ಬೆಂಗಳೂರು : ಬಿಜೆಪಿ 2024ರ ಲೋಕಸಭಾ ಚುನಾವಣೆಯಲ್ಲೂ ಮತ್ತೆ ಅಧಿಕಾರಕ್ಕೆ ಬರಲಿದ್ದು, ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿದ್ದಾರೆ ಎಂದು ಎಸ್ ಎಂಕೃಷ್ಣಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ದೇಶದಲ್ಲಿನ ಎಲ್ಲಾ ರಾಜಕೀಯ ಪಕ್ಷಗಳಲ್ಲಿ ಆಂತರಿಕ ಪ್ರಜಾಪ್ರಭುತ್ವದ ಕೊರತೆ ಕಾಡುತ್ತಿದೆ. ಇಂತಹ ವ್ಯವಸ್ಥೆಯ ಬಗ್ಗೆ ಪರಾಮರ್ಶಿಸಬೇಕಾದ ಅಗತ್ಯವಿದೆ. ಅಧಿಕಾರದಲ್ಲಿರುವ ನಾಯಕತ್ವವನ್ನು ಟೀಕಿಸುವಲ್ಲಿನ ಭಯವನ್ನು ಬಿಡಬೇಕು ಎಂದಿದ್ದಾರೆ.
ಬಿಜೆಪಿ ಕಾರ್ಯನಿರ್ವಹಣೆ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರನ್ನು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹೊಗಳಿದ್ದಾರೆ. ಆದರೆ, ಕಾಂಗ್ರೆಸ್ ಇನ್ನೂ ಪ್ರಬಲ ಶಕ್ತಿಯಾಗಿದೆ. ಪ್ರಾದೇಶಿಕ ಪಕ್ಷಗಳೊಂದಿಗೆ ಮರು ಸಂಘಟನೆ ಜಿಪಿ ನಡ್ಡಾ ನೇತೃತ್ವದ ಪಕ್ಷಕ್ಕೆ ಪ್ರಮುಖ ಸವಾಲಾಗಿದೆ ಎಂದಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಒಳ್ಳೆಯ ಕೆಲಸಗಳನ್ನು ಮಾಡುತ್ತಿದ್ದು,ಅಭಿವೃದ್ಧಿ ಕಾರ್ಯಗಳಲ್ಲಿ ನಾವೆಲ್ಲರೂ ಜೊತೆಯಾಗಿರುವುದಕ್ಕೆ ಹೆಮ್ಮೆಯಾಗುತ್ತಿದೆ ಎಂದು ಹೇಳಿದ ಎಸ್.ಎಂ. ಕೃಷ್ಣ, ಅಧಿಕಾರದಲ್ಲಿರುವಾಗ ಪ್ರಾದೇಶಿಕ ಪಕ್ಷಗಳನ್ನು ಪಕ್ಕಕ್ಕೆ ತಳ್ಳಬಾರದು ಎಂಬ ಎಚ್ಚರಿಕೆ ನೀಡಿದ್ದಾರೆ.








