National – ನಾಳೆಯಿಂದ ಸಂಸತ್ ಮುಂಗಾರು ಅಧಿವೇಶನ ಪ್ರಾರಂಭ….
ಸಂಸತ್ತಿನ ಮುಂಗಾರು ಅಧಿವೇಶನ ನಾಳೆಯಿಂದ ಆರಂಭವಾಗಲಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಇಂದು ಸರ್ವಪಕ್ಷಗಳ ಸಭೆ ನಡೆಸಿತು. ಸಂಸತ್ ಭವನದಲ್ಲಿ ಆಯೋಜಿಸಲಾಗಿದ್ದ ಸಭೆಯ ಅಧ್ಯಕ್ಷತೆಯನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ವಹಿಸಿದ್ದರು. ಕಾಂಗ್ರೆಸ್ ಸೇರಿದಂತೆ DMK, AIADMK, YSR ಕಾಂಗ್ರೆಸ್, TMC ಮತ್ತಿತರ 35 ರಾಜಕೀಯ ಪಕ್ಷಗಳ ಮುಖಂಡರು ಪಾಲ್ಗೊಂಡಿದ್ದರು.
ಸಭೆಯ ಬಳಿಕ ಮಾಹಿತಿ ನೀಡಿದ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ, ಸಂಸತ್ತಿನ ಕಲಾಪವನ್ನು ಸುಗಮವಾಗಿ ನಡೆಸುವ ಹಿನ್ನೆಲೆಯಲ್ಲಿ ಎಲ್ಲ ರಾಜಕೀಯ ಪಕ್ಷಗಳ ಸಹಕಾರ, ಸಹಮತ ಕೋರಲಾಯಿತು. ವಿಪಕ್ಷಗಳ ಮುಖಂಡರು ಕೆಲವು ವಿಷಯಗಳ ಬಗ್ಗೆ ಚರ್ಚೆ ನಡೆಸಿದರು. ನಿಯಮಕ್ಕೆ ಅನುಸಾರವಾಗಿ ಸಭಾಧ್ಯಕ್ಷರು ಅನುಮತಿ ನೀಡುವ ಯಾವುದೇ ವಿಚಾರಗಳ ಬಗ್ಗೆ ರಚನಾತ್ಮಕ ಚರ್ಚೆ ನಡೆಸಲು ಸರ್ಕಾರ ಮುಕ್ತವಾಗಿದೆ ಎಂದು ಹೇಳಿದರು.
ಇದೇ ಮಂಗಳವಾರ ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಹಾಗೂ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನೇತೃತ್ವದಲ್ಲಿ ಮತ್ತೊಂದು ಸರ್ವಪಕ್ಷಗಳ ಸಭೆ ಆಯೋಜಿಸಲಾಗಿದೆ. ಇದರಲ್ಲಿ ಶ್ರೀಲಂಕಾ ಸಮಸ್ಯೆಯ ಕುರಿತು ಚರ್ಚೆ ನಡೆಸಲಾಗುವುದು ಎಂದು ತಿಳಿಸಿದರು.
Monsoon session of Parliament starts from tomorrow….