Narendra modi | ಮಂಗಳೂರಿನಲ್ಲಿ ಮೋದಿ ಆಗಮನಕ್ಕೆ ಭರದ ಸಿದ್ಧತೆ
ಮಂಗಳೂರು : ಪ್ರಧಾನಿ ನರೇಂದ್ರ ಮೋದಿ ಸೆಪ್ಟಂಬರ್ 2 ರಂದು ಮಂಗಳೂರಿಗೆ ಆಗಮಿಸಲಿದ್ದಾರೆ. ಹೀಗಾಗಿ ಮಂಗಳೂರಿನಲ್ಲಿ ಸರಕಾರಿ ಕಾರ್ಯಕ್ರಮವನ್ನೇ ಅದ್ದೂರಿಯಾಗಿ ಮಾಡಲು ಬಿಜೆಪಿ ನಿರ್ಧರಿಸಿದೆ.

ಇತ್ತೀಚೆಗೆ ಕರಾವಳಿ ಭಾಗದಲ್ಲಿ ನಡೆದ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮಂಗಳೂರಿಗೆ ಭೇಟಿ ನೀಡುತ್ತಿರುವುದು ಭಾರಿ ಕುತೂಹಲ ಕೆರಳಿಸಿದೆ.
ಕೊಚ್ಚಿಯಲ್ಲಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ಮೋದಿ ಅವರು ನೇರವಾಗಿ ಮಂಗಳೂರಿಗೆ ಆಗಮಿಸಿದ್ದಾರೆ. ಸಂಜೆ 5 ಗಂಟೆಗೆ ಮಂಗಳೂರಿನ ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ಸಾರ್ವಜನಿಕ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಈ ಕಾರ್ಯಕ್ರಮದಲ್ಲಿ 1200 ಕೋಟಿ ಸರ್ಕಾರಿ ಯೋಜನೆಗಳಿಗೆ ಶಿಲಾನ್ಯಾಸ, ಲೋಕಾರ್ಪಣೆ ನೆರವೇರಿಸಲಿದ್ದಾರೆ.
ಮೋದಿ ಕಾರ್ಯಕ್ರಮಕ್ಕಾಗಿ ಒಟ್ಟು ವಿಶಾಲವಾದ ಗೋಲ್ಡ್ ಫಿಂಚ್ ಮೈದಾನದಲ್ಲಿ ಬೃಹತ್ ಪೆಂಡಾಲ್ ಹಾಕಲಾಗಿದೆ. ಮೋದಿ ಕಾರ್ಯಕ್ರಮಕ್ಕೆ ಎಲ್ಲಾ ರೀತಿಯ ಸಿದ್ಧತೆಗಳು ನಡೆಯುತ್ತಿವೆ. narendra-mod visit in Mangalore saaksha tv








