ನವಜೋತ್ ಸಿಂಗ್ ಸಿಧುಗೆ ಪಂಜಾಬ್ ಕಾಂಗ್ರೆಸ್ ಅಧ್ಯಕ್ಷಗಿರಿ Navjot Singh Sidhu
ನವದಹೆಲಿ : ಮಾಜಿ ಕ್ರಿಕೆಟಿಗ ನವಜೋತ್ ಸಿಂಗ್ ಸಿಧು ಅವರು ಪಂಜಾಬ್ ಕಾಂಗ್ರೆಸ್ ಅಧ್ಯಕ್ಷರಾಗಿ ನೇಮಕ ಆಗಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸಿಧು ಅವರನ್ನು ಪಂಜಾಬ್ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಅಧಿಕೃತ ಆದೇಶ ಹೊರಡಿಸಿದೆ.
ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರ ವಿರೋಧದ ನಡುವೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತಕ್ಷಣದಿಂದ ಜಾರಿಗೆ ಬರುವಂತೆ ನವಜೋತ್ ಸಿಂಗ್ ಸಿಧು ಅವರನ್ನು ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ.
ಸಂಗತ್ ಸಿಂಗ್ ಗಿಲ್ಜಿಯನ್, ಸುಖ್ ವಿಂದರ್ ಸಿಂಗ್ ಡ್ಯಾನಿ, ಪವನ್ ಗೊಯೆಲ್, ಕುಲ್ಜಿತ್ ಸಿಂಗ್ ನಾಗ್ರಾ ಅವರನ್ನು ಪಂಜಾಬ್ ಕಾಂಗ್ರೆಸ್ ಗೆ ನೂತನ ಕಾರ್ಯಾಧ್ಯಕ್ಷರುಗಳನ್ನು ನೇಮಿಸಿ ಆದೇಶ ಹೊರಡಿಸಲಾಗಿದೆ.