Narendra Modi – ನವೆಂಬರ್ 11ಕ್ಕೆ ಬೆಂಗಳೂರಿಗೆ ಮೋದಿ
ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರು ಮುಂದಿನ ತಿಂಗಳು ನವೆಂಬರ್ 11 ರಂದು ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ.
ಅಂದು ದಕ್ಷಿಣ ಭಾರತದಲ್ಲಿ ಮೊದಲ ಹಾಗೂ ಭಾತರದ ಐದನೇ ವಂದೇ ಭಾರತ ಎಕ್ಸ್ ಪ್ರೆಸ್ ಗೆ ಚಾಲನೆ ನೀಡಲಿದ್ದಾರೆ.
ಅಂದು ಅಂದರೆ ನವೆಂಬರ್ 11 ರಂದು ಬೆಳಗ್ಗೆ 10 ಗಂಟೆಗೆ ನರೇಂದ್ರ ಮೋದಿ ಅವರು ಬೆಂಗಳೂರಿನ ಹೆಚ್ ಎ ಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ.

ಅಲ್ಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಎರಡನೇ ಟರ್ಮಿನಲ್ ನ ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ.
ಬಳಿಕ ಅದೇ ಆವರಣದಲ್ಲಿ 108 ಅಡಿ ಎತ್ತರದ ನಾಡಪ್ರಭು ಕೆಂಪೇಗೌಡರ ಪ್ರಗತಿಯ ಪ್ರತಿಮೆಯನ್ನು ಅನಾವರಣ ಮಾಡಲಿದ್ದಾರೆ.
ಬಳಿಕ ಬೃಹತ್ ಸಭೆಯಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.








