National Herald ಪ್ರಕರಣದಲ್ಲಿ ಗಾಂಧಿ ಕುಟುಂಬ ನಡೆಸಿದ್ದು ಅಕ್ಷರಶಃ ಮನೆಗಳ್ಳತನ
ಬೆಂಗಳೂರು : ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಗಾಂಧಿ ಕುಟುಂಬ ನಡೆಸಿದ್ದು ಅಕ್ಷರಶಃ ಮನೆಗಳ್ಳತನ ಎಂದು ರಾಜ್ಯ ಬಿಜೆಪಿ ಘಟಕ ಆಕ್ರೋಶ ಹೊರಹಾಕಿದೆ.
ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಇಂದು ಜಾರಿ ನಿರ್ದೇಶನಾಲಯ ಎದುರು ವಿಚಾರಣೆಗೆ ಹಾಜರಾಗಲಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷವು ರಾಹುಲ್ ವಿಚಾರಣೆ ಖಂಡಿಸಿ, ಡೆಲ್ಲಿಯ ಇಡಿ ಮುಖ್ಯ ಕಚೇರಿ ಹಾಗೂ ದೇಶದ ವಿವಿಧ ಇಡಿ ಕಚೇರಿಗಳ ಮುಂದೆ ಪ್ರತಿಭಟನೆ ನಡೆಸಲು ಮುಂದಾಗಿದೆ.
ಈ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಘಟಕ ಸರಣಿ ಟ್ವೀಟ್ ಗಳ ಮೂಲಕ ಕಿಡಿಕಾರಿದ್ದು, ಕೇವಲ ಒಂದು #EDNotice ಗಾಗಿ ರಾಜ್ಯವ್ಯಾಪಿ ಪ್ರತಿಭಟನೆಗೆ ಕರೆ ನೀಡಿರುವ ಡಿ.ಕೆ.ಶಿವಕುಮಾರ್ ಅವರೇ, ನೀವೇನು ಸೊಬಗ ಅಂದುಕೊಂಡಿದ್ದೀರಾ? ಒಂದೂವರೆ ತಿಂಗಳಿಗೂ ಹೆಚ್ಚು ತಿಹಾರ್ ಜೈಲಿನಲ್ಲಿ ಕಂಬಿ ಎಣಿಸಿದ್ದು ನ್ಯಾಷನಲ್ ಹೆರಾಲ್ಡ್ ರೀತಿಯ ಪ್ರಕರಣದಲ್ಲಿಯೇ ಎಂಬುದನ್ನು ಮರೆತಿರಾ?
ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಗಾಂಧಿ ಕುಟುಂಬ ನಡೆಸಿದ್ದು ಅಕ್ಷರಶಃ ಮನೆಗಳ್ಳತನ!
ಕಾಂಗ್ರೆಸ್ ಪಕ್ಷದ 5000 ಸದಸ್ಯರ ಇಡಗಂಟಿನೊಂದಿಗೆ ಆರಂಭವಾದ ಅಸೋಸಿಯೇಟ್ ಜರ್ನಲ್ ಶೇರುಗಳನ್ನು ರಾಹುಲ್ ಗಾಂಧಿ ನೇತೃತ್ವದಲ್ಲಿ ಕಬಳಿಸಲಾಗಿದೆ.
ಸ್ವಂತ ಮನೆಗೆ ಕನ್ನ ಹಾಕುವುದೆಂದರೆ ಇದೇ ಅಲ್ಲವೇ?#FakeGandhisBachaoToolKit
— BJP Karnataka (@BJP4Karnataka) June 13, 2022
ತಮ್ಮ ಪ್ರತಿ ಭಾಷಣದಲ್ಲೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ‘ವ್ಯಕ್ತಿ ಮುಖ್ಯವಲ್ಲ ಪಕ್ಷ ಮುಖ್ಯ’ ಎಂಬುದನ್ನು ಪ್ರಸ್ತಾಪಿಸುತ್ತಾರೆ. ಅದೇ ಡಿಕೆಶಿ ಇಂದು ದೇಶದ ಸಾಂವಿಧಾನಿಕ ಮಾನ್ಯತೆ ಇರುವ ಸಂಸ್ಥೆ ನಕಲಿ ಗಾಂಧಿ ಕುಟುಂಬಕ್ಕೆ ನೀಡಿದ ನೋಟಿಸ್ಗೆ ನಕಲಿ ಗಾಂಧಿಗಳ ಜಪ ಮಾಡುತ್ತಿರುವುದು ವಿಪರ್ಯಾಸ.
ಬಾಲ ಮುದುರಿಕೊಂಡು ಕುಳಿತಿದ್ದ ನಗರ ನಕ್ಸಲರು, ಶಾಂತಿದೂತರು, ಸಿಎಎ ವಿರೋಧಿ ಹೋರಾಟಗಾರರು ಈಗ ಒಮ್ಮೆಲೇ ಎದ್ದು ನಿಂತಿದ್ದಾರೆ. #EDNotice ಬಳಿಕ ಈ ಘಟನೆ ನಡೆಯುತ್ತಿದೆ. ಹಾಗಾದರೆ ಇದು ಕಾಂಗ್ರೆಸ್ ಪ್ರೇರಿತ ರಾಷ್ಟ್ರ ವಿರೋಧಿ ಸಂಚಲ್ಲವೇ?
ಮಾತೆತ್ತಿದರೆ ತ್ಯಾಗ-ಬಲಿದಾನದ ಕುಟುಂಬ ಎಂದು ಹೇಳುವ ಕಾಂಗ್ರೆಸ್ ನಾಯಕರೇ, ನಕಲಿ ಗಾಂಧಿಗಳ ವಂಶಸ್ಥರ ಅಕ್ರಮ ಆಸ್ತಿ ದೇಶಸೇವೆಗಾಗಿ ಬರೆದುಕೊಡಲಿ. ಅಕ್ರಮಿಗಳ ಹಣ ದೇಶಸೇವೆಗಾಗಿ ಮೀಸಲಿಟ್ಟಿದ್ದರೆ, ಅಕ್ರಮ ಹಣಗಳಿಕೆಯಲ್ಲಿ #ED ಮುಂದೆ ನಿಲ್ಲಬೇಕಾದ ಪರಿಸ್ಥಿತಿ ಉದ್ಭವವಾಗುತ್ತಿರಲಿಲ್ಲ.
ಮಾತೆತ್ತಿದರೆ ತ್ಯಾಗ-ಬಲಿದಾನದ ಕುಟುಂಬ ಎಂದು ಹೇಳುವ ಕಾಂಗ್ರೆಸ್ ನಾಯಕರೇ, ನಕಲಿ ಗಾಂಧಿಗಳ ವಂಶಸ್ಥರ ಅಕ್ರಮ ಆಸ್ತಿ ದೇಶಸೇವೆಗಾಗಿ ಬರೆದುಕೊಡಲಿ.
ಅಕ್ರಮಿಗಳ ಹಣ ದೇಶಸೇವೆಗಾಗಿ ಮೀಸಲಿಟ್ಟಿದ್ದರೆ, ಅಕ್ರಮ ಹಣಗಳಿಕೆಯಲ್ಲಿ #ED ಮುಂದೆ ನಿಲ್ಲಬೇಕಾದ ಪರಿಸ್ಥಿತಿ ಉದ್ಭವವಾಗುತ್ತಿರಲಿಲ್ಲ.#FakeGandhisBachaoToolKit
— BJP Karnataka (@BJP4Karnataka) June 13, 2022
ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಗಾಂಧಿ ಕುಟುಂಬ ನಡೆಸಿದ್ದು ಅಕ್ಷರಶಃ ಮನೆಗಳ್ಳತನ! ಕಾಂಗ್ರೆಸ್ ಪಕ್ಷದ 5000 ಸದಸ್ಯರ ಇಡಗಂಟಿನೊಂದಿಗೆ ಆರಂಭವಾದ ಅಸೋಸಿಯೇಟ್ ಜರ್ನಲ್ ಶೇರುಗಳನ್ನು ರಾಹುಲ್ ಗಾಂಧಿ ನೇತೃತ್ವದಲ್ಲಿ ಕಬಳಿಸಲಾಗಿದೆ. ಸ್ವಂತ ಮನೆಗೆ ಕನ್ನ ಹಾಕುವುದೆಂದರೆ ಇದೇ ಅಲ್ಲವೇ ಎಂದು ಪ್ರಶ್ನೆಗಳ ಸುರಿ ಮಳೆಗೈದಿದೆ.