ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನವಜೋತ್ ಸಿಂಗ್ ಸಿಧು ರಾಜೀನಾಮೆ Navjot Singh Sidhu
ಚಂಡೀಗಢ : ಪಂಜಾಬ್ ಕಾಂಗ್ರೆಸ್ ನಲ್ಲಿ ಮಹತ್ತರ ಬೆಳೆವಣಿಗೆ ನಡೆದಿದ್ದು, ನವಜೋತ್ ಸಿಂಗ್ ಸಿಧು ಪಂಜಾಬ್ ರಾಜ್ಯ ಕಾಂಗ್ರೆಸ್ ಅಧ್ಯಕ್ಷದಿಂದ ಕೆಳಗಿಳಿದಿದ್ದಾರೆ.
ಕಳೆದ ಜುಲೈನಲ್ಲಿ ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಅಲಂಕರಿಸಿದ್ದ ನವಜೋತ್ ಸಿಂಗ್ ಸಿಧು, ಇದೀಗ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ.
ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದು, ನವಜೋತ್ ಸಿಂಗ್ ಸಿಧು ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಅಲ್ಲದೆ ಸಿಧು ಅವರು ಪಕ್ಷದ ಸೇವೆಯನ್ನು ಮುಂದುವರಿಸುವುದಾಗಿ ಹೇಳಿದ್ದಾರೆ.
ಇನ್ನು ಸಿಧು ತಮ್ಮ ರಾಜೀನಾಮೆ ಪತ್ರದಲ್ಲಿ.. ರಾಜಿಯಿಂದಲೇ ಮನುಷ್ಯನ ವ್ಯಕ್ತಿತ್ವ ಕುಸಿತವಾಗುತ್ತದೆ.
ಪಂಜಾಬ್ನ ಭವಿಷ್ಯ ಮತ್ತು ಪಂಜಾಬ್ನ ಕಲ್ಯಾಣಕ್ಕಾಗಿ ನಾನು ಎಂದಿಗೂ ರಾಜಿ ಮಾಡಿಕೊಳ್ಳಲಾರೆ ಎಂದು ಬರೆದುಕೊಂಡಿದ್ದಾರೆ.