ರಾಷ್ಟ್ರೀಯ ಪಕ್ಷಗಳು ನಮ್ಮವರ ಕಾಲು ಹಿಡಿಯುತ್ತಿವೆ : ಕುಮಾರಸ್ವಾಮಿ
ಬೆಂಗಳೂರು : ಗ್ರಾಮ ಪಂಚಾಯಿತಿ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಈಗ ಗ್ರಾಮ ಪಂಚಾಯಿತಿ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕಾಗಿ ಕಸರತ್ತುಗಳು ಆರಂಭವಾಗಿವೆ.
ಹೀಗಾಗಿ ರಾಜಕೀಯ ಪಕ್ಷಗಳು ಅಧಿಕಾರಕ್ಕಾಗಿ ಬೇರೆ ಬೇರೆ ಪಕ್ಷ ಬೆಂಬಲಿತ ಗ್ರಾಮ ಪಂಚಾಯಿತಿ ಸದಸ್ಯರನ್ನು ಸೆಳೆಯುತ್ತಿವೆ.
ಈ ವಿಚಾರವಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದು,ರಾಷ್ಟ್ರೀಯ ಪಕ್ಷಗಳು ನಮ್ಮ ಮುಖಂಡರ ಕಾಲು ಹಿಡಿಯುವುದನ್ನು ನಿಲ್ಲಿಸಿ, ಮರ್ಯಾದೆ ಉಳಿಸಿಕೊಳ್ಳಬೇಕು ಎಂದು ಟೀಕಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಗ್ರಾಮ ಪಂಚಾಯಿತಿ ಚುನಾವಣೆ ನಂತರದ ಬೆಳವಣಿಗೆಗಳು ಆಘಾತಕಾರಿಯಾಗಿವೆ.
ಮೀಸಲಾತಿ, ಬೆದರಿಕೆ ಮೂಲಕ ಜೆಡಿಎಸ್ ಬೆಂಬಲಿತ ಸದಸ್ಯರನ್ನು ಸೆಳೆಯುವ ಪ್ರಯತ್ನಗಳು ಅಲ್ಲಲ್ಲಿ ನಡೆಯುತ್ತಿವೆ.
ಕನ್ನಡಿಗನಿಗೆ ಕನ್ನಡ ಧ್ವಜ ಭಗವಾಧ್ವಜಕ್ಕೂ ಮಿಗಿಲು : ಹೆಚ್ ಡಿಕೆ
ಅದಕ್ಕೆ ನಮ್ಮವರೂ ತಿರುಗೇಟು ನೀಡುತ್ತಿದ್ದಾರೆ. ಆದರೆ ಅತಿ ಹೆಚ್ಚು ಸ್ಥಾನ ಗಳಿಸಿದೆವು ಎಂದು ಹೇಳಿಕೊಳ್ಳುವ ರಾಷ್ಟ್ರೀಯ ಪಕ್ಷಗಳಿಗೆ ಯಾಕೆ ಇಂಥ ಗತಿ? ತಿಳಿಯದು.
ರಾಷ್ಟ್ರೀಯ ಪಕ್ಷಗಳು ಜೆಡಿಎಸ್ ಬೆಂಬಲಿತ ಗ್ರಾಮ ಪಂಚಾಯಿತಿ ಸದಸ್ಯರ ಕಾಲುಗಳನ್ನು ಹಿಡಿಯುತ್ತಿವೆ,
ಅವರ ಮನೆ ಬಾಗಿಲಿಗೆ ಅಲೆಯುತ್ತಿವೆ ಎಂದರೆ, ಕನ್ನಡಿಗರು ಜೆಡಿಎಸ್ಗೆ ಎಷ್ಟು ಬಲ ತುಂಬಿದ್ದಾರೆ ಎಂಬುದು ಯಾರಿಗಾದರೂ ಗೊತ್ತಾಗುವ ವಿಚಾರ.
ರಾಷ್ಟ್ರೀಯ ಪಕ್ಷಗಳು ನಮ್ಮ ಮುಖಂಡರ ಕಾಲು ಹಿಡಿಯುವುದನ್ನು ನಿಲ್ಲಿಸಿ, ಮರ್ಯಾದೆ ಉಳಿಸಿಕೊಳ್ಳಬೇಕು ಎಂದು ವ್ಯಂಗ್ಯವಾಡಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel