KMF (ಕರ್ನಾಟಕ ಹಾಲು ಒಕ್ಕೂಟ) ಅಧ್ಯಕ್ಷ ಭೀಮಾ ನಾಯ್ಕ ಅವರು, ಸದ್ಯಕ್ಕೆ ನಂದಿನಿ ಹಾಲಿನ ದರದಲ್ಲಿ ಯಾವುದೇ ಏರಿಕೆ ಮಾಡಲಾಗುವುದಿಲ್ಲ ಎಂದು ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕೆಲ ದಿನಗಳ ಹಿಂದೆ ಸಿಎಂ ಸಿದ್ದರಾಮಯ್ಯ ಹಾಲಿನ ದರ ಏರಿಕೆ ಬಗ್ಗೆ ಹೇಳಿಕೆ ನೀಡಿದ್ದರು.
ಚರ್ಚೆ ಮತ್ತು ತೀರ್ಮಾನ: ಎಲ್ಲಾ ಅಧಿಕಾರಿಗಳ ಜೊತೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು.
ಹಾಲಿನ ದರ ಏರಿಕೆ: ಸದ್ಯಕ್ಕೆ ಹಾಲಿನ ದರ ಏರಿಕೆ ಬಗ್ಗೆ ಯಾವುದೇ ಮಾಹಿತಿ ಇಲ್ಲ
ರೈತರ ಬೇಡಿಕೆ: ನಂದಿನಿ ಹಾಲಿನ ದರ ಏರಿಕೆಗೆ ರಾಜ್ಯದ ರೈತರ ಬೇಡಿಕೆ ಇದೆ.
ಈಗಾಗಲೇ ಪೆಟ್ರೋಲ್, ಡೀಸೆಲ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ಜನಸಾಮಾನ್ಯರು ತತ್ತರಿಸಿದ್ದಾರೆ. ಸದ್ಯದ ಮಟ್ಟಿಗೆ ಕೆಎಂಎಫ್ ಅಧ್ಯಕ್ಷರ ಈ ಹೇಳಿಕೆ ಜನರಿಗೆ ಸ್ವಲ್ಪ ಮಟ್ಟಿಗೆ ಖುಷಿ ನೀಡಿರುವುದಂತು ಸತ್ಯ