ಮನ್ ಕಿ ಬಾತ್ | ದೇಶವನ್ನುದ್ದೇಶಿಸಿ ನಮೋ ಮಾತು..! Mann Ki Bath saaksha tv
ನವದೆಹಲಿ : ಮನ್ ಕಿ ಬಾತ್ ಭಾಗವಾಗಿ ಇಂದು ಪ್ರಧಾನಿ ನರೇಂದ್ರ ಮೋದು ದೇಶದ ಜನರನ್ನುದ್ದೇಶಿಸಿ ಮಾತನಾಡಲಿದ್ದಾರೆ.
ಈ ಕುರಿತು ಮೋದಿ ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಸದ್ಯ ದೇಶದಲ್ಲಿ ಕೊರೊನಾ ಸೋಂಕು ಮತ್ತು ಕೊರೊನಾ ರೂಪಾಂತರಿ ಒಮಿಕ್ರಾನ್ ಕೇಸ್ ಗಳು ಸಂಖ್ಯೆಗಳು ಹೆಚ್ಚಾಗುತ್ತಿವೆ.
ಹೀಗಾಗಿ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಭಾಷಣದಲ್ಲಿ ಮಾತನಾಡಬಹುದು ಎಂದು ಅಂದಾಜಿಸಲಾಗಿದೆ.
ಅಂದಹಾಗೆ ನಿನ್ನೆ ಪ್ರಧಾನಿ ನರೇಂದ್ರ ಮೋದಿ ಅವರು ದೇಶವನ್ನುದ್ದೇಶಿಸಿ ಮಾತನಾಡುತ್ತಾ, ಜನವರಿ 3 ರಿಂದ 15 ರಿಂದ 18 ವರ್ಷದ ಮಕ್ಕಳಿಗೆ ಕೋವಿಡ್ ವ್ಯಾಕ್ಸಿನ್ ನೀಡುವ ಕಾರ್ಯಾರಂಭ ಮಾಡಲಾಗುವುದು ಎಂದು ತಿಳಿಸಿದರು.
ಜೊತೆಗೆ, ಆರೋಗ್ಯ ಕಾರ್ಯಕರ್ತರಿಗೆ ಬೂಸ್ಟರ್ ಡೋಸ್ ನೀಡಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಮಾಹಿತಿ ನೀಡಿದರು.









