ಹಾಲಿನ ದರ ಹೆಚ್ಚಳಕ್ಕೆ KMF ಸಿದ್ಧತೆ 0- ಲೀಟರ್ ಗೆ 3 ರೂ ಹೆಚ್ಚಳ…
ರಾಜ್ಯ ಸರ್ಕಾರ ಸಾಮಾನ್ಯ ಜನತೆಗೆ ಮತ್ತೊಮ್ಮೆ ಶಾಕ್ ನೀಡಿದೆ. ಇದೀಗ ನಂದಿನಿ ಹಾಲಿನ ದರವನ್ನ 3 ರುಪಾಯಿ ಹೆಚ್ಚಳ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ.
ಶೀಘ್ರದಲ್ಲಿಯೇ ನಂದಿನಿ ಹಾಲಿನ ದರವನ್ನು ಪರಿಷ್ಕರಣೆ ಮಾಡಲಾಗುವುದು. ಪ್ರತಿ ಲೀಟರ್ ಹಾಲಿಗೆ 3 ರೂಪಾಯಿ ಹೆಚ್ಚಳ ಮಾಡಲಾಗುವುದು ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ.
ರಾಜ್ಯದ 16 ಜಿಲ್ಲಾ ಹಾಲು ಒಕ್ಕೂಟಗಳು, ಕೆಎಂಎಫ್ ಹಾಲಿನ ದರ ಪರಿಷ್ಕರಿಸುವಂತೆ ಪ್ರಸ್ತಾವನೆ ಸಲ್ಲಿಸಿದ್ದು, ದರ ಹೆಚ್ಚಳ ಅನಿವಾರ್ಯವಾಗಿದೆ. ಅಲ್ಲದೇ ಹೈನುಗಾರರ ಹಿತದೃಷ್ಟಿಯಿಂದ ಹಾಲಿನ ದರ ಏರಿಕೆ ಮಾಡುವುದು ಅನಿವಾರ್ಯವಾಗಿದೆ ಎಂದು ತಿಳಿಸಿದ್ದಾರೆ.
ಹಾಲಿನ ದರ ಪರಿಷ್ಕರಣೆ ಸಂಬಂಧ ಈಗಾಗಲೇ ಸಾಮಾನ್ಯ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಇನ್ನು ನಂದಿನಿ ಹಾಲಿನ ದರ ಪರಿಷ್ಕರಣೆಯ ಹಣ ಸಂಪೂರ್ಣವಾಗಿ ರೈತರಿಗೆ ಸಂದಾಯವಾಗಲಿದೆ ಎಂದು ಅವರು ಹೇಳಿದ್ದಾರೆ.
nandini milk: KMF prepares for increase in milk price – Rs 3 increase per litre…