ಇಂದು ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ narendra-modi saaksha tv
ನವದೆಹಲಿ : ದೇಶವನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಇಂದು ಭಾಷಣ ಮಾಡಲಿದ್ದಾರೆ.
ಬೆಳಿಗ್ಗೆ 10 ಗಂಟೆಗೆ ನರೇಂದ್ರ ಮೋದಿ ಭಾಷಣ ಮಾಡಲಿದ್ದಾರೆ ಎಂದು ಪಿಎಂಒ ಇಂಡಿಯಾ ಟ್ವೀಟ್ ಮಾಡಿದೆ.
ಗುರುವಾರ ಕೊರೊನಾ ಲಸಿಕೆ ವಿತರಣೆಯಲ್ಲಿ ಭಾರತ ಮಹತ್ವದ ಮೈಲಿಗಲ್ಲು ಸೃಷ್ಟಿಸಿತ್ತು. ಬರೋಬ್ಬರಿ ನೂರು ಕೋಟಿ ಮಂದಿಗೆ ಈವರೆಗೂ ಲಸಿಕೆ ವಿತರಣೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ನಿನ್ನೆಯೇ ಭಾಷಣ ಮಾಡಬಹುದು ಎಂಬ ಸುದ್ದಿ ಹರಿದಾಡಿತ್ತು. ಆದರೆ ನಿನ್ನೆ ದೇಶವನ್ನು ಉದ್ದೇಶಿಸಿ ಭಾಷಣ ಮಾಡಿರಲಿಲ್ಲ.
ಹೀಗಾಗಿ ಇಂದು ನರೇಂದ್ರ ಮೋದಿ ಭಾಷಣ ಮಾಡಲಿದ್ದಾರೆ ಎಂದು ತಿಳಿದುಬಂದಿದೆ. ಭಾಷಣದ ವೇಳೆ ಮೋದಿ ಕೊರೊನಾ ವಾರಿಯರ್ಸ್‍ಗೆ ಧನ್ಯವಾದ ತಿಳಿಸಲಿದ್ದಾರೆ.
ಇನ್ನು ಚೀನಾದ ಬಳಿಕ 100 ಕೋಟಿ ಡೋಸ್ ನೀಡಿರುವ ವಿಶ್ವದ 2ನೇ ದೇಶವಾಗಿ ಭಾರತ ಹೊರಹೊಮ್ಮಿದೆ. ಶೇಕಡಾವಾರು ಪ್ರಮಾಣದಲ್ಲಿ ಶೇ. 23ರಷ್ಟು ಮಾತ್ರ ವ್ಯಾಕ್ಸಿನೇಷನ್ ಆಗಿದೆ.