ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಟರ್ಮಿನಲ್ 2 ಉದ್ಘಾಟನೆ..
ಸುಮಾರು 5 ಸಾವಿರ ಕೋಟಿ ರೂ ವೆಚ್ಚದಲ್ಲಿ ನಿರ್ಮಾಣವಾಗಿರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಟರ್ಮಿನಲ್ 2 ಅನ್ನ ಪ್ರಧಾನಿ ಮೋದಿ ಉದ್ಘಾಟಿಸಿದ್ದರು.
ಟರ್ಮಿನಲ್ 2 ಅನ್ನ ಉದ್ಯಾನ ನಗರಿ ಹೆಸರಿಗೆ ಗೌರವಾರ್ಥವಾಗಿ ವಿನ್ಯಾಸಗೊಳಿಸಲಾಗಿದೆ; ಪ್ರಯಾಣಿಕರಿಗೆ ಉದ್ಯಾನದಲ್ಲಿ ನಡೆಯುವಂತಯ ಅನುಭವವನ್ನ ನೀಡಲಿದೆ.
ಟರ್ಮಿನಲ್ 2 ಉದ್ಘಾಟನೆಯ ನಂತರ ಪ್ರಯಾಣಿಕರ ನಿರ್ವಹಣೆ ಸಾಮರ್ಥ್ಯ ಹಾಗೂ ಚೆಕ್-ಇನ್ ಮತ್ತು ವಲಸೆಗಾಗಿ ಕೌಂಟರ್ಗಳ ಸಂಖ್ಯೆ ಹೆಚ್ಚಾಗಲಿದೆ. ಇದು ವಾರ್ಷಿಕವಾಗಿ ಸುಮಾರು 2.5 ಕೋಟಿಯಿಂದ ಸುಮಾರು 5-6 ಕೋಟಿ ಪ್ರಯಾಣಿಕರನ್ನ ನಿಭಾಯಿಸಲು ಸಾಧ್ಯವಾಗುತ್ತದೆ.
ಇದಕ್ಕೂ ಮೊದಲು ದಕ್ಷಿಣ ಭಾರತದ ಮೊದಲ ವಂದೇ ಭಾರತ್ ಎಕ್ಸ್ಪ್ರೆಸ್ಗೆ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಚಾಲನೆ ನೀಡಿದರು ಇದರ ಜೊತೆಗೆ ಬೆಂಗಳೂರಿನಲ್ಲಿ ಭಾರತ್ ಗೌರವ್ ಕಾಶಿ ರೈಲಿಗೆ ಸಹ ಫ್ಲ್ಯಾಗ್ ಆಫ್ ಮಾಡಿದರು.
Narendra Modi in Bangalore : Prime Minister Narendra Modi inaugurates Terminal 2 at Kempegowda International Airport.








