ಬೆಳಗಾವಿ: ನೂತನ ವರ್ಷಕ್ಕೆ ನಂದಿನಿ ಉತ್ಪನ್ನಗಳ ದರ ಏರಿಕೆಯಾಗುವ ಸಾಧ್ಯತೆ ಇದೆ.
ಹಾಲು, ಮೊಸರು (Nandini Milk, Curd) ದರ ಹೆಚ್ಚುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಈ ಕುರಿತು ಅಧಿವೇಶನದಲ್ಲಿ (Belagavi Session) ಸರ್ಕಾರ ದರ ಏರಿಸುವ ಸಾಧ್ಯತೆ ನೀಡಿದೆ. ಹಾಲಿನ ದರ ಏರಿಕೆಯ ಕುರಿತು ಪರಿಶೀಲನೆ ನಡೆಯುತ್ತಿದೆ ಎಂದು ಸರ್ಕಾರ ಹೇಳಿದೆ.
ದರ ಹೆಚ್ಚಳ ಕುರಿತು ಮಾಲೂರು ಶಾಸಕ ಕೆ.ವೈ. ನಂಜೇಗೌಡ ಪ್ರಶ್ನೆಗೆ ಪಶು ಸಂಗೋಪನೆ ಖಾತೆ ಸಚಿವ ಕೆ ವೆಂಕಟೇಶ್ ಉತ್ತರ ನೀಡಿದ್ದು, ಸಂಶಯ ವ್ಯಕ್ತವಾಗುತ್ತಿದೆ. ಹಾಲು ಉತ್ಪಾದಕರು, ಒಕ್ಕೂಟಗಳು ನಷ್ಟದಲ್ಲಿದ್ದು, ಗ್ರಾಹಕರಿಗೆ ಹೊರೆಯಾಗದಂತೆ ದರ ಹೆಚ್ಚಿಸುವುದಾಗಿ ಉತ್ತರ ನೀಡಿದ್ದಾರೆ.
ಒಂದು ವೇಳೆ ಸರ್ಕಾರ ಅಂತಿಮ ನಿರ್ಧಾರ ತೆಗೆದುಕೊಂಡರೆ ನಾಲ್ಕೇ ತಿಂಗಳ ಒಳಗಡೆ ಮತ್ತೊಮ್ಮೆ ಹಾಲಿನ ದರ ಏರಿಕೆಯಾದಂತೆ ಆಗುತ್ತದೆ.