ಕೃಷಿ ಇಲಾಖೆಯ ನೂತನ ನಿರ್ದೇಶಕರಾಗಿ ನಂದಿನಿಕುಮಾರಿ Nandinikumari saaksha tv
ಬೆಂಗಳೂರು :ಕೃಷಿ ಇಲಾಖೆಯ ನೂತನ ನಿರ್ದೇಶಕರಾಗಿ ನಂದಿನಿಕುಮಾರಿ ಅಧಿಕಾರ ಸ್ವೀಕರಿಸಿದರು.
ನಿಕಟಪೂರ್ವ ನಿರ್ದೇಶಕ ಶ್ರೀನಿವಾಸ್ ವರ್ಗಾವಣೆಗೊಂಡಿರುವ ಹಿನ್ನೆಲೆಯಲ್ಲಿ ನೂತನ ನಿರ್ದೇಶಕರಾಗಿ ಜಲಾನಯನ ಅಭಿವೃದ್ಧಿ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ನಂದಿನಿಕುಮಾರಿ ಸೋಮವಾರ ಕೃಷಿ ಇಲಾಖೆಯ ನಿರ್ದೇಶಕರಾಗಿ ಅಧಿಕಾರ ಸ್ವೀಕರಿಸಿದರು.
ನೂತನ ನಿರ್ದೇಶಕರಿಗೆ ಶುಭಕೋರಿರುವ ಕೃಷಿ ಸಚಿವ ಬಿ.ಸಿ.ಪಾಟೀಲ್,ರೈತರಿಗೆ ಕೃಷಿಗೆ ಅನುಕೂಲವಾಗುವಂತೆ ಕೈಜೋಡಿಸಿ ಕೆಲಸ ಮಾಡುವಂತೆ ಶುಭಕೋರಿದ್ದಾರೆ.









