Vande Bharat Express : ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಪ್ರಧಾನಿ ಮೋದಿ ಚಾಲನೆ…
ಬೆಂಗಳೂರು ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ನಿಲ್ದಾಣದಲ್ಲಿ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಹಸಿರು ನಿಶಾನೆ ತೋರಿದ್ದಾರೆ.
ದೇಶದ ಅತಿ ವೇಗದ ರೈಲು ವಂದೇ ಭಾರತ್ ಎಕ್ಸ್ಪ್ರೆಸ್ ಇದಾಗಿದೆ. ವಂದೇ ಭಾರತ್ ಚೆನ್ನೈ-ಬೆಂಗಳೂರು-ಮೈಸೂರು ನಡುವೆ ಸಂಚರಿಸಲಿದೆ. ದಕ್ಷಿಣ ಭಾರತದ ಮೊದಲ, ದೇಶದ ಐದನೇ ವಂದೇ ಭಾರತ್ ರೈಲಾಗಿದೆ.
ಇದರ ಜೊತೆಗೆ ಕರ್ನಾಟಕ ಬಿಜೆಪಿ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ‘ಕರ್ನಾಟಕ-ಭಾರತ್ ಗೌರವ್ ಕಾಶಿ ದರ್ಶನ್’ ರೈಲಿ ಪ್ರಧಾನಿ ಮೋದಿ ಚಾಲನೆ ನೀಡಿದರು.
ಇದಕ್ಕೂ ಮೊದಲು ಹೆಚ್ ಎಎಲ್ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಪ್ರಧಾನಿಯವರನ್ನು ರಾಜ್ಯಪಾಲ ತ್ಯಾವರ್ ಚಂದ್ ಗೆಹ್ಲೊಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಅವರ ಸಂಪುಟ ಸದಸ್ಯರು ಬರಮಾಡಿಕೊಂಡಿದ್ದಾರೆ. ಈ ವೇಳೆ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಮೊದಲಾದವರಿದ್ದರು.
Narendra Modi flags off Vande Bharat Express at KSR railway station in Bengaluru








