“ ಭಾರತ ರತ್ನ ನಮ್ಮ ತಂದೆಯ ಕಾಲಿನ ಧೂಳಿಗೂ ಸಮವಿಲ್ಲ , ಎ.ಆರ್.ರೆಹಮಾನ್ ಯಾರೆಂದು ಗೊತ್ತಿಲ್ಲ”

1 min read

“ ಭಾರತ ರತ್ನ ನಮ್ಮ ತಂದೆಯ ಕಾಲಿನ ಧೂಳಿಗೂ ಸಮವಿಲ್ಲ , ಎ.ಆರ್.ರೆಹಮಾನ್ ಯಾರೆಂದು ಗೊತ್ತಿಲ್ಲ”

ಹೈದರಾಬಾದ್ :  ಇತ್ತೀಚೆಗೆ ಟಾಲಿವುಡ್ ನ ಲೆಂಜೆಂಡ್ ನಟ ನಂದಮುರಿ ತಾರಾಕ ರಾಮರಾವ್ ಅವರಿಗೆ ಭಾರತ ರತ್ನ ಕೊಡಬೇಕೆಂಬ ಕೂಗು ಎದ್ದಿದ್ದು, ಚಿರಂಜೀವಿ ಕೂಡ ಇದಕ್ಕೆ ಧ್ವನಿ ಸೇರಿಸಿದ್ದರು.. ಆದ್ರ ಅವರ ಮಗ ಹಾಗೂ ಟಾಲಿವುಡ್ ನ ಸ್ಟಾರ್ ನಟ ಬಾಲಕೃಷ್ಣ ಇದೀಗ  ಭಾರತರತ್ನ ನಮ್ಮ ತಂದೆ ಕಾಲಿನ ಧೂಳಿಗೂ ಸಮವಿಲ್ಲ ಎಂಬ ವಿವಾದಾತ್ಮಕ ಹೇಳಿಕೆ ನೀಡಿ ಟ್ರೋಲ್ ಗೆ ಗುರಿಯಾಗಿದ್ದಾರೆ..

ಸದಾ ವಿವಾದಾತ್ಮಕ ಹೇಳಿಕೆ ನೀಡುವುದರ ಮೂಲಕವೇ ಟ್ರೋಲ್‍ಗೆ ಒಳಗಾಗುವ ನಟ ಹಾಗೂ ರಾಜಕಾರಣಿ ನಂದಮುರಿ ಬಾಲಕೃಷ್ಣ  ಇತ್ತೀಚೆಗೆ ಖಾಸಗಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿ ಸಂಗೀತ ನಿರ್ದೇಶಕ ಎ.ಆರ್.ರೆಹಮಾನ್ ಯಾರೆಂದು ನನಗೆ ಗೊತ್ತಿಲ್ಲ. ಭಾರತ ರತ್ನ ನನ್ನ ತಂದೆ ಅವರ ಕಾಲಿನ ಬೆರಳಿನ ಉಗುರಿಗೆ ಸಮ ಎಂದಿದ್ದಾರೆ. ಈ ಮೂಲಕ  ಟ್ರೋಲಿಗರ ಆಹಾರವಾಗಿದ್ದಾರೆ..

ನನಗೆ ಎ.ಆರ್.ರೆಹಮಾನ್ ಯಾರೆಂದು ಗೊತ್ತಿಲ್ಲ, ನಾನು ಕೇರ್ ಮಾಡುವುದಿಲ್ಲ. ದಶಕಗಳ ಹಿಂದೆ ಅವರು ಹಿಟ್ ಹಾಡುಗಳನ್ನು ನೀಡಿ ಆಸ್ಕರ್ ಅವಾರ್ಡ್ ಪಡೆದಿರಬಹುದು. ಆದರೆ ಆಸ್ಕರ್ ಪ್ರಶಸ್ತಿ ಮಾತ್ರವಲ್ಲ ಭಾರತ ರತ್ನವನ್ನೂ ನಾನು ಗೌರವಿಸುವುದಿಲ್ಲ. ಭಾರತ ರತ್ನ ನಮ್ಮ ತಂದೆ ಎನ್.ಟಿ.ರಾಮ ರಾವ್ ಅವರ ಕಾಲ್ಬೆರಳಿನ ಉಗುರಿಗೂ ಸಮವಿಲ್ಲ ಎಂದು ಹೇಳಿದ್ದಾರೆ. ಇದೇ ವೇಳೆ ಟಾಲಿವುಡ್‍ಗೆ ನಮ್ಮ ಕುಟುಂಬ ನೀಡಿದ ಕೊಡುಗೆಯನ್ನು ಯಾವುದೇ ಪ್ರಶಸ್ತಿ ಸರಿದೂಗಿಸಲು ಸಾಧ್ಯವಿಲ್ಲ. ಪ್ರಶಸ್ತಿಗಳು ಮಾತ್ರ ಕೆಟ್ಟದ್ದನ್ನು ಅನುಭವಿಸಬೇಕು. ನನ್ನ ಕುಟುಂಬ ಅಥವಾ ನನ್ನ ತಂದೆ ಅಲ್ಲ ಎಂದು ಕಟುವಾಗಿ ನುಡಿದಿದ್ದಾರೆ.

ನೀವು ಇಲ್ಲದೇ ನನ್ನ ಬದುಕಿನಲ್ಲಿ ಖಾಲಿತನ ಉಂಟಾಗಿದೆ:  ತಾಯಿಯನ್ನ ನೆನೆದು ಭಾವುಕರಾದ ಸೋನು

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd