Navalgund: ಲಾಡ್ಜ್ ನಲ್ಲಿ ನೇಣು ಬಿಗಿದುಕೊಂಡು ಯುವ ಜೋಡಿಗಳ ಆತ್ಮಹತ್ಯೆ…
ಕಳೆದ ಮೂರು ದಿನಗಳಿಂದ ಲಾಡ್ಜ್ನಲ್ಲಿ ವಾಸವಾಗಿದ್ದ ಯುವ ಜೋಡಿಯೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ಜಿಲ್ಲೆಯ ನವಲಗುಂದದಲ್ಲಿ ನಡೆದಿದೆ.
ನವಲಂದಗುಂದ ತಾಲೂಕಿನ ಬೆಳವಟಗಿ ಗ್ರಾಮದ 22 ವರ್ಷದ ಕುಮಾರ ತಳವಾರ ಹಾಗೂ ಧಾರವಾಡ ತಾಲೂಕಿನ ನೀರಲಕಟ್ಟಿ ಗ್ರಾಮದ 18 ವರ್ಷದ ದೀಪಾ ಎತ್ತಿನಗುಡ್ಡ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ದುರ್ದೈವಿಗಳು.
ಕಳೆದ ಮೂರು ದಿನಗಳಿಂದ ನವಲಗುಂದದ ಅಶೋಕ ಲಾಡ್ಜ್ ನಲ್ಲಿ ರೂಮ್ ಮಾಡಿಕೊಂಡಿದ್ದ ಜೋಡಿಗಳು ಒಂದೇ ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಪ್ರೇಮಿಗಳ ಆತ್ಮಹತ್ಯೆಗೆ ನಿಖರ ತಿಳಿದುಬಂದಿಲ್ಲ. ವಿಷಯ ತಿಳಿದು ಸ್ಥಳಕ್ಕೆ ನವಲಗುಂದ ಠಾಣೆ ಪೊಲೀಸರ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಕೈಗೊಂಡಿದ್ದಾರೆ.
Navalgund: Young couples commit suicide by hanging themselves at the lodge.








