ಬೆಂಗಳೂರು : ಸಿಲಿಕಾನ್ ಸಿಟಿ ಮಂದಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಸೆ.7 ರಿಂದ ನಮ್ಮ ಮೆಟ್ರೋ ರೈಲು ಸಂಚಾರ ಆರಂಭಿಸಲು ಕೇಂದ್ರ ಮಾರ್ಗಸೂಚಿಯಂತೆ ರಾಜ್ಯ ಸರ್ಕಾರದಿಂದ ಗ್ರೀನ್ ಸಿಗ್ನಲ್ ಸಿಕ್ಕಿದೆ. ಇನ್ನೂ ಸೆ. 7 ರಿಂದ ನಮ್ಮ ಮೆಟ್ರೋ ಸಂಚಾರ ಆರಂಭವಾಗಲಿದ್ದು, ಪ್ರಯಾಣಿಕರು ಕಡ್ಡಾಯವಾಗಿ ಕೆಲ ಕೋವಿಡ್ ನಿಯಮಗಳನ್ನ ಪಾಲಿಸಲೇಬೇಕಾಗಿದೆ.
ರೈಲು ನಿಲ್ದಾಣ ಪ್ರವೇಶಿಸುವ ಮೊದಲು ಪ್ರತಿ ಪ್ರಯಾಣಿಕರನ್ನು ಥರ್ಮಲ್ ಸ್ಕ್ರೀನಿಂಗ್ ಗೆ ಒಳಪಡಿಸಲಾಗುತ್ತದೆ. ಸಾಮಾಜಿಕ ಅಂತರ ಕಾಪಾಡಿಕೊಳ್ಳಲು ನಿಲ್ದಾಣದೊಳಗೆ ಪ್ಲಾಟ್ ಫಾರಂನಲ್ಲಿ ಮಾರ್ಕಿಂಗ್ ಮಾಡಲಾಗಿದೆ. ನಿಗದಿತ ಸ್ಥಳದಲ್ಲಿ ಪ್ರಯಾಣಿಕರು ನಿಲ್ಲಬೇಕಿದೆ. ಇನ್ನೂ ಪ್ರಯಾಣಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಲೇಬೇಕಿದೆ ಮತ್ತೊಂದು ಮುಖ್ಯ ಮಾಹಿತಿ ಎಂದರೆ ಪ್ರಯಾಣಿಕರಿಗೆ ಟೋಕನ್ ಬದಲಿಗೆ ಕೇವಲ ಸ್ಮಾರ್ಟ್ ಕಾರ್ಡ್ ಗಳ ಬಳಕೆಗೆ ಅವಕಾಶ ಕಲ್ಪಿಸಲು ಸಿದ್ಧತೆ ನಡೆದಿದೆ.
ಶ್ರೀ ಅನ್ನಪೂರ್ಣೆಶ್ವರಿ ಜ್ಯೋತಿಷ್ಯ ಪೀಠಂ
ಶ್ರೀ ಮಹಾ ಕಾಲ ಭೈರವ
ದೈವಜ್ಞ ಪಂಡಿತ್ ಗಜೇಂದ್ರ ಅವಧಾನಿಗಳು
ವಿಳಾಸ – ಡಿವಿಜಿ ರೋಡ್, ಬಸವನಗುಡಿ ಬೆಂಗಳೂರು
ಸರ್ವ ಸಮಸ್ಯೆಗಳಿಗೆ ಗುರುಗಳನ್ನು ಒಮ್ಮೆ ಭೇಟಿ ಕೊಡಿ
ಸಂಪರ್ಕಿಸಿ – 9538175275








