Mallikarjun Kharge | ಎಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾದ ಖರ್ಗೆಗೆ ಮೋದಿ ವಿಶ್
ನವದೆಹಲಿ : ಎಐಸಿಸಿ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಮಲ್ಲಿಕಾರ್ಜುನ ಖರ್ಗೆಯವರಿಗೆ ಪ್ರಧಾನಿ ನರೇಂದ್ರ ಮೋದಿಯವರು ಶುಭಕೋರಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಮೋದಿ, ಎಐಸಿಸಿ ನೂತನ ಅಧ್ಯಕ್ಷರಾಗುವ ಮೂಲಕ ಜವಾಬ್ದಾರಿಸಿ ವಹಿಸಿಕೊಂಡಿರುವ ಮಲ್ಲಿಕಾರ್ಜುನ ಖರ್ಗೆಯವರಿಗೆ ಶುಭಾಶಯಗಳನ್ನು ತಿಳಿಸುತ್ತೇನೆ.
ಮುಂದೆ ಅವರು ಫಲಪ್ರದವಾದ ಅಧಿಕಾರಾವಧಿಯನ್ನು ಹೊಂದಲಿ ಎಂದು ಬರೆದುಕೊಂಡಿದ್ದಾರೆ.
ಎಐಸಿಸಿ ಅಧ್ಯಕ್ಷ ಚುನಾವಣೆಯಲ್ಲಿ ಒಟ್ಟು 9385 ಮತಗಳು ಚಲಾವಣೆಗೊಂಡಿದ್ದವು.

ಇದರಲ್ಲಿ 415 ಮತಗಳನ್ನು ಅಮಾನ್ಯಗೊಳಿಸಲಾಗಿತ್ತು. ಈ ಪೈಕಿ ಮಲ್ಲಿಕಾರ್ಜುನ್ ಖರ್ಗೆ ಅವರು 7897 ಮತಗಳನ್ನು ಪಡೆದು ಭಾರಿ ಅಂತರದ ಗೆಲುವು ದಾಖಲಿಸಿದ್ದಾರೆ.
ಖರ್ಗೆ ಪ್ರತಿಸ್ಪರ್ಧಿಯಾಗಿದ್ದ ಶಶಿ ತರೂರ್ 1072 ಮತಗಳನ್ನು ಪಡೆದು ಸೋಲುಂಡಿದ್ದಾರೆ. ಇದರೊಂದಿಗೆ ಕಾಂಗ್ರೆಸ್ ನ ಭೀಷ್ಮ ಖರ್ಗೆ ಎಐಸಿಸಿ ಅಧ್ಯಕ್ಷರಾಗಿದ್ದಾರೆ.








