ಸಮನ್ವಿ ಸಾವಿಗೆ ಲಾರಿ ಚಾಲಕನ ಅಜಾಗರೂಕತೆ ಕಾರಣ

1 min read

ಸಮನ್ವಿ ಸಾವಿಗೆ ಲಾರಿ ಚಾಲಕನ ಅಜಾಗರೂಕತೆ ಕಾರಣ

ಬೆಂಗಳೂರು : ಅಪಘಾತದಲ್ಲಿ ಮೃತಪಟ್ಟ ಸೂಪರ್ ಸ್ಟಾರ್ ರಿಯಾಲಿಟಿ ಶೋನ ಸ್ಪರ್ಧಿ ಸಮನ್ವಿ ಸಾವಿಗೆ ಲಾರಿ ಚಾಲಕನ ಅಜಾಗರೂಚತೆಯೇ ಕಾರಣ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಹೀಗಾಗಿ ಲಾರಿ ಚಾಲಕ ಮಂಚೇಗೌಡನನ್ನು ಪೊಲೀಸರು ಬಂಧಿಸಿದ್ದಾರೆ.

ಗುರುವಾರ ಸಂಜೆ ಅಮೃತ ನಾಯ್ಡು ಮಗಳೊಂದಿಗೆ ಮನೆಯಿಂದ ಹೊರಗಡೆ ಹೊರಟಿದ್ದರು.

nammamma-super-star-contestant-samanvi-dies saaksha tv

ವಾಜರಹಳ್ಳಿ ಮೆಟ್ರೋ ಸ್ಟೇಶನ್ ಬಳಿ ತಾಯಿ ಮಗಳು ಟಾಟಾ ಸುಮೋ ಹಾಗೂ ಲಾರಿ ಮಧ್ಯೆ ಸಿಲುಕಿದ್ದರು.

ಟಿಪ್ಪರ್ ಲಾರಿ ಚಾಲಕ ಎಡಕ್ಕೆ ಗಾಡಿಯನ್ನು ತಿರುಗಿಸಿದ್ದು,  ಎಡಭಾಗದ ಬಂಪರ್ ಡಿಕ್ಕಿ ಹೊಡೆದಿದ್ದರಿಂದ ಅಮೃತ ನಾಯ್ಡು ಮತ್ತು ಮನ್ವಿ ರಸ್ತೆಗೆ ಬಿದ್ದಿದ್ದಾರೆ.

ಕೂಡಲೇ ಅವರನ್ನು ಆಸ್ಪತ್ರೆ ದಾಖಲು ಮಾಡಲು ಮುಂದಾಗಿದ್ದು, ರಸ್ತೆ ಮಧ್ಯೆಯಲ್ಲಿಯೇ ಸಮನ್ವಿ ಮೃತಪಟ್ಟಿದ್ದಾಳೆ.

ಈ ಸಂಬಂಧ ಕುಮಾರಸ್ವಾಮಿ ಲೇಔಟ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd