ಬೆಂಗಳೂರು: ಇಂದು ನರೇಂದ್ರ ಮೋದಿಯವರ 70ನೇ ವರ್ಷದ ಹುಟ್ಟುಹಬ್ಬವಾಗಿದ್ದು, ಟ್ವಿಟ್ಟರ್ ನಲ್ಲಿ #NationalUnemploymentDay ಅಭಿಯಾನ ಆರಂಭವಾಗಿದೆ. ಇದಕ್ಕೆ ರಾಜ್ಯದ ಕಾಂಗ್ರೆಸ್ ನಾಯಕರು ಸಾಥ್ ನೀಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ವರ್ಷಕ್ಕೆ 2 ಕೋಟಿ ಉದ್ಯೋಗ ನೀಡುವ ಭರವಸೆಯೊಂದಿಗೆ ಅಧಿಕಾರಕ್ಕೆ ಬಂದ ನರೇಂದ್ರ ಮೋದಿ ಅವರು ಕಳೆದ 45 ವರ್ಷಗಳಲ್ಲಿ ಅತ್ಯಧಿಕ ನಿರುದ್ಯೋಗಕ್ಕೆ ಕಾರಣಕರ್ತರಾಗಿದ್ದಾರೆ. ಇದರ ವಿರುದ್ಧ ಸಿಡಿದೆದ್ದಿರುವ ದೇಶದ ಯುವಜನತೆ ಪ್ರಾರಂಭಿಸಿರುವ ಅಭಿಯಾನವನ್ನು ನಾನು ಬೆಂಬಲಿಸುತ್ತೇನೆ.
ನರೇಂದ್ರ ಮೋದಿ ಆಡಳಿತದ ನಿರುದ್ಯೋಗ ಪರ್ವ ನಿರಾಂತಕವಾಗಿ ಮುಂದುವರಿದಿದೆ. ಕಳೆದ 6 ತಿಂಗಳಲ್ಲಿ ಸಂಬಳ ಪಡೆಯುವ ಎರಡು ಕೋಟಿ ಉದ್ಯೋಗಗಳು ಮತ್ತು ಒಟ್ಟು 12 ಕೋಟಿ ಉದ್ಯೋಗಗಳು ನಷ್ಟವಾಗಿವೆ. ಉದ್ಯೋಗ ಸೃಷ್ಟಿಗೆ ನಿಮ್ಮ ಯೋಚನೆ ಮತ್ತು ಯೋಜನೆ ಏನು? ದೇಶದ ಯುವಜನ ಕೇಳುತ್ತಿದ್ದಾರೆ ಎಂದು ತಿವಿದಿದ್ದಾರೆ.
ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಟ್ವಿಟ್ಟರ್ ನಲ್ಲಿ, ವರ್ಷಕ್ಕೆ ಎರಡು ಕೋಟಿ ಉದ್ಯೋಗದ ಪೊಳ್ಳು ಭರವಸೆ ನೀಡಿ, ತಮ್ಮ ಎಡಬಿಡಂಗಿ ಆಡಳಿತ ನೀತಿಯ ಮೂಲಕ ಕಳೆದ 6 ತಿಂಗಳಲ್ಲಿ 2.1 ಕೋಟಿ ಯುವಕರ ಉದ್ಯೋಗ ಕಸಿದು ಅವರನ್ನು ಬೀದಿಗೆ ಬರುವಂತೆ ಮಾಡಿದ ನರೇಂದ್ರ ಮೋದಿಯವರ ಜನ್ಮದಿನದ ಅರ್ಥಾತ್ ‘ರಾಷ್ಟ್ರೀಯ ನಿರುದ್ಯೋಗ ದಿನಾಚರಣೆ’ಯ ಹಾರ್ದಿಕ ಶುಭಾಶಯಗಳು ಎಂದು ಬರೆದುಕೊಂಡಿದ್ದಾರೆ.
ವರ್ಷಕ್ಕೆ 2 ಕೋಟಿ ಉದ್ಯೋಗ ನೀಡುವ ಭರವಸೆಯೊಂದಿಗೆ ಅಧಿಕಾರಕ್ಕೆ ಬಂದ @narendramodi ಅವರು ಕಳೆದ 45 ವರ್ಷಗಳಲ್ಲಿ ಅತ್ಯಧಿಕ ನಿರುದ್ಯೋಗಕ್ಕೆ ಕಾರಣಕರ್ತರಾಗಿದ್ದಾರೆ.
ಇದರ ವಿರುದ್ಧ ಸಿಡಿದೆದ್ದಿರುವ ದೇಶದ ಯುವಜನತೆ ಪ್ರಾರಂಭಿಸಿರುವ ಅಭಿಯಾನವನ್ನು ನಾನು ಬೆಂಬಲಿಸುತ್ತೇನೆ.
1/2#NationalUnemploymentDay pic.twitter.com/YYWNW6DgKN— Siddaramaiah (@siddaramaiah) September 17, 2020