ನವದೆಹಲಿ: ರಾಜಸ್ಥಾನದಲ್ಲಿ ಉದ್ಭವವಾಗಿರುವ ರಾಜಕೀಯ ಬಿಕ್ಕಟ್ಟಿಗೆ ಕೇಂದ್ರದ ಬಿಜೆಪಿ ಸರ್ಕಾರವೇ ಕಾರಣ ಎಂದು ವಾಗ್ದಾಳಿ
ಮುಂದುವರೆಸಿರುವ ಎಐಸಿಸಿ ಮಜಿ ಅಧ್ಯಕ್ಷ ರಾಹುಲ್ ಗಾಂಧಿ, #SpeakUpForDemocracy ಟ್ವಿಟರ್ ಅಭಿಯಾನ ಆರಂಭಿಸಿದ್ದಾರೆ.
ರಾಜಸ್ಥಾನದ ಕಾಂಗ್ರೆಸ್ ಸರ್ಕಾರವನ್ನು ಉರುಳಿಸಲು ಬಿಜೆಪಿ ಪಿತೂರಿ ನಡೆಸಿದೆ. ರಾಜ್ಯಪಾಲರು ವಿಧಾನಸಭೆ ಅಧಿವೇಶನ ನಡೆಸಲು ಅನುಮತಿ ನೀಡಬೇಕು. ಇದರಿಂದ ಜನರ ಮುಂದೆ ಸತ್ಯ ಹೊರ ಬರುತ್ತದೆ ಎಂದು ರಾಹುಲ್ ತಿಳಿಸಿದ್ದಾರೆ.
`ಈ ದೇಶದ ಜನರು ಪ್ರಜಾಪ್ರಭುತ್ವವನ್ನು ರಕ್ಷಿಸುತ್ತಾರೆ’ ಎಂಬ ಹ್ಯಾಶ್ ಟ್ಯಾಗ್‍ನೊಂದಿಗೆ ಆರಂಭವಾಗಿರುವ ಅಭಿಯಾನಕ್ಕೆ ದೇಶಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು ಕೈಜೋಡಿಸಿದ್ದಾರೆ. ನಾಳೆ ದೇಶಾದ್ಯಂತ ಬಿಜೆಪಿ ವಿರುದ್ಧ ಪ್ರತಿಭಟನೆ ನಡೆಸಲು ಕಾಂಗ್ರೆಸ್ ಕರೆ ನೀಡಿದೆ.
ಕೇಂದ್ರ ಸರಕಾರದ ಧೋರಣೆ ವಿರುದ್ಧ ರಾಜಭವನಗಳ ಮುಂದೆ ಕಾಂಗ್ರೆಸ್ ಪ್ರತಿಭಟನೆ ನಡೆಸಲಿದೆ.
ಬಿಜೆಪಿ “ಸಾಂವಿಧಾನಿಕ ಸಂಸ್ಥೆಗಳು ಮತ್ತು ಮೌಲ್ಯಗಳ ಮೇಲೆ ನಿರಂತರವಾಗಿ ದಾಳಿ ಮಾಡುತ್ತಿದೆ” ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅವಿನಾಶ್ ಪಾಂಡೆ ಆರೋಪಿಸಿದ್ದಾರೆ.
ಕರ್ನಾಟಕದಲ್ಲಿ ಈಗಾಗಲೇ ಕಾಂಗ್ರೆಸ್ ಅಧಿಕಾರ ಕಳೆದುಕೊಂಡಿದೆ. ಕರ್ನಾಟಕ ಬಳಿಕ ಮಧ್ಯಪ್ರದೇಶದಲ್ಲೂ ಅಪರೇಶನ್ ಕಮಲಕ್ಕೆ ಸರ್ಕಾರ ಬಲಿಯಾಗಿದೆ. ಈಗ ರಾಜಸ್ತಾನದಲ್ಲೂ ಅಧಿಕಾರ ಕಳೆದುಕೊಳ್ಳುವ ಭೀತಿ ಎದುರಿಸುತ್ತಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ವಿರುದ್ಧ ದೇಶಾದ್ಯಂತ ಹೋರಾಟಕ್ಕೆ ಕಾಂಗ್ರೆಸ್ ಸಜ್ಜಾಗಿದೆ.
ಏಪ್ರಿಲ್ ಒಂದರಿಂದ ನೌಕರರ ಸಂಬಳದ ರೂಲ್ಸ್ ಕಂಪ್ಲೀಟ್ ಚೇಂಜ್: ಕೈಗೆ ಬರೋ ಕಾಸು ಕಮ್ಮಿ ಆದ್ರೂ ರಿಟೈರ್ಮೆಂಟ್ ಲೈಫ್ ಸೂಪರ್
ತಿಂಗಳಿಡೀ ಕತ್ತೆ ಥರ ದುಡಿಯೋದೆ ಒಂದನೇ ತಾರೀಖು ಬರೋ ಆ ಸಂಬಳದ ಮೆಸೇಜ್ ನೋಡೋಕೆ ಅಲ್ವಾ? ಆದ್ರೆ ಏಪ್ರಿಲ್ ಒಂದರಿಂದ ನಮ್ಮ ನಿಮ್ಮೆಲ್ಲರ ಸಂಬಳದ ರೂಲ್ಸ್ ಕಂಪ್ಲೀಟ್...








