ದೇಶಾದ್ಯಂತ ಇಂದು “ರಾಷ್ಟ್ರೀಯ ಹೆಣ್ಣು ಮಕ್ಕಳ” ದಿನ ಆಚರಣೆ……
ದೇಶಾದ್ಯಂತ ಇಂದು “ರಾಷ್ಟ್ರೀಯ ಹೆಣ್ಣು ಮಕ್ಕಳ ದಿನ” ವನ್ನ ಆಚರಿಸಲಾಗುತ್ತಿದೆ. ಹಲವಾರು ಕೇಂದ್ರ ಸಚಿವರು ಮತ್ತು ನಾಯಕರು ಹೆಣ್ಣು ಮಕ್ಕಳಿಗೆ ಶುಭ ಹಾರೈಸಿದ್ದಾರೆ. ಕೇಂದ್ರ ಸಚಿವರಾದ ಅಮಿತ್ ಶಾ, ನಿತಿನ್ ಗಡ್ಕರಿ, ಜ್ಯೋತಿರಾದಿತ್ಯ ಸಿಂಧಿಯಾ ಮತ್ತು ಹರ್ದೀಪ್ ಪುರಿ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಶುಭಾಶಯಗಳನ್ನು ಪೋಸ್ಟ್ ಮಾಡಿದ್ದಾರೆ.
“ಪ್ರಧಾನಿ ನರೇಂದ್ರ ಮೋದಿ ಜಿ ಅವರು ಮಹಿಳಾ ಅಭಿವೃದ್ಧಿಯ ಚಿಂತನೆಯನ್ನು ಮಹಿಳಾ ನೇತೃತ್ವದ ಅಭಿವೃದ್ಧಿಯ ಸಂಕಲ್ಪವಾಗಿ ಬದಲಾಯಿಸಿದರು ಮತ್ತು ಅವಕಾಶಗಳ ಬಾಗಿಲು ತೆರೆದರು. ಇಂದು ದೇಶದ ಹೆಣ್ಣು ಮಕ್ಕಳು ಪ್ರತಿಯೊಂದು ಕ್ಷೇತ್ರದಲ್ಲೂ ಭಾರತದ ಹೆಸರನ್ನು ಬೆಳಗುತ್ತಿದ್ದಾರೆ. ‘ರಾಷ್ಟ್ರೀಯ ಹೆಣ್ಣು ಮಕ್ಕಳ ದಿನ’ದಂದು, ದೇಶದ ಹೆಮ್ಮೆ, ಭಾರತದ ಪ್ರತಿಯೊಬ್ಬ ಹೆಣ್ಣು ಮಗಳಿಗೂ ನನ್ನ ಶುಭಾಶಯಗಳನ್ನು ತಿಳಿಸುತ್ತೇನೆ ಎಂದು ಅಮಿತ್ ಶಾ ಟ್ವಿಟರ್‌ನಲ್ಲಿ ತಿಳಿಸಿದ್ದಾರೆ.
“ಸ್ಥೈರ್ಯ, ಕೌಶಲ್ಯ ಮತ್ತು ಮಹತ್ವಾಕಾಂಕ್ಷೆಯಿಂದ ದೇಶದ ಹೆಣ್ಣು ಮಕ್ಕಳು ಇಂದು ಪ್ರತಿಯೊಂದು ಕ್ಷೇತ್ರದಲ್ಲೂ ತಮ್ಮದೇ ಆದ ಛಾಪು ಮೂಡಿಸುತ್ತಿದ್ದಾರೆ. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ನೇತೃತ್ವದ ನಮ್ಮ ಸರ್ಕಾರವು ‘ಮಹಿಳಾ ನೇತೃತ್ವದ ಅಭಿವೃದ್ಧಿ’ಗಾಗಿ ನಿರಂತರವಾಗಿ ಶ್ರಮಿಸುತ್ತಿದೆ ಎಂದು ಗಡ್ಕರಿ ಅವರು ಕೂನಲ್ಲಿ ಪೋಸ್ಟ್ ಮಾಡಿದ್ದಾರೆ.
ಭಾರತ ಸರ್ಕಾರವು 2008 ರಲ್ಲಿ, ಹೆಣ್ಣು ಮಗುವಿನ ಬಗ್ಗೆ ಸಮಾಜದ ಪ್ರಜ್ಞೆಯನ್ನು ಹೆಚ್ಚಿಸುವ ಉದ್ದೇಶದಿಂದ ಪ್ರತಿ ವರ್ಷ ಜನವರಿ 24 ಅನ್ನು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವನ್ನಾಗಿ ಆಚರಿಸಲು ಘೋಷಿಸಿತು,
ಸಮಾಜದಲ್ಲಿ ಹೆಣ್ಣು ಮಕ್ಕಳು ಎದುರಿಸುತ್ತಿರುವ ಅಸಮಾನತೆಗಳು, ತಾರತಮ್ಯ, ಶೋಷಣೆಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಇದನ್ನು ಆಚರಿಸಲಾಗುತ್ತದೆ.
ಹೆಣ್ಣು ಮಗುವಿಗೆ ಆರೋಗ್ಯಕರ ಮತ್ತು ಸುರಕ್ಷಿತ ವಾತಾವರಣವನ್ನು ಸೃಷ್ಟಿಸಲು ಜಾಗೃತಿ ಅಭಿಯಾನ ಸೇರಿದಂತೆ ವಿವಿಧ ಕಾರ್ಯಕ್ರಮಗಳೊಂದಿಗೆ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವನ್ನು ಆಚರಿಸಲಾಗುತ್ತದೆ.