ಚಿನ್ನ ಗೆದ್ದರೇ ಐದು ಕೋಟಿ : ರಾಜ್ಯ ಕ್ರೀಡಾ ಇಲಾಖೆ ಮಹತ್ವದ ಘೋಷಣೆ
ಬೆಂಗಳೂರು : ಇದೇ ಆಗಸ್ಟ್ 24 ರಿಂದ ಪ್ಯಾರಾ ಒಲಿಂಪಿಕ್ಸ್ ನಡೆಯಲಿದ್ದು, ಭಾರತದ 54 ಕ್ರೀಡಾಪಟುಗಳು 9 ವಿವಿಧ ಕ್ರೀಡೆಗಳಲ್ಲಿ ಭಾಗವಹಿಸುತ್ತಿದ್ದಾರೆ.
ಅವರೊಂದಿಗೆ ರಾಜ್ಯದ ಇಬ್ಬರು ಕ್ರೀಡಾಪಟುಗಳು ಭಾಗವಹಿಸುತ್ತಿದ್ದಾರೆ. ಇಬ್ಬರೂ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನವಾಗಿ ರಾಜ್ಯ ಕ್ರೀಡಾ ಇಲಾಖೆ ತಲಾ ರೂ. 10 ಲಕ್ಷ ರೂ. ಗಳನ್ನು ಒದಗಿಸಿದೆ.
ಜೊತೆಗೆ ಮತ್ತೊಂದು ಮಹತ್ವದ ಘೋಷಣೆಯನ್ನು ರಾಜ್ಯ ಕ್ರೀಡಾ ಇಲಾಖೆ ಮಾಡಿದೆ.
ಪ್ಯಾರಾ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದರೆ ರಾಜ್ಯ ಸರ್ಕಾರದಿಂದ ರೂ. 5 ಕೋಟಿ, ಬೆಳ್ಳಿ ಗೆದ್ದರೆ ರೂ. 3 ಕೋಟಿ ಹಾಗೂ ಕಂಚಿನ ಪದಕ ಗೆದ್ದರೆ ರೂ. 2 ಕೋಟಿ ಬಹುಮಾನ ನೀಡಲಾಗುವುದು ಎಂದು ಸಚಿವ ಡಾ. ನಾರಾಯಣಗೌಡ ಘೊಷಣೆ ಮಾಡಿದ್ದಾರೆ.

ವಿಧಾನ ಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವರು ಇಬ್ಬರೂ ಕ್ರೀಡಾಪಟುಗಳಿಗೆ ಶುಭ ಹಾರೈಸಿ, ಪ್ರೋತ್ಸಾಹಧನವಾಗಿ ತಲಾ ರೂ. 10 ಲಕ್ಷದ ಚೆಕ್ ವಿತರಿಸಿದರು.
ಬಳಿಕ ಮಾತನಾಡಿದ ನಾರಾಯಣಗೌಡ ಅವರು, ಪ್ಯಾರಾ ಪವರ್ ಲಿಪ್ಟಿಂಗ್ ನಲ್ಲಿ ಶಕೀನ್ ಖಾತುನ್ ಹಾಗೂ ಪ್ಯಾರಾ ಈಜಿನಲ್ಲಿ ನಿರಂಜನ್ ಮುಕುಂದನ್ ಪಾಲ್ಗೊಳ್ಳುತ್ತಿದ್ದಾರೆ.
ಇಬ್ಬರೂ ಕ್ರೀಡಾಪಟುಗಳು ರಾಜ್ಯದ, ದೇಶದ ಕೀರ್ತಿಪತಾಕೆ ಹಾರಿಸುತ್ತಾರೆ ಎಂಬ ನಂಬಿಕೆ ಇದೆ.
ಪ್ಯಾರಾ ಓಲಂಪಿಕ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದರೆ ರಾಜ್ಯ ಸರ್ಕಾರದಿಂದ ರೂ. 5 ಕೋಟಿ , ಬೆಳ್ಳಿ ಗೆದ್ದರೆ ರೂ. 3 ಕೋಟಿ ಹಾಗೂ ಕಂಚಿನ ಪದಕ ಗೆದ್ದರೆ ರೂ. 2 ಕೋಟಿ ಬಹುಮಾನ ನೀಡಲಾಗುವುದು ಎಂದು ಘೋಷಿಸಿದರು.








