ನವೋದಯ ವಿದ್ಯಾಲಯಕ್ಕೆ ಪ್ರವೇಶ ಪರೀಕ್ಷೆಯ ದಿನಾಂಕ ಪ್ರಕಟ..!
ಜವಾಹರ್ ನವೋದಯ ವಿದ್ಯಾಲಯಕ್ಕೆ ಪ್ರವೇಶ ಪರೀಕ್ಷೆಯ ದಿನಾಂಕ ಪ್ರಕಟ..!
ಆಗಸ್ಟ್ 11ರಂದು ಪರೀಕ್ಷೆ – ಕೇಂದ್ರದ ಶಿಕ್ಷಣ ಸಚಿವಾಲಯ ಪ್ರಕಟಣೆ
ಕೇಂದ್ರಾಡಳಿತ ಪ್ರದೇಶಗಳು, ರಾಜ್ಯಗಳಲ್ಲಿ ಕೋವಿಡ್ ಮಾರ್ಗಸೂಚಿಗೆ ಅನುಸಾರ ಪರೀಕ್ಷೆ
ನವದೆಹಲಿ : ಕೊರೊನಾ 2ನೇ ಅಲೆಯ ಹಾವಳಿ ಕೊಂಚ ಕಡಿಮೆಯಾಗ್ತಾಯಿದ್ದಂತೆ , ಪ್ರವಾಸೋದ್ಯಮದ ಜೊತೆಗೆ ಶೈಕ್ಷಣಿಕವಾಗಿಯೂ ಒಂದೊಂದೇ ಚಟುವಟಿಕೆಗಳು ಗರಿಗೆದರಿವೆ.. ಇದೀಗ ಜವಾಹರ್ ನವೋದಯ ವಿದ್ಯಾಲಯಕ್ಕೆ 2021–22ನೇ ಸಾಲಿಗೆ 6ನೇ ತರಗತಿಗೆ ಪ್ರವೇಶಕ್ಕಾಗಿ ಆಗಸ್ಟ್ 11ರಂದು ಪರೀಕ್ಷೆ ನಡೆಯಲಿದೆ ಎಂದು ಕೇಂದ್ರದ ಶಿಕ್ಷಣ ಸಚಿವಾಲಯ ಪ್ರಕಟಿಸಿದೆ. ಎಲ್ಲ ಕೇಂದ್ರಾಡಳಿತ ಪ್ರದೇಶಗಳು, ರಾಜ್ಯಗಳಲ್ಲಿ ಕೋವಿಡ್ ಮಾರ್ಗಸೂಚಿಗೆ ಅನುಸಾರ ಪರೀಕ್ಷೆ ನಡೆಯಲಿದೆ ಎಂದು ಸಚಿವಾಲಯವು ಟ್ವೀಟ್ ಮಾಡಿದೆ. 11,182 ಕೇಂದ್ರಗಳಲ್ಲಿ, 47,320 ವಿದ್ಯಾರ್ಥಿಗಳ ಆಯ್ಕೆಗೆ ಪರೀಕ್ಷೆ ನಡೆಯಲಿದೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.