ದೆಹಲಿ ಹಿಂಸಾಚಾರ: ಆರೋಪಿಗಳ ವಿರುದ್ಧ ದೇಶದ್ರೋಹ ಪ್ರಕರಣ..!
ನವದೆಹಲಿ: ದೆಹಲಿಯಲ್ಲಿ ಗಣರಾಜ್ಯೋತ್ಸವದಂದು ನಡೆದ ಟ್ರ್ಯಾಕ್ಟರ್ ರ್ಯಾಲಿಯು ಹಿಂಸಾತ್ಮಕ ರೂಪ ಪಡೆದಿತ್ತು. ದೆಹಲಿಯಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಗಳ ವಿರುದ್ಧ ದೇಶದ್ರೋಹ ಪ್ರಕರಣವನ್ನು ದಾಖಲಿಸಿದ್ದಾರೆ. ಭಾರತೀಯ ದಂಡಸಂಹಿತೆ 124ಎ (ದೇಶದ್ರೋಹ) ಅನ್ವಯ ಪ್ರಕರಣವನ್ನು ದಾಖಲಿಸಲಾಗಿದೆ. ಇದಕ್ಕೂ ಮೊದಲು ಪೊಲೀಸರು ನಟ ದೀಪ್ ಸಿಧು ಮತ್ತು ಗ್ಯಾಂಗ್ಸ್ಟರ್ ಲಖಾ ಸಿಧಾನಾ ವಿರುದ್ಧ ಕೆಂಪುಕೋಟೆ ಬಳಿ ನಡೆದಿದ್ದ ದಾಂದಲೆಗೆ ಸಂಬಂಧಿಸಿದಂತೆ FIR ದಾಖಲಿಸಿದ್ದರು.
ಕಾಂಗ್ರೆಸ್ ಜಾರಿಗೊಳಿಸಿರುವ ಕಾಯ್ದೆಗಳನ್ನು ಕೊಲ್ಲುವುದೇ ನಮ್ಮ ಮೋದಿ ಜೀ ಉದ್ದೇಶ : ರಾಹುಲ್ ರಾಂಧಿ..!
ಕೇರಳ: ಕಾಂಗ್ರೆಸ್ ತಂದ ಕಾಯ್ದೆಗಳನ್ನ ಕೊಲ್ಲುವುದೇ ನಮ್ಮ ನರೇಂದ್ರ ಮೋದಿ ಅವರ ಉದ್ದೇಶ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕಿಡಿಕಾರಿದ್ದಾರೆ. ಮುಂಬರುವ ವಿಧಾನಸಭೆ ಚುನಾವಣೆ ಸಲುವಾಗಿ ರಾಹುಲ್ ಗಾಂಧಿ ಕೇರಳಕ್ಕೆ ಎರಡು ದಿನಗಳ ಪ್ರವಾಸ ಹಮ್ಮಿಕೊಂಡಿದ್ದು, ಈ ಸಂದರ್ಭ ಮಾತನಾಡಿದ ಅವರು, ರೈತರ ಒಳಿತಿಗಾಗಿ ಕಾಂಗ್ರೆಸ್ ಪಕ್ಷದಿಂದ ಜಾರಿಗೆ ತಂದಿದ್ದ ಭೂಸ್ವಾಧೀನ ಕಾಯ್ದೆಯನ್ನು ಪ್ರಧಾನಿ ನರೇಂದ್ರ ಮೋದಿ ಕೊಲ್ಲಲು ಪ್ರಯತ್ನಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ದೆಹಲಿ ಹಿಂಸಾಚಾರ: ನಟ ದೀಪ್ ಸಿಧು ವಿರುದ್ಧ FIR ದಾಖಲು..!
ನವದೆಹಲಿ: ಗಣರಾಜ್ಯೋತ್ಸವ ದಿನದಂದು ದೆಹಲಿಯ ಕೆಂಪುಕೋಟೆ ಬಳಿ ನಡೆದ ಟ್ರ್ಯಾಕ್ಟರ್ ರ್ಯಾಲಿ ಹಿಂಸಾಚಾರ ಪ್ರಕರಣದ ಹಿಂದೆ ನಟ ದೀಪ್ ಸಿಧು ಕೈವಾಡವಿದೆ ಎಂಬ ಆರೋಪ ಕೇಳಿ ಬಂದಿದೆ. ಇದರ ಬೆನ್ನಲ್ಲೇ ಸಾಮಾಜಿಕ ಕಾರ್ಯಕರ್ತ, ನಟ ದೀಪ್ ಸಿಧು ವಿರುದ್ಧ ಪೊಲೀಸರು FIR ದಾಖಲಿಸಿದ್ದಾರೆ. ಸಾರ್ವಜನಿಕ ಆಸ್ತಿಗಳಿಗೆ ಹಾನಿಯುಂಟುಮಾಡುವುದನ್ನು ತಡೆಯುವ ಕಾಯ್ದೆ ಹಾಗೂ ಇನ್ನಿತರ ಕಾಯ್ದೆಗಳ ವಿರುದ್ಧ ಕೊತ್ವಾಲಿ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.
ವಾಹನ ಸವಾರರಿಗೆ ಗಾಯದ ಮೇಲೆ ಬರೆ : ಮತ್ತೆ ಪೆಟ್ರೋಲ್, ಡೀಸಲೆ ಬೆಲೆ ಏರಿಕೆ
ಬೆಂಗಳೂರು : ದಿನೇ ದಿನೇ ಪೆಟ್ರೋಲ್ ಡೀಸೆಲ್ ದರದಲ್ಲಿ ಏರಿಕೆಯಾಗ್ತಲೇ ಇರುವುದು ವಾಹನ ಸವಾರರಿಗೆ ದೊಡ್ಡ ತಲೆನೋವಾಗಿದೆ. ಇದೀಗ ವಾಹನ ಸವಾರರಿಗೆ ಮತ್ತೆ ಬಿಗ್ ಶಾಕ್ ಎದುರಾಗಿದ್ದು, ಇಂದು ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಮತ್ತೆ ಏರಿಕೆಯಾಗಿದೆ. ಈ ಮೂಲಕ ಬೆಂಗಳೂರಿನಲ್ಲಿ 1 ಲೀಟರ್ ಪೆಟ್ರೋಲ್ ಬೆಲೆ ಸುಮಾರು 89 ರೂ. ತಲುಪಿದೆ.ಇನ್ನೂ ರಾಷ್ಟ್ರ ರಾಜದಾನಿ ದೆಹಲಿಯಲ್ಲಿ ಇಂದು ಪ್ರತಿ ಲೀಟರ್ ಪೆಟ್ರೋಲ್ ಬೆಲೆ 86.30 ರೂ. ಇದೆ. ಮುಂಬೈನಲ್ಲಿ 92.86 ರೂ. ಜೈಪುರದಲ್ಲಿ 93.49 ರೂ. ಬೆಂಗಳೂರಿನಲ್ಲಿ 89.21 ರೂ. ಹೈದರಾಬಾದ್ ನಲ್ಲಿ 89.77 ರೂ. ತಿರುವನಂತಪುರದಲ್ಲಿ 87.58 ರೂ. ಚೆನ್ನೈನಲ್ಲಿ 88.82 ರೂ. ತಲುಪಿದೆ. ಇನ್ನು ಡೀಸೆಲ್ ಬೆಲೆಯಲ್ಲೂ ಏರಿಕೆಯಾಗಿದ್ದು, ಬೆಂಗಳೂರಿನಲ್ಲಿ 81.10 ರೂ. ದೆಹಲಿಯಲ್ಲಿ ಲೀಟರ್ ಡೀಸೆಲ್ ಬೆಲೆ 76.48 ರೂ. ಇದ್ದರೆ, ಚೆನ್ನೈನಲ್ಲಿ 81.71 ರೂ. ಮುಂಬೈನಲ್ಲಿ 83.30 ರೂ. ಇದೆ.
ಭಾರತ ವಾಯುನೆಲೆಗೆ ಬಂದು ಲ್ಯಾಂಡ್ ಆದ 3 ರಫೇಲ್ ಯುದ್ಧ ವಿಮಾನಗಳು..!
ನವದೆಹಲಿ: ಭಾರತಕ್ಕೆ ಮತ್ತೆ 3 ರಫೇಲ್ ಯುದ್ಧವಿಮಾನಗಳು ಬಂದು ಲ್ಯಾಂಡ್ ಆಗಿವೆ. ಫ್ರಾನ್ಸ್ ನ ಡಾಸೊ ಏವಿಯೇಷನ್ ಕಂಪನಿ ನಿರ್ಮಿತ ಮೂರು ರಫೇಲ್ ಯುದ್ಧ ವಿಮಾನಗಳು ಬುಧವಾರ ಗುಜರಾತ್ ನ ಜಾಮ್ ನಗರ್ ವಾಯುನೆಲೆಗೆ ಬಂದಿಳಿದಿವೆ. ಫ್ರಾನ್ಸ್ನಿಂದ ಹೊರಟು ಸುಮಾರು ಏಳು ಸಾವಿರ ಕಿ.ಮೀ ಕ್ರಮಿಸಿ 3ನೇ ಹಂತದಲ್ಲಿ ಭಾರತಕ್ಕೆ ತಲುಪಿರುವ ಯುದ್ಧ ವಿಮಾನಗಳು ವಾಯುಪಡೆಗೆ ಆನೆಬಲ ತುಂಬಿವೆ. ಈ ಸಂಬಂಧ ಅಧಿಕೃತವಾಗಿ ಟ್ವೀಟ್ ಮಾಡಿರುವ ಭಾರತೀಯ ವಾಯುಸೇನೆಯು, ‘3ನೇ ಹಂತದ 3 ರಫೇಲ್ ಯುದ್ಧವಿಮಾನಗಳು IAAF ವಾಯುನೆಲೆಗೆ ಬಂದಿಳಿದಿವೆ. ಅವುಗಳು ತಡೆರಹಿತವಾಗಿ ಏಳು ಸಾವಿರ ಕಿ.ಮೀ ದೂರ ಕ್ರಮಿಸಿ ಇಲ್ಲಿಗೆ ತಲುಪಿವೆ. ಯುಎಇಯಲ್ಲಿ ಇರುವ ಫ್ರಾನ್ಸ್ನ ವಾಯುನೆಲೆಯಲ್ಲಿ ಇಂಧನ ತುಂಬಿಸಿಕೊಳ್ಳುವುದಕ್ಕಾಗಿ ಒಂದು ಸಲ ನಿಲುಗಡೆ ಮಾಡಲಾಗಿದೆ. ಯುಎಇ ವಾಯುಪಡೆ ಒದಗಿಸಿದ ಇಂಧನ ಬೆಂಬಲವನ್ನು ಭಾರತೀಯ ವಾಯುಪಡೆ ಪ್ರಶಂಸಿಸುತ್ತದೆ’ ಎಂದು ತಿಳಿಸಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel