ಈಡಿಗ ಬಿಲ್ಲವ ಸಮುದಾಯಕ್ಕೆ ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ ಸ್ಥಾಪಿಸಿದ ಸರ್ಕಾರ…
ಬಿಲ್ಲವ/ಈಡಿಗ ಸಮುದಾಯಗಳ ಬಹುದಿನಗಳ ಬೇಡಿಕೆಗೆ ರಾಜ್ಯ ಸರ್ಕಾರ ಸ್ಪಂದಿಸಿದ್ದು, ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಿ ಸಿಎಂ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಮುಖ್ಯಮಂತ್ರಿಗಳು “ರಾಜ್ಯದ ಬಿಲ್ಲವ/ಈಡಿಗ ಸಮುದಾಯಗಳ ಬಹುದಿನದ ಬೇಡಿಕೆಯಾಗಿದ್ದ ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ, ಆದೇಶ ಹೊರಡಿಸಲಾಗಿದೆ. ಈ ನಿಗಮವು ಈಡಿಗ/ಬಿಲ್ಲವ ಸೇರಿದಂತೆ ಇತರ ಪ್ರಮುಖ 26 ಉಪಜಾತಿಗಳ ಸರ್ವತೋಮುಖ ಅಭಿವೃದ್ಧಿಗಾಗಿ ಕೆಲಸ ನಿರ್ವಹಿಸಲಿದೆ.” ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ.
ನಾರಾಯಣ ಗುರು ನಿಗಮ ಇನ್ನೆರಡು ದಿನದಲ್ಲಿ ಘೋಷಿಸುತ್ತೇವೆ ಎಂದಿದ್ದೆ. ಈಗ ಆದೇಶ ನಿಮ್ಮ ಕೈಗೆ ಧನ್ಯವಾದಗಳು ಬಸವರಾಜ್ ಬೊಮ್ಮಾಯಿಯವರಿಗೆ ಎಂದು ಕೋಟ ಶ್ರೀನಿವಾಸ ಪೂಜಾರಿ ಅವರು ಟ್ವೀಟ್ ಮಾಡಿದ್ದಾರೆ.
Narayan Guru : The government established Shri Narayan Guru Development Corporation for Ediga Billava community…