾರದಿಂದ ಮೆಟ್ರೋ ನಿಲ್ದಾಣಗಳಲ್ಲಿ ಹೋರಾಟದ ಎಚ್ಚರಿಕೆ

ಚೆನ್ನೈನಲ್ಲಿ ಮೆಟ್ರೋ ಇದೆ, ಅಲ್ಲಿಯೂ ಕೇಂದ್ರ ಸರ್ಕಾರವೇ ಇದೆ. ಆದರೆ ಅಲ್ಲಿ ದರ ಏರಿಕೆಯಾಗಿಲ್ಲ, ಕರ್ನಾಟಕದಲ್ಲಿ ಮಾತ್ರ ಏಕೆ ಈ ದರ ಏರಿಕೆ? ಎಂದು ಪ್ರಶ್ನಿಸಿದ ಸಂಸದರು, ರಾಜ್ಯ ಸರ್ಕಾರಕ್ಕೆ ಸ್ಪಷ್ಟ ಎಚ್ಚರಿಕೆ ನೀಡಿದರು. ಸೋಮವಾರದಿಂದ ಜಾರಿಗೆ ತರಲು ಉದ್ದೇಶಿಸಿರುವ ದರ ಹೆಚ್ಚಳವನ್ನು ತಕ್ಷಣವೇ ತಡೆಹಿಡಿಯಬೇಕು. ದರ ಮರು ಪರಿಷ್ಕರಣೆಗೆ ಆಗ್ರಹಿಸಿ ಹೊಸ ಸಮಿತಿ ರಚನೆಗೆ ಪತ್ರ ಬರೆಯಬೇಕು. ಒಂದು ವೇಳೆ ದರ ಏರಿಕೆ ಕೈಬಿಡದಿದ್ದರೆ, ನಾಳೆಯಿಂದಲೇ ನಾವು ಮೆಟ್ರೋ ನಿಲ್ದಾಣಗಳಲ್ಲಿ ಕಪ್ಪು ಪಟ್ಟಿ ಧರಿಸಿ ಉಗ್ರ ಹೋರಾಟ ನಡೆಸುತ್ತೇವೆ. ನಮ್ಮ ತೆರಿಗೆ ನಮ್ಮ ಹಕ್ಕು ಎಂದು ದೆಹಲಿಗೆ ಹೋಗಿ ಪ್ರತಿಭಟಿಸುವ ನೀವು, ಮೆಟ್ರೋ ದರ ಇಳಿಕೆ ಬಗ್ಗೆ ಮಾತನಾಡಲು ಕೇಂದ್ರದ ಬಳಿ ನಿಯೋಗವನ್ನೇಕೆ ಕರೆದೊಯ್ಯುತ್ತಿಲ್ಲ ಎಂದು ಸವಾಲು ಹಾಕಿದರು.

ಇತ್ತ ಸಂಸದರ ಗಂಭೀರ ಆರೋಪಗಳ ಬಗ್ಗೆ ವಿಧಾನಸೌಧದಲ್ಲಿ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಕೇಂದ್ರ ಸರ್ಕಾರ ನೇಮಕ ಮಾಡಿದ ಸಮಿತಿಯೇ ದರ ನಿಗದಿ ಮಾಡುತ್ತದೆ, ಅದರಲ್ಲಿ ನಮ್ಮ ಪಾತ್ರವಿಲ್ಲ ಎಂದು ಹೇಳುವ ಮೂಲಕ ಮತ್ತೊಮ್ಮೆ ಚೆಂಡನ್ನು ಕೇಂದ್ರದ ಅಂಗಳಕ್ಕೆ ಎಸೆದು ಜಾರಿಕೊಂಡರು.

ShareTweetSendShare
Join us on:

Related Posts

ಸ್ಪೀಕರ್ ಪದಚ್ಯುತಿ ನೋಟಿಸ್‌ನಲ್ಲಿ ದೋಷಗಳು ಪತ್ತೆ.. ವಿಪಕ್ಷಗಳಿಗೆ ಮುಖಭಂಗ!

ಸ್ಪೀಕರ್ ಪದಚ್ಯುತಿ ನೋಟಿಸ್‌ನಲ್ಲಿ ದೋಷಗಳು ಪತ್ತೆ.. ವಿಪಕ್ಷಗಳಿಗೆ ಮುಖಭಂಗ!

by Shwetha
February 12, 2026
0

ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ವಿರುದ್ಧ 118 ವಿರೋಧ ಪಕ್ಷದ ಸಂಸದರು ಸಲ್ಲಿಸಿದ್ದ ಪದಚ್ಯುತಿ ನೋಟಿಸ್‌ನಲ್ಲಿ ತಾಂತ್ರಿಕ ದೋಷಗಳು ಪತ್ತೆಯಾಗಿರುವುದು ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ....

ದೆಹಲಿಗೆ ಶಿಫ್ಟ್ ಆದ ಕಾಂಗ್ರೆಸ್ ‘ಕುರ್ಚಿ ಕಾಳಗ’… ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ

ದೆಹಲಿಗೆ ಶಿಫ್ಟ್ ಆದ ಕಾಂಗ್ರೆಸ್ ‘ಕುರ್ಚಿ ಕಾಳಗ’… ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ

by Shwetha
February 12, 2026
0

ಕರ್ನಾಟಕ ಕಾಂಗ್ರೆಸ್‌ನಲ್ಲಿ ಅಧಿಕಾರಕ್ಕಾಗಿ ನಡೆಯುತ್ತಿರುವ ಒಳಜಗ್ಗಾಟ ಇದೀಗ ದೆಹಲಿಗೆ ಶಿಫ್ಟ್ ಆದಂತಾಗಿದೆ. ಮುಖ್ಯಮಂತ್ರಿ ಸ್ಥಾನ ಬದಲಾವಣೆ ಕುರಿತ ಚರ್ಚೆಗಳು ಮತ್ತೆ ಗರಿಗೆದರಿದ ಬೆನ್ನಲ್ಲೇ, ಉಪ ಮುಖ್ಯಮಂತ್ರಿ ಡಿಕೆ...

ಅಪ್ಪನಿಗೆ ಕೊಕ್, ಮಗನಿಗೆ ಟಿಕೆಟ್? ದಳಪತಿಯ ಹೊಸ ದಾಳಕ್ಕೆ ಬೆಚ್ಚಿಬಿದ್ದ ಚಾಮುಂಡೇಶ್ವರಿ ಕ್ಷೇತ್ರದ ಜಿ.ಟಿ.ದೇವೇಗೌಡ್ರು

ಅಪ್ಪನಿಗೆ ಕೊಕ್, ಮಗನಿಗೆ ಟಿಕೆಟ್? ದಳಪತಿಯ ಹೊಸ ದಾಳಕ್ಕೆ ಬೆಚ್ಚಿಬಿದ್ದ ಚಾಮುಂಡೇಶ್ವರಿ ಕ್ಷೇತ್ರದ ಜಿ.ಟಿ.ದೇವೇಗೌಡ್ರು

by Shwetha
February 12, 2026
0

ವಿಧಾನಸಭಾ ಚುನಾವಣೆಗೆ ಇನ್ನೂ ಎರಡು ವರ್ಷಗಳ ಬಾಕಿಯಿರುವಾಗಲೇ ಮೈಸೂರು ಭಾಗದ ರಾಜಕಾರಣ, ವಿಶೇಷವಾಗಿ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರ ರಣರಂಗವಾಗಿ ಮಾರ್ಪಟ್ಟಿದೆ. ಜೆಡಿಎಸ್‌ನ ಭದ್ರಕೋಟೆ ಎಂದೇ ಬಿಂಬಿತವಾಗಿರುವ ಈ...

ಭಾರತ ಮಾತೆಯನ್ನು ಅಮೆರಿಕಕ್ಕೆ ಮಾರಾಟ ಮಾಡಲು ನಿಮಗೆ ನಾಚಿಕೆಯಾಗುವುದಿಲ್ಲವೇ? ಮೋದಿ ಸರ್ಕಾರದ ವಿರುದ್ಧ ಸಂಸತ್ತಿನಲ್ಲಿ ರಾಹುಲ್ ಗಾಂಧಿ ರೌದ್ರಾವತಾರ

ಭಾರತ ಮಾತೆಯನ್ನು ಅಮೆರಿಕಕ್ಕೆ ಮಾರಾಟ ಮಾಡಲು ನಿಮಗೆ ನಾಚಿಕೆಯಾಗುವುದಿಲ್ಲವೇ? ಮೋದಿ ಸರ್ಕಾರದ ವಿರುದ್ಧ ಸಂಸತ್ತಿನಲ್ಲಿ ರಾಹುಲ್ ಗಾಂಧಿ ರೌದ್ರಾವತಾರ

by Shwetha
February 12, 2026
0

ನವದೆಹಲಿ: ಕಳೆದ ಕೆಲವು ದಿನಗಳಿಂದ ಸಂಸತ್ತಿನಲ್ಲಿ ನಡೆಯುತ್ತಿದ್ದ ನಿರಂತರ ಗದ್ದಲ ಮತ್ತು ಕೋಲಾಹಲಗಳ ನಡುವೆಯೇ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಇಂದು ಪ್ರಧಾನಿ ನರೇಂದ್ರ...

ನಿಧಾನವಾದ್ರೂ ಸರಿ ಸಿದ್ದರಾಮಯ್ಯ ಕೊಟ್ಟ ಮಾತು ಉಳಿಸಿಕೊಳ್ತಾರೆ: ಡಿಕೆ ಸುರೇಶ್ ವಿಶ್ವಾಸದ ಹಿಂದಿನ ಮರ್ಮವೇನು

ನಿಧಾನವಾದ್ರೂ ಸರಿ ಸಿದ್ದರಾಮಯ್ಯ ಕೊಟ್ಟ ಮಾತು ಉಳಿಸಿಕೊಳ್ತಾರೆ: ಡಿಕೆ ಸುರೇಶ್ ವಿಶ್ವಾಸದ ಹಿಂದಿನ ಮರ್ಮವೇನು

by Shwetha
February 12, 2026
0

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಎಲ್ಲವೂ ಸರಿಯಿಲ್ಲ ಎಂಬ ಮಾತುಗಳು ಮತ್ತೆ ಕೇಳಿಬರುತ್ತಿವೆ. ಬೂದಿ ಮುಚ್ಚಿದ ಕೆಂಡದಂತಿದ್ದ ಸಿಎಂ ಕುರ್ಚಿ ಬದಲಾವಣೆಯ ವಿಚಾರ ಈಗ ಮತ್ತೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram