ಬಾಲಿವುಡ್ ಹಿರಿಯ ನಟ ನಾಸೀರುದ್ದೀನ್ ಶಾ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲು
ಮುಂಬೈ: ಬಾಲಿವುಡ್ ಖ್ಯಾತ ಹಿರಿಯ ನಟ ನಾಸೀರುದ್ದೀನ್ ಶಾ ಅವರ ಆರೋಗ್ಯದಲ್ಲಿ ಏರುಪೇರು ಕಂಡ ಬಂದಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ನಾಸೀರುದ್ದೀನ್ ಅವರು ನ್ಯೂಮೋನಿಯಾದಿಂದ ಬಳಲುತ್ತಿದ್ದು, ಜೂನ್ 29ರಂದು ನಾಸೀರುದ್ದೀನ್ ಅವರನ್ನು ಹಿಂದೂಜಾ ಆಸ್ಪತ್ರೆಗೆ ದಾಖಲಿಸಲಾಗಿದೆ. ನಾಸೀರುದ್ದೀನ್ ಅವರ ಆರೋಗ್ಯ ಮೊದಲಿಗಿಂತ ಸುಧಾರಿಸಿದೆ
ಎಂದು ಆಪ್ತ ಮೂಲಗಳಿಂದ ತಿಳಿದುಬಂದಿದೆ.. ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎನ್ನಲಾಗಿದೆ.
ಸದ್ಯ ನಾಸೀರುದ್ದೀನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದು, ವೈದ್ಯರ ತಂಡ ಅವರ ಆರೋಗ್ಯದ ಮೇಲೆ ನಿಗಾ ಇಟ್ಟಿದೆ. ನ್ಯೂಮೋನಿಯಾ ಆಗಿದ್ದರಿಂದ ಅವರನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಎರಡ್ಮೂರು ದಿನಗಳಲ್ಲಿ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ನಾಸೀರುದ್ದೀನ್ ಮ್ಯಾನೇಜರ್ ಹೇಳಿದ್ದಾರೆ.
ನಾಸೀರುದ್ದೀನ್ ಉದ್ದಿನ್ ಅವರು ಬಾಲಿವುಡ್ ಖ್ಯಾತ ಹಿರಿಯ ನಟರು.. ಬಹಳ ವರ್ಷಗಳಿಂದ ಸಿನಿಮಾರಂಗದಲ್ಲಿದ್ದು, ಪೋಷಕ ಪಾತ್ರಗಳು, ನೆಗೆಟಿವ್ ರೋಲ್ಸ್ , ಪ್ರಮುಖ ಪಾತ್ರಗಳಲ್ಲಿ ಅನೇಕ ಸಿನಿಮಾಗಳಲ್ಲಿ ನಟಿಸಿದ್ದಾರೆ. ಹಲವು ಸೂಪರ್ ಹಿಟ್ ಸಿನಿಮಾಗಳನ್ನು ನೀಡಿದ್ದಾರೆ. ಜಾನ್ ಡೇ, ಬೇಗಂ ಜಾನ್, ತ್ರೀದೇವ್, ಸರ್ಫೋರೋಶ್, ಮಕಬೂಲ್, ಇಕ್ಬಾಲ್, ಕ್ರಿಶ್ ಸೇರಿ ಸಾಕಷ್ಟು ಸಿನಿಮಾಗಳ ಮೂಲಕ ಅಭಿಮಾನಿಗಳನ್ನ ರಂಜಿಸಿದ್ದಾರೆ.. ಅಪಾರ ಅಭಿಮಾನಿಗಳನ್ನ ಸಂಪಾದನೆ ಮಾಡಿದ್ದಾರೆ.