1988 ರ ಹಿಂದಿನ ಪ್ರಕರಣ – ನವಜೋತ್ ಸಿಂಗ್ ಸಿಧುಗೆ 1 ವರ್ಷ ಜೈಲು ಶಿಕ್ಷೆ…
34 ವರ್ಷದ ಹಿಂದಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕ್ರಿಕೆಟಿಗ ಮತ್ತು ರಾಜಕಾರಣಿ ನವಜೋತ್ ಸಿಂಗ್ ಸಿಧು ಗೆ ಸುಪ್ರೀಂ ಕೋರ್ಟ್ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿದೆ. ವೃದ್ಧರೊಬ್ಬರ ಮೇಲೆ ರಸ್ತೆಯಲ್ಲಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಶಿಕ್ಷೆ ನೀಡಿದೆ.
1988ರಲ್ಲಿ ವಯೋವೃದ್ದರಾದ ಪಟಿಯಾಲ ನಿವಾಸಿ ಗುರ್ನಾಮ್ ಸಿಂಗ್ ಮೇಲೆ ರಸ್ತೆಯಲ್ಲಿ ದಾಂಧಲೆ ನಡೆಸಿ ಹಲ್ಲೆ ಮಾಡಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಗುರ್ನಮ್ ಮೃತಪಟ್ಟಿದ್ದರು. ಸ್ಥಳೀಯ, ಕೋರ್ಟ್ ಬಳಿಕ ಈ ಪ್ರಕಣ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು.
ಮೇ 15, 2018 ರಂದು, ಸರ್ವೋಚ್ಚ ನ್ಯಾಯಾಲಯವು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಆದೇಶವನ್ನು ರದ್ದುಗೊಳಿಸಿತ್ತು. ಭಾರತೀಯ ದಂಡ ಸಂಹಿತೆ ಸೆಕ್ಷನ್ 323ರಡಿಯಲ್ಲಿ ಅಪರಾಧಿ ಎಂದು ತೀರ್ಪು ನೀಡಿ 1000 ರೂಪಾಯಿ ದಂಡ ವಿಧಿಸಿತ್ತು. ಆದರೆ ಜೈಲು ಶಿಕ್ಷೆಯಿಂದ ಸಿಧುಗೆ ವಿನಾಯಿತಿ ನೀಡಲಾಗಿತ್ತು.
ಜೈಲು ಶಿಕ್ಷೆಯಿಂದ ವಿನಾಯಿತಿ ನೀಡಿದ್ದನ್ನು ಪ್ರಶ್ನಿಸಿ ಸಂತ್ರಸ್ತನ ಕುಟುಂಬದ ಸದಸ್ಯರು ಸೆಪ್ಟಂಬರ್ 2018 ರಂದು ಮರು ಪರಿಶೀಲನಾ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ಪರಿಶೀಲನೆಗೆ ಒಪ್ಪಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಇಂದು ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿದೆ.