ಗ್ರಹಚಾರ ದೋಷಕ್ಕೆ ಶಾಸ್ತ್ರದ ಪರಿಹಾರ….?
ಗ್ರಹಗಳಿಂದ ಸೂಚಿತವಾದ ದೋಷದ ನಿವೃತ್ತಿಗಾಗಿ ಗ್ರಹಾರಾಧನೆಯನ್ನು ಶಾಸ್ತ್ರ ಹೇಳುತ್ತದೆ. “ದುಷ್ಟಾರಿಷ್ಟೇ ಸಮಾಯಾತೇ ಕರ್ತವ್ಯಂ ಗ್ರಹಶಾಂತಿಕಮ್” ಎಂಬುದಾಗಿ. ಮಳೆ, ಆಯುಷ್ಯ, ಆರೋಗ್ಯ, ಪುಷ್ಟಿ ಮೊದಲಾದ ಉದ್ದೇಶದಲ್ಲೂ ಗ್ರಹಗಳನ್ನು ಆರಾಧಿಸುವುದಿದೆ. ಈ ಗ್ರಹಾರಾಧನೆ ಸಾಮಾನ್ಯವಾಗಿ ಐದು ವಿಧ: 1)ಪೂಜೆ 2)ಅಧ್ವರ 3)ಜಪ 4)ಸ್ತೋತ್ರ 5)ದಾನ ಎಂಬುದಾಗಿ.
ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564
1)ಪೂಜೆ : ನವಗ್ರಹ ಪೂಜೆಯಲ್ಲಿ ನವಗ್ರಹ ಪ್ರತಿಮೆಗಳು ಅಥವಾ ಆಯಾಯ ಧಾನ್ಯಗಳು ಪ್ರತೀಕವೆನಿಸುತ್ತವೆ. ಆದಿತ್ಯಾದಿ ನವಗ್ರಹದ ಪ್ರತಿಮೆ ಇರುವಲ್ಲಿಗೆ ಹೋಗಿ ಅಭಿಷೇಕಾದಿ ಪೂಜೆಗಳನ್ನು ಮಾಡಿಸಿ ಪ್ರದಕ್ಷಿಣೆ ನಮಸ್ಕಾರಗಳ ಮೂಲಕ ಗ್ರಹಪ್ರೀತಿಯನ್ನು ಸಂಪಾದಿಸ ಬಹುದು. ಈ ಸಂದರ್ಭದಲ್ಲಿ ಆಯಾಯ ಗ್ರಹಗಳಿಗೆ ಪ್ರಿಯವಾದ ನೈವೇದ್ಯವನ್ನು ನಿವೇದಿಸ ಬಹುದು.
ಸೂರ್ಯನಿಗೆ ಗುಡಾನ್ನ ಚಂದ್ರನಿಗೆ ಪಾಯಸ, ಕುಜನಿಗೆ ಪರಿಮಳಿಸುವ ಗಂಜಿ, ಬುಧನಿಗೆ ಕ್ಷೀರನ್ನ, ಗುರುವಿಗೆ ಮೊಸರನ್ನ, ಶುಕ್ರನಿಗೆ ಘೃತಾನ್ನ, ಶನಿಗೆ ಎಳ್ಳು ಮಿಶ್ರಿತಾನ್ನ (ಕೃಸರ) ರಾಹುವಿಗೆ ಕುಂಬಳ ಕಾಯಿ ಮತ್ತು ಉದ್ದು ಮಿಶ್ರಿತವಾದ ಅನ್ನ ಹಾಗೂ ಕೇತುವಿಗೆ ಚಿತ್ರಾನ್ನವು ಅತ್ಯಂತ ಪ್ರಿಯವಾದ ಅನ್ನವೆನಿಸಿದ್ದು ಇದರ ನೈವೇದ್ಯ, ಆಹುತಿಗಳು ಗ್ರಹಪ್ರೀತಿಕರವೆಂದು ನವಗ್ರಹಕಾರಿಕೆ ಹೇಳುತ್ತದೆ.
2)ಅಧ್ವರ : ಅಧ್ವರ ಎಂದರೆ ಹೋಮ. ನವಗ್ರಹಾಂತರ್ಯಾಮಿ ಲಕ್ಷ್ಮೀನರಸಿಂಹನನ್ನು ಉದ್ದೇಶಿಸಿ ಅಗ್ನಿಯಲ್ಲಿ ಆಹುತಿಯನ್ನು ಕೊಡುವುದು. ನವಗ್ರಹಗಳ ಮಂತ್ರದಿಂದ ಪ್ರತ್ಯೇಕ ಪ್ರತ್ಯೇಕವಾಗಿ ಸಮಿತ್, ಚರು ಮತ್ತು ಆಜ್ಯಗಳಿಂದ ೨೮ ಅಥವಾ ೧೦೮ ಸಂಖ್ಯೆಯ ಆಹುತಿಗಳನ್ನು ಕೊಡ ಬೇಕು. ಚರು ಎಂದರೆ ಅನ್ನ, ಆಯಾಯ ಗ್ರಹಗಳಿಗೆ ಪ್ರಿಯವಾದ ಅನ್ನವನ್ನು ಹಿಂದೆ ಹೇಳಿದೆ.
ಸೂರ್ಯಾದಿ ಗ್ರಹಗಳಿಗೆ ಗುಡಾನ್ನವೇ ಮೊದಲಾದ ಆಯಾಯ ಅನ್ನದಿಂದಲೇ ಹೋಮಿಸುವುದು ಅತ್ಯಂತ ಉಚಿತ. ಹಾಗೆಯೇ ಪ್ರತಿಯೊಂದು ಗ್ರಹಗಳಿಗೂ ಅದರದೇ ಆದ ಸಮಿತ್ತುಗಳಿವೆ.
*ಸೂರ್ಯನಿಗೆ ಅರ್ಕ (ಎಕ್ಕ)
*ಚಂದ್ರನಿಗೆ ಪಲಾಶ (ಮುತ್ತುಗ)
*ಕುಜನಿಗೆ ಖದಿರ,
*ಬುಧನಿಗೆ ಉತ್ತರಣೆ
*ಗುರುವಿಗೆ ಅಶ್ವತ್ಥ,
*ಶುಕ್ರನಿಗೆ ಔದುಂಬರ (ಅತ್ತಿ
*ಶನಿಗೆ ಶಮೀ,
*ರಾಹುವಿಗೆ ದೂರ್ವ
*ಕೇತುವಿಗೆ ಕುಶ
ಈ ಸಮಿತ್ತುಗಳಿಂದ, ಗುಡಾನ್ನಾದಿ ಚರುವಿನಿಂದ ಮತ್ತು ದನದ ತುಪ್ಪದಿಂದ ಹೋಮಿಸುವುದೇ ನವಗ್ರಹ ಹೋಮ.
(ಈ ನವಗ್ರಹ ಸಮಿಧೆಗಳು ಇಂದಿಗೂ ಯಥೇಷ್ಟ ಉಪಲಬ್ಧವಿದೆ. ಸಮಿಧೆಗಳ ಪೂರ್ವ ತಯಾರಿ ಸಾಧ್ಯವಾಗದಿದ್ದಲ್ಲಿ ಹೋಮವನ್ನೇ ಮುಂದೆ ಹಾಕಿ ಸಾಮಗ್ರಿ ದೊರೆತ ಮೇಲೆಯೇ ಹೋಮಿಸುವುದು ಶಿಷ್ಟ ಪ್ರವೃತ್ತಿ (ದ್ರವ್ಯಗಳು ಸಿಗದೇ ಅನಿವಾರ್ಯವಾದಾಗ ಪ್ರತ್ಯಾಮ್ನಾಯವಾಗಿ ಬದಲಿ ದ್ರವ್ಯಗಳನ್ನು ಸ್ವೀಕರಿಸುವುದಕ್ಕೆ ಶಾಸ್ತ್ರದ ಅನುಮತಿಯಿದೆ. ) ಆದ್ದರಿಂದ ಪೌರೋಹಿತರು ಆಯಾಯ ಸಮಿತ್ತುಗಳಿಲ್ಲದೆ ಗ್ರಹಯಜ್ಞ ಸಾಧ್ಯವಿಲ್ಲವೆಂಬ ದೃಢ ನಿಲುವನ್ನು ತಾಳ ಬೇಕು.)
ಒಂದೊಂದು ಸಮಿಧೆಯ ಹೋಮಕ್ಕೂ ಶಾಸ್ತ್ರಕಾರರು ಫಲ ಹೇಳುತ್ತಾರೆ.
ಅರ್ಕೇಣ ವ್ಯಾಧಿನಾಶಃ ಸ್ಯಾತ್ ಫಲಾಶೈಃ ಸರ್ವಸಂಪದಃ |
ಖದಿರೇಣಾರ್ಥಸಿದ್ಧಿಃಸ್ಯಾತ್ ಅಪಾಮಾರ್ಗಃ ಸುಪುತ್ರದಃ ||
ಆಶ್ವತ್ಥೇನ ಪ್ರಜಾವೃದ್ಧಿಃ ಸೌಭಾಗ್ಯಂ ಸ್ಯಾದೌದುಂಬರಾತ್ |
ಶಮಿನಾ ಪಾಪಶಮನಂ ದೂರ್ವಯಾಯುಷ್ಯವರ್ಧನಮ್ll
ಕುಶೇನಬ್ರಹ್ಮವರ್ಚಃಸ್ಯಾದಿತ್ಯೇತದ್ ಸಮಿಧಾಂ ಫಲಮ್|
ಗ್ರಹಗಳಿಗೆ ಕೊಟ್ಟ ಆಹುತಿಯ ದಶಾಂಶ ಸಂಖ್ಯೆಯಲ್ಲಿ ಅಧಿದೇವತೆ, ಪ್ರತ್ಯಧಿದೇವತೆಗಳಿಗೂ ಆಹುತಿಯನ್ನು ಕೊಡ ಬೇಕು.
ಕೊನೆಯಲ್ಲಿ ದುರ್ಗಾದಿ ಕೃತು ಷಡ್ಗುಣ್ಯ ದೇವತೆಗಳಿಗೆ
ಇಂದ್ರಾದಿ ಅಷ್ಟ ದಿಕ್ಪಾಲಕದೇವತೆಗಳನ್ನೂ ಪೂಜಿಸಿ, ಆಹುತಿ ನೀಡಿ ಪ್ರಾಯಶ್ಚಿತ ಹವನ ಮಾಡುತ್ತಾರೆ.ಇದು ಹೋಮದ ವಿಚಾರ..
3)ಜಪ : ನವಗ್ರಹಗಳಿಗೆ ಸಂಬಂಧಿಸಿದ ಒಂಬತ್ತು ವೇದಮಂತ್ರಗಳಿವೆ. ಇದರ ಉಪದೇಶವಿದ್ದವರು ಜಪ ಮಾಡ ಬೇಕು ಅವು ಆಯಾಯ ಗ್ರಹಗಳಿಗೆ ಪ್ರಿಯವಾದ ಮಂತ್ರಗಳು. ಅಂದರೆ ಆ ಮಂತ್ರದ ಮೂಲಕ ಪರಮಾತ್ಮನನ್ನು ಧ್ಯಾನಿಸಿದಾಗ ಗ್ರಹಪ್ರೀತಿಯು ಉಂಟಾಗುತ್ತದೆ.
ಯಾವ ಗ್ರಹಗಳ ಜಪ ಎಷ್ಟು ಮಾಡ ಬೇಕೆಂಬುದರ ಬಗ್ಗೆ ಎರಡು ಕ್ರಮವಿದೆ. ಒಂದು ಕ್ರಮದಂತೆ ಜಪಸಂಖ್ಯೆಯನ್ನು ಕೋಷ್ಟಕದಲ್ಲಿ ಕೊಡಲಾಗಿದೆ. ಇನ್ನೊಂದು ಕ್ರಮದಂತೆ ಆಯಾಯ ಗ್ರಹಗಳ ದಶಾವರ್ಷಕ್ಕೆ ಅನುಗುಣವಾಗಿ ಜಪ ಮಾಡ ಬೇಕು. ಅಂದರೆ ಆದಿತ್ಯನ ದಶಾವರ್ಷ ೬ ವರ್ಷವಾದ್ದರಿಂದ ೬,೦೦೦ ಸಂಖ್ಯೆಯಲ್ಲಿ ಆದಿತ್ಯನ ಜಪವಾಗ ಬೇಕು. ಹಾಗೆಯೇ ಚಂದ್ರನಿಗೆ ೧೦,೦೦೦, ಕುಜನಿಗೆ ೭,೦೦೦, ಬುಧನಿಗೆ ೧೭,೦೦೦, ಗುರುವಿಗೆ ೧೬,೦೦೦, ಶುಕ್ರನಿಗೆ ೨೦,೦೦೦, ಶನೈಶ್ಚರನಿಗೆ ೧೯,೦೦೦, ರಾಹುವಿಗೆ ೧೮,೦೦೦, ಹಾಗೂ ಕೇತುವಿಗೆ ೭,೦೦೦ ಸಂಖ್ಯೆಯಲ್ಲಿ ಜಪವಾಗ ಬೇಕು. ಸ್ವಂತ ಕರ್ತೃವೇ ಇಷ್ಟು ಜಪ ಮಾಡುವುದು ದುಃಸಾಧ್ಯವಾದ್ದರಿಂದ ಶ್ರೋತ್ರಿಯ ಬ್ರಾಹ್ಮಣರ ಮೂಲಕ ಮಾಡಿಸ ಬಹುದು. ಅಲ್ಲದೇ
ಯಜಮಾನನು ಯಥಾಶಕ್ತಿ ಗಾಯತ್ರೀ ಜಪದಿಂದಲೂ ಗ್ರಹದೋಷವನ್ನು ಪರಿಹರಿಸಿಕೊಳ್ಳ ಬೇಕು
4)ಸ್ತೋತ್ರ :
ಪುರಾಣಗಳಲ್ಲಿ ಬಂದ ಅಥವಾ ಅಪರೋಕ್ಷ ಜ್ಞಾನಿಗಳಿಂದ ರಚಿತವಾದ ನವಗ್ರಹ ಸ್ತೋತ್ರಗಳಿವೆ. ಇವನ್ನು ಪಠಿಸುವುದೂ ಗ್ರಹಪ್ರೀತಿ ಸಾಧಕವಾಗಿದೆ.
ವೇದ ಮಂತ್ರದ ಬಗ್ಗೆ ತಿಳಿಯದವರೂ ಈ ಗ್ರಹ ಸ್ತೋತ್ರವನ್ನು ಹತ್ತುಬಾರಿಯೋ ನೂರು ಬಾರಿಯೋ ಪಠಿಸುವುದರ ಮೂಲಕ ಗ್ರಹ ದೋಷವನ್ನು ಪರಿಹರಿಸಿ ಕೊಳ್ಳಬಹುದು.
5)ದಾನ ÷ಗ್ರಹಚಾರ ದೋಷ ಪರಿಹಾರದ ಹಲವು ಮಾರ್ಗಗಳಲ್ಲಿ ದಾನವೂ ಒಂದು. ನವಗ್ರಹಗಳಿಗೆ ಸಂಬಂಧಿಸಿದ ಧಾನ್ಯ, ಪ್ರತಿಮೆ, ರತ್ನ, ವಸ್ತ್ರಗಳನ್ನು ದಾನ ಕೊಡುವುದರ ಮೂಲಕ ಗ್ರಹ ದೋಷ ಪರಿಹಾರವೆಂದು ಶಾಸ್ತ್ರ ಹೇಳುತ್ತದೆ. ಸುಶಕ್ತರು ಈ ನಾಲ್ಕೂ ದಾನಗಳನ್ನು ಕೊಡ ಬಹುದು. ಶಕ್ತಿಗನುಗುಣವಾಗಿ ಒಂದೋ ಎರಡೋ ದಾನ ಮಾಡ ಬಹುದು. ಎಷ್ಟು ದಾನ ಕೊಡುತ್ತಿದ್ದೇನೆ ಎನ್ನುವುದಕ್ಕಿಂತಲೂ ಕೊಡುವಾತನ ನಿರ್ವಂಚನೆ ಬುದ್ಧಿ ಮತ್ತು ಸ್ವೀಕರ್ತೃವಿನ ಪಾತ್ರತೆಯು ದಾನದ ಸಾಫಲ್ಯದಲ್ಲಿ ಮುಖ್ಯ ಪಾತ್ರವನ್ನು ವಹಿಸುತ್ತದೆ.
ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564
ಪ್ರತಿದಿನ ಮನೆಯಲ್ಲಿ ದೇವರ ಪೂಜೆ(ಸಾಲಿಗ್ರಾಮ ಪೂಜೆ),ಘಂಟಾನಾದ ಶಂಖನಾದ ತುಳಸೀಪೂಜೆ,
ಗೋ ಪೂಜೆ; ದೇವಸ್ಥಾನಕ್ಕೆ ಹೋಗುವುದು;ಸಾಲಿಗ್ರಾಮ ತೀರ್ಥ (ಪ್ರೋಕ್ಷಣೆ) ಸೇವನೆ
ಗಾಯತ್ರೀ ಜಪ, ಘಂಟಾನಾದ, ವಿಷ್ಣು ಸಹಸ್ರ ನಾಮ ಮುಂತಾದ ಸ್ತೋತ್ರ ಪಠಣೆ , ದೇವ; ಗುರು ಮತ್ತು ಪಿತೃಗಳ ಮನಸಾ ಸ್ಮರಣೆ ಮನೆಯಲ್ಲಿ ಹಿರಿಯರ ಆದರಣೆ
ಮನೆಗೆ ಬಂದ ಅತಿಥಿಗೆ ಉಪಚಾರ, ಮುತ್ತೈದೆಗೆ ಅರಿಸಿನ ಕುಂಕುಮ ಕೊಡುವುದು
ವರ್ಷಕ್ಕೆ ಒಂದು ಸಲವಾದರೂ ಕುಲದೇವರ ದರ್ಶನ ;
ಮೂಲ ನಾಗ; ನಂಬಿಕೊಂಡು ಬಂದ ದೈವ ಗಳ ಪೂಜೆ
ಇವುಗಳು ಮನೆಯ “ವಾಸ್ತುದೋಷ” ಕುಟುಂಬದ ಸರ್ವರ ಗ್ರಹಚಾರದೋಷ ಇವುಗಳನ್ನು ನಿವಾರಿಸಲೂ ಸುಲಭ-ಸಾಧನ ಗಳಾಗಿವೆ.