ಬೆಂಗಳೂರು : ನಿನ್ನೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮನೆಯ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ಮಾಡಿದ ಬೆನ್ನಲ್ಲೆ ಇಂದು ನಂಜಾವದೂತ ಸ್ವಾಮೀಜಿ (Nanjavutha Swamiji) ಅವರು ಡಿಕೆಶಿ ಅವರನ್ನು ಭೇಟಿ ಮಾಡಿದ್ದಾರೆ.
ಇಂದು ಬೆಳಗ್ಗೆ ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿ.ಕೆ.ಶಿವಕುಮಾರ್ ಅವರ ನಿವಾಸಕ್ಕೆ ಸ್ಪಟಿಕಪುರ ಮಠದ ನಂಜಾವದೂತ ಸ್ವಾಮೀಜಿ ಆಗಮಿಸಿದರು.
ಈ ವೇಳೆ ನಂಜಾವದೂತ ಸ್ವಾಮೀಜಿ ಜೊತೆ ಡಿಕೆಶಿ ಕೆಲ ಕಾಲ ಮಾತನಾಡಿದ್ದಾರೆ.
ಇದನ್ನೂ ಓದಿ : ಡ್ರಗ್ಸ್ ಮಾಫಿಯಾ : ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಸಿಸಿಬಿ ವಶಕ್ಕೆ
ಇನ್ನು ಡಿ.ಕೆ.ಶಿವಕುಮಾರ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಈಗಾಗಲೇ ಸಿಬಿಐ ಅಧಿಕಾರಿಗಳು ಸಮನ್ಸ್ ನೀಡಿದ್ದಾರೆ. ಇನ್ನೆರಡು ದಿನಗಳಲ್ಲಿ ವಿಚಾರಣೆಗೆ ಹಾಜರಾಗುವಂತೆ ತಿಳಿಸಲಾಗಿದೆ.
ನಿನ್ನೆ ಬೆಳ್ಳಂಬೆಳಗ್ಗೆ ಸಿಬಿಐ ಅಧಿಕಾರಿಗಳು ಡಿಕೆ ಬ್ರದರ್ಸ್ ಗೆ ಶಾಕ್ ನೀಡಿದ್ದರು. ಏಕಕಾಲದಲ್ಲಿ 14 ಕಡೆ ಸುಮಾರು 60ಕ್ಕೂ ಹೆಚ್ಚು ಮಂದಿ ಅಧಿಕಾರಿಗಳು ದಾಳಿ ನಡೆಸಿದ್ದರು.