Narendra modi : ಮೋದಿ ಮಾತಲ್ಲಿ ಎಲ್ಲಾದರೂ ಇರು ಎಂತಾದರೂ ಇರು….
`ದೆಹಲಿ ಕರ್ನಾಟಕ ಸಂಘ’ ದ 75ನೇ ವಾರ್ಷಿಕೋತ್ಸವ ಪ್ರಯುಕ್ತ ತಲಕ್ ಟೋರಾ ಒಳಾಂಗಣ ಕ್ರೀಡಾಂಗಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಶನಿವಾರ ಚಾಲನೆ ನೀಡಿದರು.
ಬಳಿಕ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅವರು, `ಎಲ್ಲಾದರೂ ಇರು, ಎಂತಾದರೂ ಇರು, ಎಂದೆಂದಿಗೂ ಕನ್ನಡವಾಗಿರು ಎಂದು ಅಚ್ಚ ಕನ್ನಡದಲ್ಲಿ ಮಾತನಾಡಿ ಎಲ್ಲರನ್ನೂ ಖುಷಿಗೊಳಿಸಿದರು. ದೇಶ ಅಮೃತ ಮಹೋತ್ಸವ ಆಚರಿಸುವಾಗ ಕರ್ನಾಟಕ ಸಂಘ ಕೂಡಾ ತನ್ನ ಅಮೃತ ಮಹೋತ್ಸವ ಆಚರಿಸಿಕೊಳ್ಳುತ್ತಿರುವುದು ಸಂತಸದ ಸಂಗತಿ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಆದಿಚುಂಚನಗಿರಿ ಮಠದ ಡಾ.ನಿರ್ಮಲಾನಂದನಾಥ ಸ್ವಾಮೀಜಿ, ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ನಂಜಾವಧೂತ ಶ್ರೀಗಳು, ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ, ಕರ್ನಾಟಕ ಸಂಘದ ಅಧ್ಯಕ್ಷ ಸಿ.ಎಂ ನಾಗರಾಜ್ ಮೊದಲಾದವರು ಪಾಲ್ಗೊಂಡಿದ್ದರು.
Narendra Modi Kannada speech in dehli Karnataka Sangha