ನನ್ನಮ್ಮ ಸೂಪರ್ ಸ್ಟಾರ್ ರಿಯಾಲಿಟಿ ಶೋ ಸಮನ್ವಿ ಇನ್ನಿಲ್ಲ

1 min read
Amruta Naydu Saaksha Tv

ನನ್ನಮ್ಮ ಸೂಪರ್ ಸ್ಟಾರ್ ರಿಯಾಲಿಟಿ ಶೋ ಸಮನ್ವಿ ಇನ್ನಿಲ್ಲ Saaksha Tv

ಬೆಂಗಳೂರು : ನಟಿ ಅಮೃತಾ ನಾಯ್ಡು ಮಗಳು ಸಮನ್ವಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾಳೆ. ತಾಯಿ-ಮಗಳು ಕೋಣನಕುಂಟೆಯ ವಾಜರಹಳ್ಳಿ ಬಳಿ ಸ್ಕೂಟಿಯಲ್ಲಿ ತೆರಳುತ್ತಿದ್ದಾಗ ಲಾರಿ ಡಿಕ್ಕಿಯಾಗಿ ಈ ದುರ್ಘಟನೆ ಸಂಭವಿಸಿದೆ.

ಸಮನ್ವಿ ನನ್ನಮ್ಮ ಸೂಪರ್ ಸ್ಟಾರ್ ರಿಯಾಲಿಟಿ ಶೋನಲ್ಲಿ ಭಾಗವಹಿಸಿ ಪ್ರಖ್ಯಾತಿ ಪಡೆದಿದ್ದರು. ಅಪಘಾತದಲ್ಲಿ 6 ವರ್ಷದ ಸಮನ್ವಿ ಸ್ಥಳದಲ್ಲೇ ಮೃತಪಟ್ಟಿದ್ದು, ಅಮೃತಾ ನಾಯ್ಡು ಅವರಿಗೆ ಗಂಭೀರ ಗಾಯವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇದೀಗ ಲಾರಿ ಚಾಲಕನನ್ನು ಕುಮಾರಸ್ವಾಮಿ ಲೇಔಟ್ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಅಮೃತಾ ನಾಯ್ಡು ಖ್ಯಾತ ಹರಿಕಥೆ ದಾಸ ಗುರುರಾಜ ನಾಯ್ಡುರ ಮೊಮ್ಮಗಳಾಗಿದ್ದು, 25ಕ್ಕೂ ಅಧಿಕ ಧಾರಾವಾಹಿಗಳಲ್ಲಿ ಅಮೃತಾ ನಟಿಸಿದ್ದಾರೆ. ಗಂಗೋತ್ರಿ, ಪುಣ್ಯಕೋಟಿ, ಕುಸುಮಾಂಜಲಿ, ಮನೆಯೊಂದು ಮೂರು ಬಾಗಿಲು, ಅಮೃತ ವರ್ಷಿಣಿ ಧಾರವಾಹಿಗಳಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು.

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd