ಇನ್ಮುಂದೆ ಮದರಸಾಗಳಲ್ಲಿ ರಾಷ್ಟ್ರಗೀತೆ ಕಡ್ಡಾಯ
ಬೆಂಗಳೂರು : ಶಾಸಗಿ ಶಾಲೆಗಳ ಜೊತೆಗೆ ಮದರಸಾಗಳಲ್ಲೂ ನಿತ್ಯ ರಾಷ್ಟ್ರಗೀತೆ ಹಾಡಿಸುತ್ತಿಲ್ಲ ಎಂಬ ದೂರುಗಳು ಶಿಕ್ಷಣ ಇಲಾಖೆಗೆ ಬಂದಿವೆ.
ಈ ಹಿನ್ನೆಲೆಯಲ್ಲಿ ಇದನ್ನ ಗಂಭೀರವಾಗಿ ಪರಿಗಣಿಸಿರುವ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು, ಎಲ್ಲಾ ಶಾಲೆಗಳಲ್ಲಿ ಹಾಗೂ ಮದರಸಾಗಳಲ್ಲಿಯೂ ಕಡ್ಡಾಯವಾಗಿ ರಾಷ್ಟ್ರಗೀತೆ ಹಾಡಿಸಲು ಸುತ್ತೋಲೆ ಹೊರಡಿಸುವಂತೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ ಎಂದು ತಿಳಿದುಬಂದಿದೆ.
ಈ ಸಂಬಂಧ ಇಂದು ಅಥವಾ ನಾಳೆ ಸರ್ಕಾರದಿಂದ ಅಧಿಕೃತ ಆದೇಶ ಹೊರ ಬೀಳುವ ಸಾಧ್ಯತೆಗಳಿವೆ.

ಮದರಸಾಗಳಲ್ಲಿ ಉದ್ದೇಶಪೂರ್ವಕವಾಗಿ ರಾಷ್ಟ್ರಗೀತೆ ನಿತ್ಯ ಹಾಡಿಸದೇ ಹೋದರೇ ಅವುಗಳ ಮೇಲೆ ಶಿಕ್ಷಣ ಇಲಾಖೆ ಕ್ರಮ ತೆಗೆದುಕೊಳ್ಳಲಿದೆ ಎಂದು ವರದಿಯಾಗಿದೆ.
ಅಂದಹಾಗೆ ಬೆಂಗಳೂರು ನಗರದ ಖಾಸಗಿ ಶಾಲೆಗಳಾದ ಬಿಷಪ್ ಕಾಟನ್, ಬಾಲ್ಡ್ ವಿನ್, ಸೆಂಟ್ ಜೋಸೆಫ್ ಶಾಲೆಗಳಲ್ಲಿ ನಿತ್ಯ ರಾಷ್ಟ್ರಗೀತೆ ಹಾಡಿಸದೇ ಇರುವುದು ಬೆಳಕಿಗೆ ಬಂದಿದೆ.
ಇದನ್ನ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಎಲ್ಲಾ ಶಾಲೆಗಳಲ್ಲೂ ಕಡ್ಡಾಯವಾಗಿ ರಾಷ್ಟ್ರಗೀತೆ ಹಾಡಬೇಕು ಎಂದು ಸುತ್ತೊಲೆ ಹೊರಡಿಸಲು ಮುಂದಾಗಿದೆ.