Narendra Modi | ಬೃಹತ್ ರೋಜ್‌ಗಾರ್ ಯೋಜನೆಗೆ ಮೋದಿ ಚಾಲನೆ
ನವದೆಹಲಿ : ದೇಶದ ಯುವ ಜನತೆಗೆ ಪ್ರಧಾನಿ ನರೇಂದ್ರ ಮೋದಿ ದೀಪಾವಳಿ ಉಡುಗೊರೆ ನೀಡಿದ್ದು, 10 ಲಕ್ಷ ಜನರಿಗೆ ಉದ್ಯೋಗ ಒದಗಿಸುವ ಉದ್ದೇಶದಿಂದ ಉದ್ಯೋಗ ಮೇಳಕ್ಕೆ ಚಾಲನೆ ನೀಡಿದ್ದಾರೆ.
ಅದರ ಭಾಗವಾಗಿ ಇಂದು 75 ಸಾವಿರ ಸರ್ಕಾರಿ ಉದ್ಯೋಗಿಗಳಿಗೆ ನೇಮಕಾತಿ ಪತ್ರ ನೀಡಿದ್ದಾರೆ.
ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಯೋಗ ಮೇಳದಲ್ಲಿ ಭಾಗಿಯಾದ ಅವರು, ದೇಶದ ಅಮೃತ ಮಹೋತ್ಸವದ ಸಮಯದಲ್ಲಿ 75 ಸಾವಿರ ಸರ್ಕಾರಿ ಉದ್ಯೋಗಿಗಳ ನೇಮಕಾತಿ ನಡೆಯುತ್ತಿದೆ.
ಹತ್ತು ಲಕ್ಷ ಉದ್ಯೋಗಗಳನ್ನು ಸೃಜಿಸಲು ಕೇಂದ್ರ ಸರ್ಕಾರ ಕಾರ್ಯಕ್ರಮ ರೂಪಿಸಿದ್ದು, ಮುಂದಿನ ದಿನಗಳಲ್ಲಿ ಕಾಲಕಾಲಕ್ಕೆ ನೇಮಕಾತಿ ಪತ್ರ ವಿತರಿಸಲಾಗುವುದು ಎಂದು ತಿಳಿಸಿದರು.

ಆತ್ಮನಿರ್ಭರ ಭಾರತ ನಿರ್ಮಾಣದಲ್ಲಿ ಹೆಜ್ಜೆ ಹಾಕಲಾಗುತ್ತಿದ್ದು, ಉದ್ಯಮ, ಉದ್ಯೋಗ, ಸೇವಾ ಕ್ಷೇತ್ರ, ಕಾರ್ಮಿಕ ವರ್ಗ, ಯುವಕರು ಸೇರಿದಂತೆ ಎಲ್ಲರ ಪಾತ್ರ ಮಹತ್ವದ್ದಾಗಿದೆ. ಮೂಲಸೌಕರ್ಯಗಳು ಉತ್ತಮವಾಗಿದ್ದರೆ ಈ ಭಾವನೆ ಜಾಗೃತವಾಗುತ್ತದೆ ಎಂದು ಹೇಳಿದರು.
ಕಳೆದ 8 ವರ್ಷಗಳಲ್ಲಿ ದೇಶದ ಅರ್ಥವ್ಯವಸ್ಥೆ ವೃದ್ಧಿಯಾಗುತ್ತಿದೆ. ಸರ್ಕಾರದ ನಿರಂತರ ಪ್ರಯತ್ನದ ಫಲವಾಗಿ ಜಾಗತಿಕವಾಗಿ ಭಾರತ 5ನೇ ಅತಿವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ಅರ್ಥವ್ಯವಸ್ಥೆಯಾಗಿ ರೂಪುಗೊಂಡಿದೆ.
ಆರ್ಥಿಕ ಪ್ರಗತಿಗೆ ಅಡೆತಡೆಗಳನ್ನು ನಿವಾರಿಸಲಾಗಿದೆ. ಉದ್ಯೋಗಾವಕಾಶದ ಸೃಷ್ಟಿಗೆ ಆದ್ಯತೆ ನೀಡಲಾಗಿದೆ ಎಂದು ಹೇಳಿದರು.








