ನವದೆಹಲಿ: ಮೊದಲ ಹಂತದ ಕೊರೊನಾ ಲಸಿಕೆ ಹಂಚಿಕೆ ಸಂಕ್ರಾಂತಿ ಬಳಿಕ ಜನವರಿ 16ರಿಂದ ಪ್ರಾರಂಭವಾಗಲಿದ್ದು, ಮೊದಲ ಹಂತದಲ್ಲಿ 3 ಕೋಟಿ ಜನರಿಗೆ ಲಸಿಕೆ ವೆಚ್ಚವನ್ನು ಕೇಂದ್ರವು ಭರಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಣೆ ಮಾಡಿದ್ದಾರೆ.

ಕೊರೊಲಾ ಲಸಿಕೆ ಹಂಚಿಕೆ ಸಂಬಂಧ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ ವೇಳೆ ಈ ವಿಷಯ ತಿಳಿಸಿದ ಮೋದಿ, “ಮೂರು ಕೋಟಿ ಕೊರೊನಾ ವಾರಿಯರ್ಸ್ ಮತ್ತು ಫ್ರಂಟ್‍ಲೈನ್ ಕಾರ್ಯಕರ್ತರಿಗೆ ಮೊದಲ ಹಂತದ ವ್ಯಾಕ್ಸಿನೇಷನ್ ವೆಚ್ಚವನ್ನು ಕೇಂದ್ರವು ಭರಿಸಲಿದೆ ಎಂದು ತಿಳಿಸಿದ್ದಾರೆ.

ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳ ವೈದ್ಯರು, ನೈರ್ಮಲ್ಯ ಕಾರ್ಮಿಕರು, ಇತರ ಮುಂಚೂಣಿ ಕಾರ್ಮಿಕರು, ರಕ್ಷಣಾ ಪಡೆ, ಪೆÇಲೀಸ್ ಮತ್ತು ಇತರ ಅರೆಸೈನಿಕ ಪಡೆಗಳಿಗೆ ಮೊದಲ ಹಂತದಲ್ಲಿ ಲಸಿಕೆ ನೀಡಲಾಗುವುದು ಎಂದು ಪ್ರಧಾನಿ ಹೇಳಿದ್ದಾರೆ.

ಎರಡನೇ ಹಂತದಲ್ಲಿ 50 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಮತ್ತು 50 ವರ್ಷಕ್ಕಿಂತ ಕಡಿಮೆ ವಯಸ್ಸಿನ ಅಸ್ವಸ್ಥ ಸ್ಥಿತಿಯಲ್ಲಿರುವವರಿಗೆ ಲಸಿಕೆ ನೀಡಲಾಗುವುದು. ನಮ್ಮ ನಾಗರಿಕರಿಗೆ ಪರಿಣಾಮಕಾರಿಯಾದ ಲಸಿಕೆಗಳನ್ನು ಒದಗಿಸಲು ದೇಶದ ವಿಜ್ಞಾನಿಗಳು ಮತ್ತು ವೈದ್ಯಕೀಯ ತಜ್ಞರು ಎಲ್ಲಾ ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡಿದ್ದಾರೆ. ಲಸಿಕೆ ತೆಗೆದುಕೊಂಡ ನಂತರವೂ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕು ಎಂದು ಪ್ರಧಾನಿ ಕಿವಿಮಾತು ಹೇಳಿದ್ದಾರೆ.
ವ್ಯಾಕ್ಸಿನೇಷನ್ ಬಗ್ಗೆ ಯಾವುದೇ ವದಂತಿಗಳು ಹರಡದಂತೆ ನೋಡಿಕೊಳ್ಳಬೇಕೆಂದು ಎಂದು ರಾಜ್ಯಗಳಿಗೆ ನಿರ್ದೇಶನ ನೀಡಿದ ಮೋದಿ, ಸಾಮಾಜಿಕ, ಧಾರ್ಮಿಕ ಗುಂಪುಗಳು ಲಸಿಕೆ ಅಭಿಯಾನದಲ್ಲಿ ಭಾಗಿಯಾಗಬೇಕಿದೆ ಎಂದು ಕರೆ ನೀಡಿದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








