National Herald Case : ಕುಗ್ಗುವುದೂ ಇಲ್ಲ ಬಗ್ಗುವುದೂ ಇಲ್ಲ ಎಂದ ಕಾಂಗ್ರೆಸ್
ಬೆಂಗಳೂರು : 2015ರಲ್ಲೇ ‘ನ್ಯಾಷನಲ್ ಹೆರಾಲ್ಡ್’ ಪ್ರಕರಣಕ್ಕೆ ಕ್ಲೀನ್ ಚಿಟ್ ನೀಡಿದ್ದರೂ ಬಿಜೆಪಿ ತನ್ನ ವೈಫಲ್ಯಗಳನ್ನು ಮರೆಮಾಚಲು,ಕಾಂಗ್ರೆಸ್‍ನ ಜನಪರ ಧ್ವನಿಯನ್ನು ಹತ್ತಿಕ್ಕಲು ಈ ಕೇಸನ್ನು ಮುನ್ನೆಲೆಗೆ ತರುವ ಮೂಲಕ ಸೇಡಿನ ರಾಜಕೀಯಕ್ಕೆ ಇಳಿದಿದೆ.ಆದರೆ ಕಾಂಗ್ರೆಸ್ ಪಕ್ಷ ಇದಕ್ಕೆಲ್ಲ ಕುಗ್ಗುವುದೂ ಇಲ್ಲ ಬಗ್ಗುವುದೂ ಇಲ್ಲ ಎಂದು ರಾಜ್ಯ ಕಾಂಗ್ರೆಸ್ ಹೇಳಿದೆ.
ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಇಂದು ಜಾರಿ ನಿರ್ದೇಶನಾಲಯ ಎದುರು ವಿಚಾರಣೆಗೆ ಹಾಜರಾಗಲಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷವು ರಾಹುಲ್ ವಿಚಾರಣೆ ಖಂಡಿಸಿ, ಡೆಲ್ಲಿಯ ಇಡಿ ಮುಖ್ಯ ಕಚೇರಿ ಹಾಗೂ ದೇಶದ ವಿವಿಧ ಇಡಿ ಕಚೇರಿಗಳ ಮುಂದೆ ಪ್ರತಿಭಟನೆ ನಡೆಸಲು ಮುಂದಾಗಿದೆ.

ಇತ್ತ ಬಿಜೆಪಿ ವಿರುದ್ಧ ಸರಣಿ ಟ್ವೀಟ್ ಗಳನ್ನು ಮಾಡಿರುವ ಕಾಂಗ್ರೆಸ್, T ED CBI ನಂತಹ ಸಾಂವಿಧಾನಿಕ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ತನ್ನ ರಾಜಕೀಯ ವಿರೋಧಿಗಳನ್ನು ಹಣಿಯಲು ಹೊರಟಿರುವುದು ಬಿಜೆಪಿಯ ನೀಚತನದ ರಾಜಕಾರಣಕ್ಕೆ ಸಾಕ್ಷಿ. IT ED ಯಂತಹ ಸಂಸ್ಥೆಗಳನ್ನು ಬಳಸಿಕೊಂಡು ಕಾಂಗ್ರೆಸ್ ಪಕ್ಷದ ಧ್ವನಿಯನ್ನು ಹತ್ತಿಕುತ್ತೇವೆ ಎಂದುಕೊಂಡಿದ್ದರೆ ಅದು ಬಿಜೆಪಿ ದ ಮೂರ್ಖತನವಷ್ಟೇ
ದೇಶದ ಆರ್ಥಿಕ ದುಸ್ಥಿತಿ, ಬೆಲೆ ಏರಿಕೆ, ಚೀನಾ ಅತಿಕ್ರಮಣ, ಕಾಶ್ಮೀರ ಪಂಡಿತರ ಹತ್ಯೆ ಮುಂತಾದ ಕೇಂದ್ರ ಸರ್ಕಾರದ ಸಾಲು ಸಾಲು ವೈಫಲ್ಯಗಳಿಂದ ಗಮನ ಬೇರೆಡೆ ಸೆಳೆಯುವುದು ಕೇಂದ್ರ ಸರ್ಕಾರಕ್ಕೆ ಅನಿವಾರ್ಯ. ಹಾಗಾಗಿ ಪತ್ರಿಕೆಗಳ ಹೆಡ್ ಲೈನ್ ಬದಲಿಸಲು ರಾಹುಲ್ ಗಾಂಧಿ ಅವರ ವಿರುದ್ಧ ‘ಈಡಿ ಮೋರ್ಚಾ’ವನ್ನ ಮುಂದೆ ಬಿಟ್ಟಿದೆ.
2015ರಲ್ಲೇ 'ನ್ಯಾಷನಲ್ ಹೆರಾಲ್ಡ್' ಪ್ರಕರಣಕ್ಕೆ ಕ್ಲೀನ್ ಚಿಟ್ ನೀಡಿದ್ದರೂ @BJP4India ತನ್ನ ವೈಫಲ್ಯಗಳನ್ನು ಮರೆಮಾಚಲು,ಕಾಂಗ್ರೆಸ್‍ನ ಜನಪರ ಧ್ವನಿಯನ್ನು ಹತ್ತಿಕ್ಕಲು ಈ ಕೇಸನ್ನು ಮುನ್ನೆಲೆಗೆ ತರುವ ಮೂಲಕ ಸೇಡಿನ ರಾಜಕೀಯಕ್ಕೆ ಇಳಿದಿದೆ.ಆದರೆ ಕಾಂಗ್ರೆಸ್ ಪಕ್ಷ ಇದಕ್ಕೆಲ್ಲ ಕುಗ್ಗುವುದೂ ಇಲ್ಲ ಬಗ್ಗುವುದೂ ಇಲ್ಲ#IndiaWithRahulGandhi
— Karnataka Congress (@INCKarnataka) June 13, 2022
2015ರಲ್ಲೇ ‘ನ್ಯಾಷನಲ್ ಹೆರಾಲ್ಡ್’ ಪ್ರಕರಣಕ್ಕೆ ಕ್ಲೀನ್ ಚಿಟ್ ನೀಡಿದ್ದರೂ ಬಿಜೆಪಿ ತನ್ನ ವೈಫಲ್ಯಗಳನ್ನು ಮರೆಮಾಚಲು,ಕಾಂಗ್ರೆಸ್‍ನ ಜನಪರ ಧ್ವನಿಯನ್ನು ಹತ್ತಿಕ್ಕಲು ಈ ಕೇಸನ್ನು ಮುನ್ನೆಲೆಗೆ ತರುವ ಮೂಲಕ ಸೇಡಿನ ರಾಜಕೀಯಕ್ಕೆ ಇಳಿದಿದೆ.ಆದರೆ ಕಾಂಗ್ರೆಸ್ ಪಕ್ಷ ಇದಕ್ಕೆಲ್ಲ ಕುಗ್ಗುವುದೂ ಇಲ್ಲ ಬಗ್ಗುವುದೂ ಇಲ್ಲ ಎಂದು ಕಾಂಗ್ರೆಸ್ ಗುಡುಗಿದೆ.








