IB Junior Intelligence Officer Recruitment 2025 : ಗುಪ್ತಚರ ಇಲಾಖೆಯಿಂದ ಭಾರತದೆಲ್ಲೆಡೆ ಅಗತ್ಯವಿರುವ ಜೂನಿಯರ್ ಇಂಟೆಲಿಜೆನ್ಸ್ ಆಫೀಸರ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಕರೆಯಲಾಗಿದೆ.
ಹುದ್ದೆ :
ಜೂನಿಯರ್ ಇಂಟೆಲಿಜೆನ್ಸ್ ಆಫೀಸರ್ ಗ್ರೇಡ್-2/ ಟೆಕ್ನಿಕಲ್
ಕರ್ತವ್ಯ ಸ್ಥಳ :
ಹುದ್ದೆಗಳಿಗೆ ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ :
ಒಟ್ಟು 394 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ :
• ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಇಲೆಕ್ಟ್ರಾನಿಕ್ಸ್/ ಇಲೆಕ್ಟ್ರಾನಿಕ್ಸ್ & ಟೆಲಿಕಮ್ಯುನಿಕೇಷನ್/ ಇಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್/ ಇಲೆಕ್ಟ್ರಿಕಲ್ & ಇಲೆಕ್ಟ್ರಾನಿಕ್ಸ್/ ಇನ್ಪಾರ್ಮೆಷನ್ ಟೆಕ್ನಾಲಜಿ/ ಕಂಪ್ಯೂಟರ್ ಸೈನ್ಸ್/ ಕಂಪ್ಯೂಟರ್ ಇಂಜಿನಿಯರಿಂಗ್/ ಕಂಪ್ಯೂಟರ್ ಅಪ್ಲಿಕೇಷನ್ ನಲ್ಲಿ ಡಿಪ್ಲೊಮಾ ಇನ್ ಇಂಜಿನಿಯರಿಂಗ್ ಅರ್ಹತೆ ಹೊಂದಿರಬೇಕು. ಅಥವಾ
• ಇಲೆಕ್ಟ್ರಾನಿಕ್ಸ್/ ಕಂಪ್ಯೂಟರ್ ಸೈನ್ಸ್/ ಫಿಸಿಕ್ಸ್/ ಮೆಥಮೆಟಿಕ್ಸ್ ನಲ್ಲಿ ಸೈನ್ಸ್ ಪದವಿ ಹೊಂದಿರಬೇಕು. ಅಥವಾ
• ಕಂಪ್ಯೂಟರ್ ಅಪ್ಲಿಕೇಷನ್ ನಲ್ಲಿ ಪದವಿ ಹೊಂದಿರಬೇಕು.
ವೇತನ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 25,500 – ರೂ. 81,100 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.
ವಯೋಮಿತಿ :
ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 27 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ :
• ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 05 ವರ್ಷ
• ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷ
ಆಯ್ಕೆ ವಿಧಾನ :
• ಆನ್‌ಲೈನ್ ಪರೀಕ್ಷೆ
• ಸ್ಕಿಲ್ ಟೆಸ್ಟ್
• ಸಂದರ್ಶನ/ ಪರ್ಸನಾಲಿಟಿ ಟೆಸ್ಟ್
ಪರೀಕ್ಷಾ ಕೇಂದ್ರಗಳು :
ಬೆಳಗಾವಿ, ಬೆಂಗಳೂರು, ಹುಬ್ಬಳ್ಳಿ, ಮಂಗಳೂರು, ಮೈಸೂರು, ಶಿವಮೊಗ್ಗ ಮತ್ತು ಉಡುಪಿ.
ಅರ್ಜಿ ಸಲ್ಲಿಕೆಯ ವಿಧಾನ :
ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ನಿಗದಿತ ಅರ್ಜಿ ಶುಲ್ಕದ ವಿವರ :
• ಪರೀಕ್ಷಾ ಶುಲ್ಕ – ರೂ. 100
• ನೇಮಕಾತಿ ಪ್ರಕ್ರಿಯೆ ಶುಲ್ಕ – ರೂ. 550
ಶುಲ್ಕ ಪಾವತಿಸುವ ವಿಧಾನ :
ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್, ಯುಪಿಐ ಮೂಲಕ ಶುಲ್ಕ ಪಾವತಿಸಬಹುದು ಅಥವಾ ಎಸ್.ಬಿ.ಐ ಚಲನ್ ಮೂಲಕ ಶುಲ್ಕ ಪಾವತಿಸಬಹುದು.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
• ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಆಗಸ್ಟ್ 23, 2025
• ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಸೆಪ್ಟೆಂಬರ್ 14, 2025
• ಚಲನ್ ಮೂಲಕ ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಸೆಪ್ಟೆಂಬರ್ 16, 2025
Website:https://cdn.digialm.com/EForms/configuredHtml/1258/94260/Index.html








