National Herald case: ಸೋನಿಯಾ ಗಾಂಧಿ ವಿಚಾರಣೆಗೆ ಹಾಜರ್ – ಕಾಂಗ್ರೆಸ್ ಪ್ರತಿಭಟನೆ
ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಜಾರಿ ನಿರ್ದೇಶನಾಲಯ ಜುಲೈ 12ರಂದು ವಿಚಾರಣೆಗೆ ಬರುವಂತೆ ಸಮನ್ಸ್ ಜಾರಿ ಮಾಡಿದ್ದು, ಇಂದು ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ವಿಚಾರಣೆಗೆ ಹಾಜರಾಗಿದ್ದಾರೆ.
ಇಡಿ ವಿಚಾರಣೆ ಹೆಸರಿನಲ್ಲಿ ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನು ತಮ್ಮ ಪ್ರಭಾವದಿಂದ ದುರ್ಬಳಕೆ ಮಾಡಿಕೊಳ್ಳುತ್ತಿದೆ, ಇಡಿ ತನಿಖೆಯ ನೆಪದಲ್ಲಿ ಗಾಂಧಿ ಕುಟುಂಬದ ರಾಜಕೀಯ ವರ್ಚಸ್ಸನ್ನು ತಗ್ಗಿಸುವ ದುರುದ್ದೇಶವಿದು ಎಂದು ಸೋನಿಯಾಗಾಂಧಿ ವಿಚಾರಣೆಯನ್ನು ಖಂಡಿಸಿ ಕಾಂಗ್ರೆಸ್ ಪಕ್ಷದ ನಾಯಕರು, ಕಾರ್ಯಕರ್ತರು ಇಂದು ದೇಶಾದ್ಯಂತ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ.
https://twitter.com/i/status/1550032315359035393
ಕಾಂಗ್ರೆಸ್ ಕಾರ್ಯಕರ್ತರು ನವದೆಹಲಿಯ ಇಡಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸುತ್ತಿದ್ದಾರೆ. ಕಾಂಗ್ರೆಸ್ ಮುಖಂಡರು ಘೋಷಣೆಗಳನ್ನು ಕೂಗಿ, ಸೋನಿಯಾ ಗಾಂಧಿಗೆ ಬೆಂಬಲ ಸೂಚಿಸಿದ್ದಾರೆ. ಸೋನಿಯಾ ಗಾಂಧಿ ಇಡಿ ವಿಚಾರಣೆಯನ್ನು ಖಂಡಿಸಿ, ದೇಶಾದ್ಯಂತ ಪ್ರತಿಭಟನೆ ಭುಗಿಲೇಳುತ್ತಿದೆ. ಇಡಿ ಕಚೇರಿ ಮುಂದೆ ಪ್ರತಿಭಟನೆ ನಿಯಂತ್ರಣ ಮಾಡಲು ಪೊಲೀಸರು ಕಾರ್ಯಕರ್ತರ ಮೇಲೆ ಜಲ ಫಿರಂಗಿ ಸಿಡಿಸಿದ್ದಾರೆ.
#WATCH Delhi | Congress workers detained in the wake of protest over ED probe against Sonia Gandhi in National Herald case pic.twitter.com/4XbRQuhCZA
— ANI (@ANI) July 21, 2022
ರಾಜ್ಯದಲ್ಲೂ ಸಹ ಇಂದು ಕಾಂಗ್ರೆಸ್ ನಾಯಕರು ಪ್ರತಿಭಟನೆ ಹಾಗೂ ರಾಜಭವನ ಚಲೋ ಹಮ್ಮಿಕೊಂಡೊದ್ದಾರೆ. ಈಗಾಗಲೇ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ಪ್ರಾರಂಭವಾಗಿದ್ದು, ಎಲ್ಲಾ ಕೈ ಶಾಸಕರು, ಸಂಸದರು ಭಾಗವಹಿಸಿ ಬಿಜೆಪಿ ವಿರುದ್ಧ ಪ್ರತಿಭಟಿಸುತ್ತಿದ್ದಾರೆ. ಈ ಹಿನ್ನೆಲೆ ಫ್ರೀಡಂ ಪಾರ್ಕ್ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆಯ ಹಿನ್ನೆಲೆ ಅಲ್ಲಿನ ಸುತ್ತಮುತ್ತಲಿನ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಆಗಿದೆ. ನೃಪತುಂಗ ರೋಡ್, ಕೆಆರ್ ಸರ್ಕಲ್, ಕೆಜಿ ರೋಡ್ ಸೇರಿದಂತೆ ಹಲವೆಡೆ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಆಗಿದೆ.








