ಪ್ಲಾಸ್ಟಿಕ್ ತ್ಯಾಜ್ಯದಿಂದ ತಯಾರಿಸಿ ಜಾಕೆಟ್ ಧರಿಸಿ ಕಲಾಪಕ್ಕೆ ಬಂದ ಪ್ರಧಾನಿ ಮೋದಿ…
ಪ್ರಧಾನಿ ನರೇಂದ್ರ ಮೋದಿ ಬಜೆಟ್ ಅಧಿವೇಶನದ ಸಂಸತ್ ಕಲಾಪಕ್ಕೆ ಹಾಜರಾಗಿದ್ದಾರೆ. ಸಂಸತ್ತಿನಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಪ್ರಧಾನಿ ನರೇಂದ್ರ ಮೋದಿ ಇಂದು ಉತ್ತರ ನೀಡಲಿದ್ದಾರೆ.
ಮಂಗಳವಾರ ರಾಹುಲ್ ಗಾಂಧಿ ನೇತೃತ್ವದಲ್ಲಿ ಪ್ರತಿಪಕ್ಷಗಳು ಸರ್ಕಾರ ಮತ್ತು ಪ್ರಧಾನಿ ವಿರುದ್ಧ ವಾಗ್ದಾಳಿ ನಡೆಸಿದರು.ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಮ್ಮ ಲೋಕಸಭೆ ಭಾಷಣದಲ್ಲಿ ಅದಾನಿ ವಿವಾದವನ್ನ ಮುನ್ನಲೆಗೆ ತಂದಿದ್ದಾರೆ.
ಕೇಂದ್ರ ಸರ್ಕಾರವು ಅದಾನಿ ಗ್ರೂಪ್ ಎಂಬ ಒಂದು ಕಾರ್ಪೊರೇಟ್‌ಗೆ ಮಾತ್ರ ಒಲವು ತೋರುತ್ತಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. ‘ಅದಾನಿ ಗ್ರೂಪ್‌ನವರು ಸಾಗರೋತ್ತರ ಒಪ್ಪಂದಗಳು ಸೇರಿದಂತೆ ಎಲ್ಲಾ ಒಪ್ಪಂದಗಳನ್ನು ಪಡೆಯುತ್ತಿದ್ದಾರೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ಇದೀಗ ಲೋಕಸಭೆಯಲ್ಲಿ ಪ್ರಧಾನಿ ಮೋದಿ ಅದಾನಿ ಗದ್ದಲದ ನಡುವೆ ಪ್ರತಿಪಕ್ಷಗಳಿಗೆ ಉತ್ತರ ನೀಡಲಿದ್ದಾರೆ. ರಾಜ್ಯಸಭೆಯಲ್ಲಿ ಬಜೆಟ್ ಕುರಿತಾದ ಚರ್ಚೆಯ ವೇಳೆ ಸದನದಲ್ಲಿ ಹಾಜರಿದ್ದ ಪ್ರಧಾನಿ ಮೋದಿ ವಿಶೇಷವಾಗಿ ಕಾಣುತ್ತಿದ್ದರು. ಕಾರಣ ಪ್ಲಾಸ್ಟಿಕ್ ಬಾಟಲಿಯ ತ್ಯಾಜ್ಯದಿಂದ ತಯಾರಿಸಲಾದ ಜಾಕೆಟ್ ಅನ್ನು ಧರಿಸಿ ಬಂದಿದ್ದರು . ಇದನ್ನ ಸೋಮವಾರ ಕರ್ನಾಟಕಕ್ಕೆ ಇಂಡಿಯಾ ಎನರ್ಜಿ ವೀಕ್ ಉದ್ಘಾಟನೆಗಾಗಿ ಬಂದಿದ್ದ ಪ್ರಧಾನಿ ಮೋದಿಗೆ ದೇಶದ ಅತೀದೊಡ್ಡ ತೈಲ ಕಂಪನಿ ಇಂಡಿಯನ್ ಆಯಿಲ್ ಕಾರ್ಪೋರೇಷನ್ ಉಡುಗೊರೆಯಾಗಿ ನೀಡಿತ್ತು.
Narendra Modi Ji wore a blue jacket in Parliament made from recycled plastic bottles gifted by Indian Oil Corp