ಬೆಂಗಳೂರು: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿಯಡಿ 9 ಕೋಟಿ ರೈತರಿಗೆ ತಲಾ 2000 ರೂಪಾಯಿಯಂತೆ ಒಟ್ಟು 18,000 ಕೋಟಿ ರೂಪಾಯಿಗಳನ್ನು ಕೇಂದ್ರ ಸರಕಾರ ಜಮೆ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಈ ಹಣವನ್ನು ರೈತರ ಖಾತೆಗಳಿಗೆ ನೇರವಾಗಿ ಬಿಡುಗಡೆ ಮಾಡಿ ತಮ್ಮ ರೈತಪರ ಕಳಕಳಿಯನ್ನು ಸಾಬೀತುಪಡಿಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಪಿಎಂ ಕಿಸಾನ್ ಯೋಜನೆಯಡಿ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಮೂರು ಕಂತುಗಳಲ್ಲಿ ವರ್ಷಕ್ಕೆ ಒಟ್ಟು 6,000 ರೂಪಾಯಿ ನೀಡಲಾಗುತ್ತಿದೆ. ಈ ಯೋಜನೆ ಆರಂಭವಾದ ದಿನದಿಂದ ಇದುವರೆಗೆ 1 ಲಕ್ಷ 10 ಸಾವಿರ ಕೋಟಿ ರೂಪಾಯಿ ರೈತರ ಖಾತೆಗಳಿಗೆ ಜಮೆ ಆಗಿದೆ. ಇದು ಕೇಂದ್ರದ ಬಿಜೆಪಿ ಸರಕಾರವು ಅಧಿಕಾರಕ್ಕೆ ಬಂದ ಬಳಿಕ ಅನುಷ್ಠಾನಕ್ಕೆ ಬಂದ ಅತ್ಯಂತ ಮಹತ್ವದ ಯೋಜನೆಯಾಗಿದೆ ಎಂದು ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕೇಂದ್ರ ಸರಕಾರವು ಕೃಷಿಯಲ್ಲಿ ಉತ್ಪಾದನಾ ವೆಚ್ಚ ಕಡಿಮೆ ಮಾಡಿದೆ. ಮಣ್ಣಿನ ಆರೋಗ್ಯ ಕಾರ್ಡ್, ಕೋಟ್ಯಂತರ ರೈತರಿಗೆ ಫಸಲ್ ಭೀಮಾ ಯೋಜನೆ ಮೂಲಕ ನೆರವು, ಯೂರಿಯಾಗೆ ಬೇವು ಲೇಪನನಂಥ ಮಹತ್ವದ ಯೋಜನೆಗಳನ್ನು ಜಾರಿಗೊಳಿಸಿರುವುದು ಇದಕ್ಕೆ ಉದಾಹರಣೆ ಎಂದಿರುವ ಕಟೀಲ್, 2014ರಿಂದ ರೈತಪರವಾಗಿ ನಿರಂತರ ಚಿಂತನೆ, ಯೋಜನೆ ಅನುಷ್ಠಾನದ ಮೂಲಕ ತಮ್ಮ ಕಾಳಜಿ ವ್ಯಕ್ತಪಡಿಸಿದೆ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ, ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಕಟೀಲ್ ಅಭಿನಂದನೆ ಸಲ್ಲಿಸಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








