G7 ಶೃಂಗ ಸಭೆ – ವಿವಿಧ ದೇಶದ ನಾಯಕರ ಜೊತೆ ಪ್ರಧಾನಿ ಮೋದಿ ಚರ್ಚೆ…
ಜರ್ಮನಿಯ ಸ್ಕ್ಲೋಸ್ ಎಲ್ಮೌ ಅರಮನೆಯಲ್ಲಿ ನಡೆಯುತ್ತಿರುವ ಜಿ-7 ಶೃಂಗಸಭೆಗೆ ಜರ್ಮನಿಯ ಚಾನ್ಸೆಲರ್ ಓಲಾಫ್ ಸ್ಕೋಲ್ಜ್ ಅವರ ಆಹ್ವಾನದ ಮೇರೆಗೆ ಪ್ರಧಾನಿ ನರೇಂದ್ರ ಮೋದಿ ಕೂಡ ಪಾಲ್ಗೊಳ್ಳುತ್ತಿದ್ದಾರೆ. ಶೃಂಗಸಭೆಯಲ್ಲಿ ಹವಾಮಾನ, ಶಕ್ತಿ, ಆರೋಗ್ಯ ಮತ್ತು ಆಹಾರ ಭದ್ರತೆ ಮತ್ತು ಲಿಂಗ ಸಮಾನತೆಯ ಕುರಿತು ಚರ್ಚಿಸಲಾಗುತ್ತದೆ. ಇದಲ್ಲದೇ ಉಕ್ರೇನ್-ರಷ್ಯಾ ಯುದ್ಧದ ಬಗ್ಗೆ ಭಾರತದ ನಿಲುವು, ಇಂಡೋ-ಪೆಸಿಫಿಕ್ ಪ್ರದೇಶದ ಪರಿಸ್ಥಿತಿ ಬಗ್ಗೆಯೂ ಚರ್ಚೆ ನಡೆಯಲಿದೆ.
ಭಾನುವಾರ ಜರ್ಮನಿಯ ಮ್ಯೂನಿಚ್ ತಲುಪಿದ ಪ್ರಧಾನಿ ನರೇಂದ್ರ ಮೋದಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಮಾತನಾಡಿದರು. “ಇಂದು ಜೂನ್ 26, ಇದು ಪ್ರಜಾಪ್ರಭುತ್ವದ ದೃಷ್ಟಿಯಿಂದ ಮುಖ್ಯವಾಗಿದೆ. ಇಂದಿಗೆ 47 ವರ್ಷಗಳ ಹಿಂದೆ ಅದೇ ಸಮಯದಲ್ಲಿ ಆ ಪ್ರಜಾಪ್ರಭುತ್ವವನ್ನು ಒತ್ತೆಯಾಳಾಗಿಟ್ಟುಕೊಂಡು ತುಳಿಯುವ ಪ್ರಯತ್ನ ನಡೆದಿತ್ತು. ಅದೇ ದಿನ ಪ್ರಜಾಪ್ರಭುತ್ವದ ಮೇಲೆ ತುರ್ತು ಪರಿಸ್ಥಿತಿ ಹೇರಲಾಯಿತು. ಇದರ ನಂತರ ಪ್ರಜಾಪ್ರಭುತ್ವ ಗೆದ್ದಿತು ಎಂದು ಮಾತನಾಡಿದರು.
ಜಿ-7 ಏಳು ದೇಶಗಳ ಗುಂಪು
G-7 ಗುಂಪು ವಿಶ್ವದ ಏಳು ಶ್ರೀಮಂತ ರಾಷ್ಟ್ರಗಳ ಗುಂಪಾಗಿದ್ದು, ಪ್ರಸ್ತುತ ಜರ್ಮನಿಯ ನೇತೃತ್ವದಲ್ಲಿದೆ. ಗುಂಪಿನಲ್ಲಿ ಬ್ರಿಟನ್, ಕೆನಡಾ, ಫ್ರಾನ್ಸ್, ಜರ್ಮನಿ, ಇಟಲಿ, ಜಪಾನ್ ಮತ್ತು ಯುನೈಟೆಡ್ ಸ್ಟೇಟ್ಸ್ ಸೇರಿವೆ. ಅರ್ಜೆಂಟೀನಾ, ಇಂಡೋನೇಷ್ಯಾ, ಸೆನೆಗಲ್, ದಕ್ಷಿಣ ಆಫ್ರಿಕಾದಂತಹ ದೇಶಗಳಿಗೂ ಆಹ್ವಾನ ನೀಡಲಾಗಿದೆ.
ಈ ಸಭೆಯಲ್ಲಿ ಅಮೆರಿಕ ಅಧ್ಯಕ್ಷ ಜೋ ಬಿಡನ್, ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್, ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರೋ, ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಸೇರಿದಂತೆ ಹಲವು ಉನ್ನತ ನಾಯಕರು ಭಾಗವಹಿಸುತ್ತಿದ್ದಾರೆ.