ನವದೆಹಲಿ: ರಾಜ್ಯದ ನಂದಿನಿ ಬ್ರ್ಯಾಂಡ್ ಗೆ ವಿಶ್ವದಲ್ಲಿ ಸಾಕಷ್ಟು ಬೇಡಿಕೆ ಇದೆ ಎಂಬುವುದು ಆಗಾಗ ಸಾಬೀತಾಗುತ್ತಲೇ ಇತ್ತು. ಈಗ ಸ್ಕಾಟ್ಲೆಂಡ್ ಕ್ರಿಕೆಟ್ ತಂಡದ ಆಟಗಾರರ ಜೆರ್ಸಿಯಲ್ಲಿ ನಂದಿನಿ ಬ್ರ್ಯಾಂಡ್ ಕಾಣಿಸಿಕೊಂಡಿದೆ.
ಟಿ20 ಕ್ರಿಕೆಟ್ ವಿಶ್ವಕಪ್‌ಗಾಗಿ ತನಗೆ ಪ್ರಾಯೋಜಕತ್ವ ನೀಡಿರುವ ಕರ್ನಾಟಕ ಹಾಲು ಒಕ್ಕೂಟದ ‘ನಂದಿನಿ’ ಬ್ರ್ಯಾಂಡ್ ಲೋಗೋವುಳ್ಳ ಜೆರ್ಸಿಯನ್ನು ಸ್ಕಾಟ್ಲೆಂಡ್ ತಂಡವು ಅನಾವರಣಗೊಳಿಸಿದೆ. ಈ ಬಾರಿಯ ಟಿ20 ವಿಶ್ವಕಪ್ ಜೂ. 2ರಿಂದ ಆರಂಭವಾಗಲಿದೆ. ಅಮೆರಿಕ ಹಾಗೂ ವೆಸ್ಟ್ ಇಂಡೀಸ್ ಜಂಟಿಯಾಗಿ ಈ ಟೂರ್ನಿ ಪ್ರಾಯೋಜಕತ್ವ ವಹಿಸಿವೆ.
ಸ್ಕಾಟ್ಲೆಂಡ್ ಪುರುಷರ ಪ್ಲೇಯಿಂಗ್ ಶರ್ಟ್‌ಗಳ ಎಡ ತೋಳಿನ ಮೇಲೆ ನಂದಿನಿ ಲೋಗೋ ಇರುತ್ತದೆ. ಲೋಗೋದಲ್ಲಿ ‘ನಂದಿನಿ’ ಎಂದು ಕನ್ನಡ ಮತ್ತು ಇಂಗ್ಲಿಷ್ ಎರಡರಲ್ಲಿಯೂ ಬರೆಯಲಾಗಿದೆ.
ನಂದಿನಿ ಬ್ರಾಂಡ್‌ನಲ್ಲಿ (Nandini Milk) ತನ್ನ ಡೈರಿ ಉತ್ಪನ್ನಗಳನ್ನು ಮಾರಾಟ ಮಾಡುವ ಕರ್ನಾಟಕ ಹಾಲು ಉತ್ಪಾದಕರ ಒಕ್ಕೂಟ (KMF), ಟಿ20 ಕ್ರಿಕೆಟ್ ವಿಶ್ವಕಪ್‌ಗಾಗಿ (T20 World Cup 2024) ಸ್ಕಾಟ್ಲೆಂಡ್ ಮತ್ತು ಐರ್ಲೆಂಡ್ ತಂಡಗಳಿಗೆ ಪ್ರಾಯೋಜಕತ್ವ ನೀಡಿದೆ. ಈ ಪ್ರಾಯೋಜಕತ್ವದ ಮೊತ್ತ ಬರೋಬ್ಬರಿ 2.5 ಕೋಟಿ ರೂ. ಎಂದು ತಿಳಿದು ಬಂದಿದೆ.
ಈ ಟೂರ್ನಿಯು ಜೂನ್ 1 ರಿಂದ 18ರ ವರೆಗೆ ಗುಂಪು ಹಂತದ ಪಂದ್ಯಗಳು ನಡೆಯಲಿದೆ. ಜೂನ್ 19 ರಿಂದ 24ರ ವರೆಗೆ ಸೂಪರ್-8 ಪಂದ್ಯಗಳು, ಜೂನ್ 26 ಮತ್ತು ಜೂನ್ 27 ರಂದು ಸೆಮಿಫೈನಲ್ ಪಂದ್ಯಗಳು ನಡಯೆಲಿವೆ. ಜೂನ್ 29ರಂದು ಫೈನಲ್ ಪಂದ್ಯ ನಡೆಯಲಿದೆ.
ಗುಂಪು-ಎ:
ಭಾರತ, ಪಾಕಿಸ್ತಾನ, ಐರ್ಲೆಂಡ್, ಕೆನಡಾ, ಯುಎಸ್‌ಎ
ಗ್ರೂಪ್-ಬಿ:
ಇಂಗ್ಲೆಂಡ್, ಆಸ್ಟ್ರೇಲಿಯಾ, ನಮೀಬಿಯಾ, ಸ್ಕಾಟ್‌ಲೆಂಡ್, ಒಮನ್
ಗ್ರೂಪ್-ಸಿ:
ನ್ಯೂಜಿಲೆಂಡ್, ವೆಸ್ಟ್ ಇಂಡೀಸ್, ಅಫ್ಘಾನಿಸ್ತಾನ, ಉಗಾಂಡ, ಪಪುವಾ ನ್ಯೂ ಗಿನಿಯಾ
ಗ್ರೂಪ್-ಡಿ:
ದಕ್ಷಿಣ ಆಫ್ರಿಕಾ, ಶ್ರೀಲಂಕಾ, ಬಾಂಗ್ಲಾದೇಶ, ನೆದರ್ಲೆಂಡ್ಸ್, ನೇಪಾಳ ತಂಡಗಳು ಸ್ಥಾನ ಪಡೆದಿವೆ.