ಬೆಂಗಳೂರು : ಅನುದಾನ ವಿಚಾರಕ್ಕೆ ಸಚಿವ ನಾರಾಯಣಗೌಡ ಮತ್ತು ಕಡೂರು ಶಾಸಕ ಬೆಳ್ಳಿ ಪ್ರಕಾಶ್ ನಡುವೆ ವಿಧಾನಸೌಧದ ಲಾಂಜ್ ನಲ್ಲಿರುವ ಕ್ಯಾಂಟೀನ್ ನಲ್ಲಿ ಜಗಳ ನಡೆದಿದೆ.
ಈ ಗಲಾಟೆ ಹೊಡೆದಾಟದ ಹಂತಕ್ಕೂ ಹೋಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಮಾಜಿ ಸಿಎಂ ಸಿದ್ದರಾಮಯ್ಯ, ಈಶ್ವರಪ್ಪ, ಸೋಮಣ್ಣ, ಸಿ.ಡಿ.ರವಿ ಎಲ್ಲರ ಸಮ್ಮುಖದಲ್ಲಿ ಈ ಗಲಾಟೆ ನಡೆದಿದೆ.
ಗಲಾಟೆಯಲ್ಲಿ ಕಡೂರು ಶಾಸಕ ಬೆಳ್ಳಿ ಪ್ರಕಾಶ್, ಸಚಿವ ನಾರಾಯಣಗೌಡ ಅವರಿಗೆ ಏಕವಚನದಲ್ಲಿ ಬೈದಿದ್ದಾರೆ ಎನ್ನಲಾಗಿದೆ.
ಅನೇಕ ತಿಂಗಳ ಹಿಂದೆ ಕಡೂರು ಶಾಸಕ ಬೆಳ್ಳಿ ಪ್ರಕಾಶ್, ತಮ್ಮ ಕ್ಷೇತ್ರದಕ್ಕೆ ಅನುದಾನ ಕೊಡಿ ಎಂದು ಸಚಿವರ ಬಳಿ ಮನವಿ ಮಾಡಿಕೊಂಡಿದ್ದರಂತೆ.
ಆದ್ರೆ ಅನುದಾನ ಕೊಡದೇ ಸಚಿವರು ಸತಾಯಿಸುತ್ತಿದ್ದರಂತೆ.
ಇದರಿಂದ ಅಸಮಾಧಾನಗೊಂಡಿದ್ದ ಬೆಳ್ಳಿ ಪ್ರಕಾಶ್ ಕ್ಯಾಂಟೀನ್ ನಲ್ಲಿ ನಾರಾಯಣಗೌಡ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ ಎಂದು ತಿಳಿದುಬಂದಿದೆ.
ಈ ಗಲಾಟೆ ಹೊಡೆದಾಟದ ಹಂತಕ್ಕೂ ಹೋಗಿದ್ದು, ಈ ವೇಳೆ ಜೆಡಿಎಸ್ ಶಾಸಕ ಅನ್ನದಾನಿ ಬಂದು ಹೊಡೆದಾಟ ಬಿಡಿಸಿದ್ದಾರೆ ಎಂದು ಹೇಳಲಾಗುತ್ತಿದೆ.








