`ನಾವು ಸತ್ತ ಮೇಲೆ ನಮ್ಮ ತಿಥಿ ಮಾಡಿ ಸಂತೋಷ ಪಡಿ’ : ಜಗ್ಗೇಶ್ ಬೇಸರ
ಬೆಂಗಳೂರು : ನಿನ್ನೆ ನವರಸ ನಾಯಕ ಜಗ್ಗೇಶ್ ಅವರಿಗೆ ನಟ ದರ್ಶನ್ ರ ಕೆಲ ಅಭಿಮಾನಿಗಳು ಮುತ್ತಿಗೆ ಹಾಕಿದ ವಿಚಾರ ಸದ್ಯ ಸಾರ್ವಜನಿಕ ವಲಯದಲ್ಲಿ ಭಾರಿ ಸದ್ದು ಮಾಡುತ್ತಿದೆ. ಅಡಿಯೋ ಕ್ಲಿಪ್ ಸಂಬಂಧ ಈ ಹಿಂದಯೇ ಜಗ್ಗೇಶ್ ಅವರು ಸ್ಪಷ್ಟನೆ ನೀಡಿದ್ದರೂ, ನಿನ್ನೆ ದರ್ಶನ್ ಅವರ ಕೆಲ ಅಭಿಮಾನಿಗಳು ಅವರಿಗೆ ಮುತ್ತಿಗೆ ಹಾಕಿ ಕ್ಷೆಮ ಕೇಳುವಂತೆ ಒತ್ತಾಯಿಸಿ, ಕನಿಷ್ಠ ಹಿರಿಯ ನಟನಿಗೆ ಕೊಡಬೇಕಾದ ಗೌರವವನ್ನೂ ಕೊಡದೇ ತರಾಟೆ ತೆಗೆದುಕೊಂಡಿದ್ದಾರೆ. ಈ ಸಂಬಂಧ ಸೋಶಿಯಲ್ ಮೀಡಿಯಾದಲ್ಲಿ ಪರ ವಿರೋಧ ಚರ್ಚೆಗಳು ನಡೆಯುತ್ತಿವೆ. ಇದೀಗ ಈ ಸಂಬಂಧ ಜಗ್ಗೇಶ್ ಅವರು ಟ್ವಿಟ್ಟರ್ ನಲ್ಲಿ ಬೇಸರ ಹೊರಹಾಕಿದ್ದಾರೆ.
ಅವರ ಟ್ವೀಟ್ ನಲ್ಲಿ , ಆತ್ಮೀಯರೆ ನನಗೆ ನೀವು ನಿಮಗೆ ನಾನು, ಇನ್ನು ಮುಂದಿನ ದಿನಗಳಲ್ಲಿ ನನ್ನ ಉದ್ಯಮದ ಯಾರ ಹುಟ್ಟುಹಬ್ಬ, ಸಿನಿಮಾ, ಸ್ನೇಹ, ಕಾರ್ಯಕ್ರಮ, ಭೇಟಿ, ಹರಟೆ ನನ್ನಿಂದ ಇರುವುದಿಲ್ಲ. ಮುಂದೆ ನನ್ನ ಸಿನಿಮಾ ಹಾಗೂ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ಟಿವಿ ಶೋಗಳಿಗೆ ಮಾತ್ರ ಬದುಕು ಮೀಸಲು ಇಡುತ್ತೇನೆ.
ತುಂಬ ತಾಮಸವಾಗಿದೆ ನನಗೆ ನಮ್ಮರಂಗ, ದೊಡ್ಡವರು ಬದುಕಿದಾಗಲೆ ಅಪಮಾನಿಸಿ ದೊಡ್ಡವರಾಗುವ ಹುನ್ನಾರ ಪುರುಷರ ಸಾಮ್ರಾಜ್ಯ ಆಗಿದೆ ಅಂತ ಬರೆದುಕೊಂಡಿದ್ದಾರೆ.
ಇದಲ್ಲದೇ ಟ್ವಿಟ್ಟರ್ ಲೈವ್ ನಲ್ಲಿ ಜಗ್ಗೇಶ್ ಅವರು, ಒಂದು ವಿಷಯವನ್ನು ಇಟ್ಟುಕೊಂಡು ನನಗೆ ಬೇಸರ ಮಾಡುತ್ತಿದ್ದಾರೆ. ಸಣ್ಣ ವಿಷಯವನ್ನು ಇಟ್ಟುಕೊಂಡು ನೋವು, ಅಪಮಾನವನ್ನು ಮಾಡಿದರೆ ನನಗೆ ಯಾವುದೇ ನಷ್ಟವಿಲ್ಲ. ನಾನು ಕಳ್ಳತನ, ರಾಬರಿ ಮಾಡಿದ್ದೀನಾ? ಹೆದರಿ ಕೂತಿದೀನಾ? ನಿನ್ನೆ ಬಂದಿರುವವರ ಜೊತೆಯಲ್ಲಿ ಅವರೊಂದಿಗೆ ಕೂತು ಮಾತನಾಡಿದ್ದೇನೆ. ಖಾಸಗಿ ವಿಚಾರವನ್ನು ಸಾರ್ವಜನಿಕವಾಗಿ ಮಾತನಾಡುವ ಹಾಗೆ ಆಗಿದೆ. ಹಾಗಂತ ನಾನು ಹೆದರಿ ಮನೆಯಲ್ಲಿ ಕುಳಿತುಕೊಳ್ಳುವುದಿಲ್ಲ.
ನಾನು ಸಿನಿಮಾ ರಂಗಕ್ಕೆ ಬಂದು 40 ವರ್ಷ ಆಗಿದೆ. ರಾಜ್ ಕುಮಾರ್, ವಿಷ್ಣುವರ್ಧನ್, ಪ್ರಭಾಕರ್ ಅವರ ಜೊತೆಗೆ ಹೆಜ್ಜೆ ಹಾಕುತ್ತಾ ಬಂದಿರುವನು ನಾನು. ನಾನು ಸ್ವಾಭಿಮಾನಿಯಾಗಿ ಬದುಕುತ್ತಿದ್ದೇನೆ. ನಾನು ನನ್ನ ಬದುಕಲ್ಲೇ ಯಾರ ಬೂಟು ನೆಕ್ಕಿಲ್ಲ ಹಾಗೇ ಮಾಡಿದ್ದರೆ ನಾನು ಎಷ್ಟೋ ಬಾರಿ ಎಂಎಲ್‍ಎ, ಮಂತ್ರಿ ಆಗುತ್ತಿದೆ. ನೂರಾರು ಪೆÇೀಸ್ಟ್ ಗಳನ್ನು ತೆಗೆದುಕೊಳ್ಳುತ್ತಿದ್ದೆ. ನೀವು ಹೇಳಿದ್ದನೆಲ್ಲ ನಂಬಲು ಜನ ಒಂದು ಸೈಡ್ ಇಲ್ಲ. ಸತ್ಯ ಹೇಳುವುದಕ್ಕೆ ಸೋಷಿಯಲ್ ಮೀಡಿಯಾ ಇದೆ. ಇದೆನಾ ನೀವು ಹಿರಿಯ ನಟರಿಗೆ ಕೊಡು ಗೌರವಾಗಿದೆಯಾ ಎಂದು ಪ್ರಶ್ನಿಸಿದ್ದಾರೆ.
https://t.co/aED9S8Abn0?amp=1
ರಾಜ್ ಕುಮಾರ್, ಅಂಬರೀಶ್, ವಿಷ್ಣುವರ್ಧನ್ ಅವರನ್ನು ಕಳೆದುಕೊಂಡ ಹೋದ ಮೇಲೆ ಕನ್ನಡ ಸ್ವಾಭಿಮಾನವು ಸಾಯುತ್ತಿದೆ. ಉಳಿದಿರುವುದು ನಾವು ಕೆಲವರು ಮಾತ್ರ ನಾವು ಸತ್ತ ಮೇಲೆ ನಮ್ಮ ತಿಥಿಯನ್ನು ಮಾಡಿ ಸಂತೋಷವನ್ನು ಪಡಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಒಬ್ಬ ಕಲಾವಿದರ ಮಧ್ಯೆ ತಂದು ಇಟ್ಟು ತಮಾಷೆ ಮಾಡುವುದನ್ನು ಬಿಟ್ಟು ಬಿಡಿ. ಜನರಿಗೆ ಒಂದು ದಿನ ಸತ್ಯ ಏನು ಎಂಬುದು ಗೊತ್ತಾಗುತ್ತದೆ. ನಾನು ಅಪ್ಪನಿಗೆ ಹುಟ್ಟಿದ ಮಗ.. ನಾನು ಎಲ್ಲಿಯೂ ಓಡಿ ಹೋಗಲ್ಲ. ನನಗೆ ಗೊತ್ತು ಹೇಗೆ ಹ್ಯಾಂಡಲ್ ಮಾಡಬೇಕು ಎಂದು ಜಗ್ಗೇಶ್ ಅವರು ಹೇಳಿದ್ದಾರೆ.
