Narendra modi | ಕರ್ನಾಟಕದಲ್ಲಿ ವ್ಯಾಪಾರ, ಉದ್ಯೋಗ ಸಾಮರ್ಥ್ಯ ಹೆಚ್ಚಿದೆ : ಪ್ರಧಾನಿ
ಮಂಗಳೂರು : ಕರ್ನಾಟಕದಲ್ಲಿ ವ್ಯಾಪಾರ, ಉದ್ಯೋಗ ಸಾಮರ್ಥ್ಯ ಹೆಚ್ಚಿದೆ. ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆ ಕರ್ನಾಟಕದ ರೈತರು ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಲು ಸಾಧ್ಯವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ಪ್ರಧಾನಿ ನರೇಂದ್ರ ಮೋದಿ ಅವರು ಕಡಲ ನಗರಿ ಮಂಗಳೂರಿನಲ್ಲಿ ಎನ್ಎಂಪಿಎ ಮತ್ತು ಎಮ್ಆರ್ಪಿಎಲ್ಗೆ ಸೇರಿದ 3,800 ಕೋಟಿ ರೂ. ಮೊತ್ತದ ಎಂಟು ಯೋಜನೆಗಳ ಲೋಕಾರ್ಪಣೆ, ಶಿಲಾನ್ಯಾಸ ನೆರವೇರಿಸಿದ್ದಾರೆ.
ಬಳಿಕ ಮಾತನಾಡಿದ ಪ್ರಧಾನಿಗಳು, ಕೊಚ್ಚಿಯಲ್ಲಿ ಸ್ವದೇಶಿ ಏರ್ ಕ್ರಾಫ್ಟ್ ಲೋಕಾರ್ಪಣೆಗೊಂಡಿರುವುದು ಭಾರತ ದೇಶದ ಪ್ರತಿಯೊಬ್ಬರ ಹೆಮ್ಮೆಯಾಗಿದೆ.
ಮಂಗಳೂರಿನಲ್ಲಿ 3800 ಕೋಟಿ ಯೋಜನೆಗಳ ಲೋಕಾರ್ಪಣೆ, ಶಿಲಾನ್ಯಾಸ, ಭೂಮಿಪೂಜೆ ಆಗಿದೆ.
ಕರ್ನಾಟಕದಲ್ಲಿ ವ್ಯಾಪಾರ, ಉದ್ಯೋಗ ಸಾಮರ್ಥ್ಯ ಹೆಚ್ಚಿದ್ದು, ರೈತರು ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಲು ಸಾಧ್ಯವಾಗಿದೆ ಎಂದರು.

ಇದಲ್ಲದೆ ಕಳೆದ ಎಂಟು ವರ್ಷಗಳಲ್ಲಿ ದೇಶದ ಮೂಲಸೌಕರ್ಯದಲ್ಲಿ ಸಾಕಷ್ಟು ಬದಲಾವಣೆಯಾಗಿದೆ ಎಂದ ಪ್ರಧಾನಿ ನರೇಂದ್ರ ಮೋದಿ ಅವರು, ಭಾರತಮಾಲಾ ಯೋಜನೆಯಲ್ಲಿ ರಸ್ತೆ ನಿರ್ಮಾಣ, ಕರಾವಳಿ ಮೂಲ ಸೌಕರ್ಯಕ್ಕೆ ಸಾಗರಮಾಲಾ ಶಕ್ತಿ ನೀಡಿದ್ದು, ದೇಶದ ಬಂದರುಗಳ ಸಾಮರ್ಥ್ಯ ದ್ವಿಗುಣಗೊಂಡಿದೆ ಎಂದಿದ್ದಾರೆ.
ಪ್ರಧಾನಿ ಲೋಕಾರ್ಪಣೆ ಮಾಡಿದ ಯೋಜನೆಗಳು ಹೀಗಿವೆ
ಕಂಟೇನರ್ಗಳು ಹಾಗೂ ಇತರೆ ಸರಕು ನಿರ್ವಹಣೆಗಾಗಿ ಬರ್ತ್ ಸಂಖ್ಯೆ 14ರ ಯಾಂತ್ರೀಕರಣ (ರೂ.281 ಕೋಟಿ)
ಬಿಎಸ್ VI ಉನ್ನತೀಕರಣ ಯೋಜನೆ (ರೂ.1829 ಕೋಟಿ), ಸಮುದ್ರ ನೀರಿನ ನಿರ್ಲವಣೀಕರಣ ಘಟಕ (ರೂ.677 ಕೋಟಿ)
ಶಿಲಾನ್ಯಾಸ ಮಾಡಿದ ಯೋಜನೆಗಳು ಹೀಗಿವೆ
ಎನ್ಎಂಪಿಟಿಯಲ್ಲಿ ಸಮಗ್ರ ಎಲ್ಪಿಜಿ ಹಾಗೂ ಬೃಹತ್ ಪಿಓಎಲ್ ಸೌಲಭ್ಯ (ಅಂದಾಜು ವೆಚ್ಚ ರೂ.500 ಕೋಟಿ)
ಶೇಖರಣಾ ಟ್ಯಾಂಕ್ಗಳು ಹಾಗೂ ಖಾದ್ಯ ತೈಲ ಸಂಸ್ಕರಣಾಗಾರ ನಿರ್ಮಾಣ (ರೂ.100 ಕೋಟಿ)
ಬಿಟುಮಿನ್ ಶೇಖರಣಾ ಟ್ಯಾಂಕ್ ಘಟಕಗಳ ನಿರ್ಮಾಣ (ರೂ.100 ಕೋಟಿ)
ಬಿಟುಮಿನ್, ಖಾದ್ಯ ತೈಲ ಶೇಖರಣಾ ಟ್ಯಾಂಕ್ಗಳು ಹಾಗೂ ಸಂಬಂಧಿತ ಸೌಲಭ್ಯಗಳ ನಿರ್ಮಾಣ (ರೂ.100ಕೋಟಿ).








