ADVERTISEMENT
Saturday, December 6, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Uncategorized

ನವರಾತ್ರಿಯ ನವದಿನಗಳ ಅರ್ಥ ಹಾಗೂ ಮಹತ್ವ ತಿಳಿಯಿರಿ

ನವರಾತ್ರಿಯ ನವದಿನಗಳ ಅರ್ಥ ಹಾಗೂ ಮಹತ್ವ ತಿಳಿಯಿರಿ

Saaksha Editor by Saaksha Editor
September 26, 2025
in Uncategorized
ದೇವಿ

ದೇವಿ

Share on FacebookShare on TwitterShare on WhatsappShare on Telegram

‘ರಾತ್ರಿ’ ಎಂದರೆ ಆಗುತ್ತಿರುವ ಬದಲಾವಣೆ. ದೇವಿಯ ಒಂದು ಹೆಸರು ‘ಕಾಲರಾತ್ರಿ’ ಎಂದಾಗಿದೆ. ‘ಕಾಲರಾತ್ರಿ’ ಎಂದರೆ. ಕಾಲಪುರುಷನಲ್ಲಿ ಬದಲಾವಣೆ ಮಾಡುವವಳು. ತಿರುಗುವುದು ಪೃಥ್ವಿಯ ಗುಣಧರ್ಮವಾಗಿದೆ. ಪೃಥ್ವಿಯು ತಿರುಗುತ್ತಿರುವುದರಿಂದ. ಬದಲಾವಣೆಗಳು ಆಗುತ್ತಿರುತ್ತವೆ, ಅಂದರೆ ರಾತ್ರಿ ಮತ್ತು ಹಗಲುಆಗುತ್ತವೆ. ಇಂತಹ ಬದಲಾವಣೆಗಳನ್ನು ಸಹಿಸುವ ಶಕ್ತಿಯು ಶರೀರದಲ್ಲಿರಬೇಕೆಂದು ವ್ರತ-ವೈಕಲ್ಯಗಳನ್ನು ಮಾಡುತ್ತಾರೆ.

Related posts

Even dull kids can become intelligent chant Saraswati mantra

ಮೂರ್ಖ ಮಕ್ಕಳು ಕೂಡ ವಿದ್ಯಾವಂತರಾಗಲು ಈ ಉಪಾಯ ಮಾಡಿ

November 10, 2025
India vs West Indies 2nd Test: Blue Boys Close to Victory Match Highlights

ಭಾರತ-ವಿಂಡೀಸ್‌ 2ನೇ ಟೆಸ್ಟ್‌- ಗೆಲುವಿನ ಸನೀಹದಲ್ಲಿ ಬ್ಲೂ ಬಾಯ್ಸ್‌

October 13, 2025

ನವರಾತ್ರಿಯ ಇತಿಹಾಸ

ರಾಮನಿಂದ ರಾವಣನ ವಧೆಯಾಗಬೇಕೆಂದು ನಾರದರು ರಾಮನಿಗೆ ಶರವನ್ನರಾತ್ರಿ ವ್ರತವನ್ನು ಮಾಡಲು ಹೇಳಿದ್ದರು. ಈ ವ್ರತವನ್ನು ಪೂರ್ಣಗೊಳಿಸಿದ ನಂತರ ರಾಮನು ಲಂಕೆಯ ಮೇಲೆ ಆಕ್ರಮಣ ಮಾಡಿ ಯುದ್ಧದಲ್ಲಿ ರಾವಣನನ್ನು ವಧಿಸಿದನು.

ದೇವಿಯು, ಮಹಿಷಾಸುರನೆಂಬ ರಾಕ್ಷಸನೊಂದಿಗೆ ಪಾಡ್ಯದಿಂದ ನವಮಿಯವರೆಗೆ ಒಂಬತ್ತು ದಿನಗಳ ಕಾಲ ಯುದ್ಧವನ್ನು ಮಾಡಿ ನವಮಿಯ ರಾತ್ರಿ ಅವನನ್ನು ಕೊಂದಳು. ಅಂದಿನಿಂದ ಅವಳಿಗೆ ಮಹಿಷಾಸುರಮರ್ದಿನಿ ಎನ್ನತೊಡಗಿದರು.

ನವರಾತ್ರಿಯ ಆಚರಣೆಯ ಮಹತ್ವ

ಜಗತ್ತಿನಲ್ಲಿ ಯಾವಾಗ ತಾಮಸಿಕ, ಅಸುರೀ ಮತ್ತು ಕ್ರೂರ ಜನರು ಪ್ರಬಲರಾಗಿ ಸಾತ್ತ್ವಿಕ ಮತ್ತು ಧರ್ಮನಿಷ್ಠ ಸಜ್ಜನರನ್ನು ಪೀಡಿಸುತ್ತಾರೆಯೋ, ಆಗ ದೇವಿಯು ಧರ್ಮಸಂಸ್ಥಾಪನೆಗಾಗಿ ಪುನಃ ಪುನಃ ಅವತಾರ ತಾಳುತ್ತಾಳೆ. ಇದು ಆ ದೇವಿಯ ವ್ರತವಾಗಿದೆ.

ನವರಾತ್ರಿಯಲ್ಲಿ ದೇವಿತತ್ತ್ವವು ಎಂದಿಗಿಂತ 1000 ಪಟ್ಟು ಹೆಚ್ಚು ಕಾರ್ಯನಿರತವಾಗಿರುತ್ತದೆ. ದೇವಿತತ್ತ್ವದ ಲಾಭವನ್ನು ಆದಷ್ಟೂ ಹೆಚ್ಚು ಪಡೆದುಕೊಳ್ಳಲು ನವರಾತ್ರಿಯ ಕಾಲದಲ್ಲಿ ‘ಶ್ರೀ ದುರ್ಗಾದೇವ್ಯೈ ನಮಃ’ ಎಂಬ ನಾಮಜಪವನ್ನು ಆದಷ್ಟು ಹೆಚ್ಚು ಮಾಡಬೇಕು.

ನವರಾತ್ರಿ ವ್ರತವನ್ನು ಆಚರಿಸುವ ಪದ್ಧತಿ – ‘ಅಖಂಡ

ದೀಪ ಪ್ರಜ್ವಲನೆ ಅಂದರೆ ನವರಾತ್ರಿಯ 9 ದಿನಗಳಲ್ಲಿಯೂ ಸತತವಾಗಿ ದೀಪವನ್ನು ಉರಿಸುವುದು, ಶ್ರೀ ದೇವಿಯ ಮಹಾತ್ಮೆಯ ಪಠಣ (ಚಂಡೀಪಾಠ), ಸಪ್ತಶತೀ ಪಾಠ, ದೇವಿಭಾಗವತ, ಬ್ರಹ್ಮಾಂಡಪುರಾಣದಲ್ಲಿನ ಲಲಿತೋಪಾಖ್ಯಾನವನ್ನು ಕೇಳುವುದು, ಲಲಿತಾಪೂಜೆ, ಸರಸ್ವತಿಪೂಜೆ, ಉಪವಾಸ, ಜಾಗರಣೆ ಮುಂತಾದ ವಿವಿಧ ಕಾರ್ಯಕ್ರಮಗಳನ್ನು ನಡೆಸಿ ಅವರವರ ಶಕ್ತಿಸಾಮರ್ಥ್ಯಕ್ಕನುಸಾರವಾಗಿ ನವರಾತ್ರಿ ಮಹೋತ್ಸವವನ್ನು ಆಚರಿಸುತ್ತಾರೆ.

ಇದನ್ನೂ ಓದಿ: ನವರಾತ್ರಿ ಸಂದರ್ಭದಲ್ಲಿ ಕೊಲ್ಲಾಪುರದ ಮಹಾಲಕ್ಷ್ಮಿ ಕೃಪೆಗೆ ಪಾತ್ರರಾಗಲು ಈ ಹರಕೆ ಪೂರೈಸಿ

ನವ ದುರ್ಗೆಯರು

ಮಾರ್ಕಂಡೇಯ ಋಷಿಗಳು ಬರೆದಿರುವ ದುರ್ಗಾಸಪ್ತಶತಿ ಎಂಬ ಗ್ರಂಥವು ತಂತ್ರ ಮತ್ತು ಮಂತ್ರ ಈ ಎರಡೂ ಮಾರ್ಗಗಳಲ್ಲಿ.ಪ್ರಸಿದ್ಧವಾಗಿದ್ದು ಭಾರತದಲ್ಲಿ ಇಂದು ಲಕ್ಷಾಂತರ ಜನರು ಸಪ್ತಶತಿಯ.ಪಠಣ ಮಾಡುತ್ತಿರುವುದು ಕಂಡುಬರುತ್ತದೆ. ಭಗವಾನ್ ಹಿರಣ್ಯಗರ್ಭ

ಮುನಿಗಳು ಮಂತ್ರಯೋಗ ಸಮೀಕ್ಷೆಯಲ್ಲಿ ಹೇಳಿರುವ ಶ್ರೀ ದುರ್ಗಾ ಸಪ್ತಶತಿಯಲ್ಲಿನ ದೇವಿಯ ಹೆಸರುಗಳ ಶಾಸ್ತ್ರೀಯ ಅರ್ಥ ಮತ್ತು ಇಂದಿನ ಭೌತಿಕ ವಿಜ್ಞಾನವು ಮಾಡಿರುವ ಪ್ರಗತಿಯ ಬಗ್ಗೆ ಇಲ್ಲಿ ನಾವು ವಿಚಾರ ಮಾಡೋಣ.

ಶೈಲಪುತ್ರಿ: ‘ಶೈಲಮ್’ ಅಂದರೆ ಯಾವ ಪರ್ವತದಲ್ಲಿ ಮಾಣಿಕ್ಯ, ರತ್ನ ಮತ್ತಿತರ ಅತ್ಯಮೂಲ್ಯ ವಸ್ತುಗಳ ಸಂಗ್ರಹವಿದೆಯೋ, ಅಂತಹ ಪರ್ವತ. ಈ ಅತ್ಯಮೂಲ್ಯ ವಸ್ತುಗಳ ಸಂಗ್ರಹವನ್ನು ನೋಡಿಯೂ ಭೌತಿಕ ಸುಖದೆಡೆಗೆ ಆಕರ್ಷಿತಗೊಳ್ಳದೆ, ಭೌತಿಕತೆಯ ತ್ಯಾಗವನ್ನು ಮಾಡಿ ಆತ್ಮಜ್ಞಾನವನ್ನು ಪಡೆಯಲು ಪ್ರವೃತ್ತವಾಗುವವಳೆಂದರೆ ಶೈಲಪುತ್ರಿ.

‌ಬ್ರಹ್ಮಚಾರಿಣಿ: ‘ಬ್ರಹ್ಮಚಾರಯಿತುಂ ಶೀಲಂ ಯಸ್ಯಾಃ ಸಾ ಬ್ರಹ್ಮಚಾರಿಣಿ’ ಅಂದರೆ ಬ್ರಹ್ಮರೂಪವಾಗುವುದು ಯಾರ ಶೀಲವಾಗಿದೆಯೋ ಮತ್ತು ಯಾರ ಆಚಾರಗಳು ಅದರಂತಿವೆಯೋ ಅವಳೇ ಬ್ರಹ್ಮಚಾರಿಣಿ.

ಚಂದ್ರಘಂಟಾ: ‘ಚಂದ್ರಃ ಘಂಟಾಯಾಂ ಯಸ್ಯಾ ಸಾ ಚಂದ್ರಘಂಟಾ ಆಹ್ಲಾದಯತಿ ಇತಿ ಚಂದ್ರಃ|’ ಅಂದರೆ ಆಹ್ಲಾದಕಾರಕ ಚಂದ್ರನು ಯಾರ ದ್ವಾರದಲ್ಲಿ ಸ್ಥಿರವಾಗಿದ್ದಾನೆಯೋ ಅವಳೇ ಚಂದ್ರಘಂಟಾ. ಆಹ್ಲಾದವೆಂದರೆ ಮಮತೆ, ಕ್ಷಮಾಶೀಲತೆ ಮತ್ತು ವಾತ್ಸಲ್ಯ ಈ ಮೂರೂ ಗುಣಗಳ ಸಮ್ಮಿಲಿತ ಸ್ಥಿತಿ.

ಕೂಷ್ಮಾಂಡಾ : ‘ಕುತ್ಸಿತಃ ಉಷ್ಮಾಃ ಕೂಷ್ಮಾಃ’ ಕುತ್ಸಿತಃ ಅಂದರೆ ಸಹಿಸಲು ಕಠಿಣ ವಾದುದು. ಉಷ್ಮಾ ಎಂದರೆ ಸೂಕ್ಷ್ಮ ಲಹರಿಗಳ ಗೊಂದಲ (ಧ್ವನಿ). ‘ತ್ರಿವಿಧತಾಪಯುಕ್ತಃ ಸಂಸಾರಃ ಸ ಅಂಡೇ ಮಾಂಸಪೇಶ್ಯಾಮ್ ಉದರರೂಪಾಯಾಂ ಯಸಾಃ ಸಾ ಕೂಷ್ಮಾಂಡಾ’ ಇದರ ಅರ್ಥವು ಹೀಗಿದೆ – ತ್ರಿವಿಧ ತಾಪಗಳೆಂದರೆ ಉತ್ಪತ್ತಿ (ಜನ್ಮ), ಸ್ಥಿತಿ (ಬೆಳವಣಿಗೆ) ಮತ್ತು ಲಯ (ಮೃತ್ಯು). ‘ಮೃತ್ಯು (ಮೋಕ್ಷ) ಅಂದರೆ ಅನಿಶ್ಚಿತ ಕಾಲಾವಧಿಯವರೆಗೆ ವಿಶಿಷ್ಟ ಪದ್ಧತಿಯಿಂದ ನಾಶವಾಗುವುದು’. ‘ಸಂಸಾರ’ವೆಂದರೆ ‘ಪುನಃಪುನಃ’ ಮತ್ತು ‘ಅಂಡಃ’ ಅಂದರೆ ‘ವಿಶಿಷ್ಟ ನಿಯಂತ್ರಣದಿಂದ ಯುಕ್ತವಾಗಿರುವ ಕೋಶ.’ ಮಾಂಸ, ಜೀವಕೋಶಗಳು, ಉದರ ಮತ್ತು ರೂಪ ಇವುಗಳಿಂದ ಯುಕ್ತಸಂಪನ್ನವಾದ ಜೀವಗಳು ಈ ಕೋಶದಲ್ಲಿ ತ್ರಿವಿಧ ತಾಪಗಳ ಪುನರಾವೃತ್ತಿಯ ಅವಸ್ಥೆಯಿಂದ ಪುನಃಪುನಃ ಹೋಗುತ್ತಾರೆ. ಈ ಪ್ರಕ್ರಿಯೆಯಿಂದ ಬಿಡುಗಡೆ ಹೊಂದಲು ಯಾರ ಕೃಪೆಯ ಆವಶ್ಯಕತೆಯಿದೆಯೋ ಅವಳೇ ಕೂಷ್ಮಾಂಡಾ.

ಸ್ಕಂದಮಾತಾ: ‘ಭಗಃ’ ಎಂದರೆ ತೇಜಸ್ಸು. ‘ಭಗವತಿ’ ಎಂದರೆ ‘ವಿಶಿಷ್ಟ ಯೋಗ್ಯತೆ ಯುಳ್ಳ ಸ್ಪಂದನ ಲಹರಿಗಳಿಂದ ಯುಕ್ತವಾದಂತಹ ತೇಜಸ್ಸು’. ಬ್ರಹ್ಮದೇವ ಮತ್ತು ಭಗವತಿ ದೇವಿಯ ಸಮ್ಮಿಲಿತ ಅವಸ್ಥೆಯಿಂದ ಸನತ್ಕುಮಾರ ಅಥವಾ ಸ್ಕಂದ ಎಂಬ ಹೆಸರಿನ ವಿಶಿಷ್ಟ ರಚನೆಯ ಕಿರಣ ಸಮೂಹವು ಉತ್ಪನ್ನವಾಯಿತು. ಭೂಲೋಕದಿಂದ ಸತ್ಯಲೋಕದ ವರೆಗಿನ ಲೋಕಗಳನ್ನು ‘ಸ್ಕಂದರೇಷೆ’ ಎನ್ನುತ್ತಾರೆ. ಭೂಲೋಕದಿಂದ ಸತ್ಯಲೋಕದವರೆಗಿನ ವ್ಯಾಹ್ಯತಿಗಳ ಮೇಲೆ ಸ್ಕಂದರೇಷೆಯ ನಿಯಂತ್ರಣವಿದೆ. ವ್ಯಾಹ್ಯತಿ ಅಂದರೆ ಗೂಢ ಸ್ವರ ಅಥವಾ ಮಂತ್ರ. ಸಪ್ತಲೋಕಗಳ ಹೆಸರುಗಳಂತೆ ಅನುಕ್ರಮವಾಗಿ ಭೂಃ, ಭುವಃ, ಸ್ವಃ, ಮಹಃ, ಜನಃ, ತಪಃ ಮತ್ತು ಸತ್ಯ ಇವು ಏಳು ವ್ಯಾಹ್ಯತಿಗಳಾಗಿವೆ. ಈ ಏಳೂ ಲೋಕಗಳ ನಿಯಂತ್ರಕರ ಮಾತೆಯೇ ಸ್ಕಂದಮಾತೆ. ಈ ಏಳೂ ಲೋಕಗಳಿಂದ ಪಾರಾಗಿ ಹೋಗಲು ಯಾರ ಸಹಾಯ ಬೇಕಾಗುತ್ತದೆಯೋ ಅವಳಿಗೆ ಸ್ಕಂದಮಾತೆ ಎನ್ನುತ್ತಾರೆ.

ಕಾತ್ಯಾಯನಿ: ‘ಕಾತ್ಯಾಯನಸ್ಯ ಅಪತ್ಯಂ ಸ್ತ್ರೀ ಕಾತ್ಯಾಯನಿ|’ (ಕಾತ್ಯಾಯನನ ಮಗಳು ಕಾತ್ಯಾಯನಿ) ‘ಅಯನ’ ಎಂದರೆ ‘ಹಲವಾರು ನಕ್ಷತ್ರ ಸಮೂಹಗಳಿಂದ ಯುಕ್ತವಾಗಿರುವ ಭಾಗ’. ಕಾತ್ಯಾಯನ ಋಷಿಗಳು ಇಂತಹ ಒಂದು ಅಯನದ ಪಾಲಕರಾಗಿದ್ದರು. ಒಮ್ಮೆ ಕಾತ್ಯಾಯನರ ಅಯನಗಳಲ್ಲಿನ ದೇವತೆಗಳ ಮೇಲೆ (ತೇಜಸ್ಸಿನ ಮೇಲೆ) ಅವರದ್ದೇ ಅಯನದಲ್ಲಿನ ಅಯೋಗ್ಯ ಸ್ಪಂದನಲಹರಿಗಳ ಒಂದು ಶಕ್ತಿಯುತ ಸಮೂಹವು ಆಕ್ರಮಣ ಮಾಡಿತು. ಘರ್ಷಣೆಯಿಂದ ಬಹುದೊಡ್ಡ ಉತ್ಪಾತವಾಗುವ ಸಮಯ ಬಂದಿತು. ಆಗ ಕಾತ್ಯಾಯನ ಋಷಿಗಳ ಆಶ್ರಮದಲ್ಲಿ ಸೂಕ್ಷ್ಮಾತಿಸೂಕ್ಷ್ಮ ಶಕ್ತಿಲಹರಿಗಳ ಒಂದು ಅಂಶವು ಒಬ್ಬ ಚಿಕ್ಕ ಬಾಲಕಿಯ ಆಕಾರದಲ್ಲಿ ಪ್ರವೇಶಿಸಿತು. ಈ ಬಾಲಕಿಯನ್ನು ಕಾತ್ಯಾಯನ ಋಷಿಗಳು ತಮ್ಮ ಸಂತಾನವೆಂದು ಪರಿಗಣಿಸಿದರು; ಆದುದರಿಂದ ಅವಳು ‘ಕಾತ್ಯಾಯನಿ’ ಎಂಬ ಹೆಸರಿನಿಂದ ಪ್ರಸಿದ್ಧಿ ಹೊಂದಿದಳು. ಕಾತ್ಯಾಯನಿಯು ಶಕ್ತಿಯುತ ಅಯೋಗ್ಯ ಸ್ಪಂದನಲಹರಿಗಳನ್ನು ಯೋಗ್ಯ ಸ್ಪಂದನಲಹರಿಗಳನ್ನಾಗಿ ಪರಿವರ್ತಿಸಿ ದೇವತೆಗಳಿಗೆ ಸಹಾಯ ಮಾಡಿದಳು.

ಜಗತ್ಪ್ರಸಿದ್ಧ ಅಮೇರಿಕನ್ ಶಾಸ್ತ್ರಜ್ಞರಾದ ಡಾ.ಕಾರ್ಲ್ ಸೇಗನ್ ಹೇಳುತ್ತಾರೆ, ‘ಓರ್ವ ಹೆಸರಾಂತ ರಷ್ಯಾದ ವೈಜ್ಞಾನಿಕರು ಮಾಡಿರುವ ಸಂಶೋಧನೆಯಲ್ಲಿ ಕಂಡು ಬಂದಿರುವುದೇ ನೆಂದರೆ ಕೆಲವು ಸ್ಪಂದನಗಳು ಆಕಾಶದಲ್ಲಿ ಅಘನೀಕರಣಗೊಂಡು ಪುನಃ ಯಾವಾಗ ಬೇಕಾದರೂ.ಅವುಗಳ ಘನೀಕರಣ (ಮೆಟೀರಿಯಲೈಜೇಶನ್) ಆಗುತ್ತದೆ; ಆದರೆ ಈ ಪ್ರಕ್ರಿಯೆಯು ಯಾವ ವಿಧದಿಂದ ಆಗುತ್ತದೆ ಎಂಬುದನ್ನು ಈಗಲೂ ಖಚಿತವಾಗಿ ಹೇಳಲು ಆಗುವುದಿಲ್ಲ.

ಕಾಲರಾತ್ರಿ: ಹಲವಾರು ಅಯೋಗ್ಯ ಸ್ಪಂದನಲಹರಿಗಳು ಒಟ್ಟು ಸೇರಿ ಸಿದ್ಧವಾಗುವ ಶಕ್ತಿಯೆಂದರೆ ‘ಕಾಲ’. ವ್ಯಕ್ತಿಯ ಅಯೋಗ್ಯ ಸ್ಪಂದನಲಹರಿಗಳು ಆ ವ್ಯಕ್ತಿಯಲ್ಲಿ ಭಯವನ್ನುಂಟು ಮಾಡುತ್ತವೆ. ಆ ಸ್ಪಂದನಲಹರಿಗಳಲ್ಲಿ ವಿಶಿಷ್ಟ ಕ್ಷಮತೆ ಉಂಟಾಯಿತೆಂದರೆ ವಾತಾವರಣದಲ್ಲಿನ ಇದೇ ಜಾತಿಯ

ಇತರ ಸ್ಪಂದನಗಳನ್ನು ವ್ಯಕ್ತಿಯ ಶರೀರದೆಡೆ ಆಕರ್ಷಿಸುತ್ತವೆ. ಈ ರೀತಿ ಅಯೋಗ್ಯ ಸ್ಪಂದನಲಹರಿಗಳ ಶಕ್ತಿಯು ಹೆಚ್ಚಾಯಿತೆಂದರೆ ಆಗಬಾರದಂತಹ ಘಟನೆಗಳು ಮತ್ತು ಕೃತಿಗಳು ಆ ವ್ಯಕ್ತಿಯಿಂದ ಆಗುತ್ತವೆ. ಅವುಗಳ ಪ್ರತಿಕ್ರಿಯೆಗಳನ್ನು ನಾವು ಆಪತ್ತು ಅಥವಾ ಸಂಕಟ ಎನ್ನುತ್ತೇವೆ. ಇಂತಹ ಆಪತ್ತನ್ನು ಅಥವಾ ಸಂಕಟವನ್ನು ತರುವ ಅಯೋಗ್ಯ ಸ್ಪಂದನಲಹರಿಗಳ ಸಾಮೂಹಿಕ ಶಕ್ತಿಯ, ಅಂದರೆ ಕಾಲದ ರಾತ್ರಿಯೇ (ಅಂದರೆ ವಿನಾಶಿಕಾ ಅರ್ಥಾತ್ ವಿನಾಶ ಮಾಡುವವಳು) ‘ಕಾಲರಾತ್ರಿ’. ‘ವಿನಾಶಿಕಾ’ ಅಂದರೆ ‘ವಿಶೇಷೇಣ ನಾಶಯತಿ ಇತಿ’ (ಸಂಪೂರ್ಣವಾಗಿ ನಾಶ ಮಾಡುವವಳು). ‘ವಿಶೇಷ’ ಎಂದರೆ ‘ವಿಗತಃ ಶೇಷಃ ಯಸ್ಮಾತ್|’ (ವಿಶಿಷ್ಟ) ಶೇಷವೂ ಇಲ್ಲದಂತೆ ನಾಶ ಮಾಡುವುದು.

ಮಹಾಗೌರಿ: ತಪಸ್ಯೇನೆ ಮಹಾನ್ ‘ಗೌರಃ’, ಅಂದರೆ ‘ತೇಜಸ್ಸ’ನ್ನು ಪ್ರಾಪ್ತಮಾಡಿ ಕೊಂಡವಳೇ ಮಹಾಗೌರಿ’. ಮಂತ್ರಯೋಗಸಮಿಕ್ಷೆಯಲ್ಲಿ ‘ಸಮಾಧಿ’ ಎಂಬ ಪದದ ವ್ಯುತ್ಪತ್ತಿಯನ್ನು ‘ಸಮ್ + ಆ + ಅಧಿ’ ಎಂದು ಹೇಳಲಾಗಿದೆ. ‘ಸಮ್’ ಅಂದರೆ ಸೂಕ್ಷ್ಮಾತಿಸೂಕ್ಷ್ಮ ಶಕ್ತಿತರಂಗಗಳ ಸಮ್ಯಕ್, ‘ಆ’ ಅಂದರೆ ‘ವರೆಗೆ’ ಮತ್ತು ‘ಧಿ’ ಅಂದರೆ ‘ಮಾನವನ ಶರೀರದಿಂದ ನಿರಂತರವಾಗಿ ಉತ್ಸರ್ಜಿತಗೊಳ್ಳುವ ಸ್ಪಂದನಲಹರಿಗಳು’. ಧೀ ಎಂಬ ಲಹರಿಗಳನ್ನು ಸೂಕ್ಷ್ಮಾತಿಸೂಕ್ಷ್ಮಶಕ್ತಿ ಲಹರಿಗಳ ಸಮ್ಯಕ್ ಅವಸ್ಥೆಯ ತನಕ ಕೊಂಡೊಯ್ಯುವ ಪ್ರಕ್ರಿಯೆಯನ್ನು ಸಮಾಧಿ ಎನ್ನುತ್ತಾರೆ. ಈ ರೀತಿ ಪುನಃ ಪುನಃ ಸಮಾಧಿಯನ್ನು ಸಾಧಿಸುವುದಕ್ಕೆ ‘ತಪಸ್ಯಾ’ ಎನ್ನುತ್ತಾರೆ. ಇಂತಹ ತಪಸ್ಸನ್ನು ವಿಶಿಷ್ಟ ಕಾಲಾವಧಿಯ ತನಕ ಮಾಡುವುದರಿಂದ ‘ಗೌರ’ ಅಥವಾ ‘ತೇಜಸ್ಸು’ ಪ್ರಾಪ್ತವಾಗುತ್ತದೆ. ಇಂತಹ ತೇಜಸ್ಸಿನ ಅತ್ಯುಚ್ಚ ತೇಜಸ್ಸನ್ನು ಅಂದರೆ ಮಹಾನ್ ಗೌರವನ್ನು ಯಾವಳು ಪಡೆದುಕೊಂಡಿದ್ದಾಳೆಯೋ ಅವಳು ಮತ್ತು ಯಾರ ಪ್ರಸಾದದಿಂದ ಸಮಾಧಿಯನ್ನು ಸಾಧಿಸಬಹುದೋ ಅವಳೇ ಮಹಾಗೌರಿ’.

ಸಿದ್ಧಿದಾತ್ರಿ: ಸಾಮಾನ್ಯ ಸ್ಪಂದನಲಹರಿಗಳನ್ನು ಸೂಕ್ಷ್ಮಾತಿಸೂಕ್ಷ್ಮ ಶಕ್ತಿತರಂಗಗಳಲ್ಲಿ ಶಾಶ್ವತವಾಗಿ ಸೇರಿಸುವುದಕ್ಕೆ ‘ಮೋಕ್ಷ ಅಥವಾ ಸಿದ್ಧಿ’ ಎನ್ನುತ್ತಾರೆ ಸಿದ್ಧಿಯನ್ನು ನೀಡುವವಳು ಸಿದ್ಧಿದಾತ್ರಿ.’

ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ ಜನವಶ, ಶತ್ರುನಾಶ, ಸ್ತ್ರೀ– ಪುರುಷ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಅಮ್ಮನವರ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564

ದಸರಾ ಹಬ್ಬದ ಮಹತ್ವ

ಮಹಿಷಾಸುರನ ಮಾಯೆಯನ್ನು ಗುರುತಿಸಿ ಅವನ ಅಸುರೀ ಪಾಶದಿಂದ ಮುಕ್ತರಾಗಲು ಶಕ್ತಿ ಉಪಾಸನೆಯ ಆವಶ್ಯಕತೆಯಿದೆ.ಇದಕ್ಕಾಗಿ ನವರಾತ್ರಿಯ ಒಂಭತ್ತು ದಿನ ಶಕ್ತಿಯ ಉಪಾಸನೆಯನ್ನುಮಾಡಬೇಕು. ದಶಮಿಯಂದು ವಿಜಯೋತ್ಸವವನ್ನು ಆಚರಿಸಬೇಕು. ಇದನ್ನೇ ದಸರಾ (ದಶಹರಾ)/ವಿಜಯದಶಮಿ ಎನ್ನುತ್ತಾರೆ.

ಮತ್ತಷ್ಟು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ

Tags: 9 forms of DurgaNavratri 9 days goddessNavratri 9 days meaningNavratri 9 days significanceNavratri colours 2025Navratri day-wise coloursNavratri goddess namesNavratri spiritual significanceನವದುರ್ಗೆಯ 9 ರೂಪಗಳುನವರಾತ್ರಿ 9 ದಿನಗಳ ಅರ್ಥನವರಾತ್ರಿ 9 ದಿನಗಳ ದೇವಿನವರಾತ್ರಿ ಆಧ್ಯಾತ್ಮಿಕ ಮಹತ್ವನವರಾತ್ರಿ ದಿನಗಳ ಮಹತ್ವನವರಾತ್ರಿ ದಿನವಾರು ಬಣ್ಣಗಳುನವರಾತ್ರಿ ದೇವಿಯ ರೂಪಗಳುನವರಾತ್ರಿ ಬಣ್ಣಗಳ ಅರ್ಥ
ShareTweetSendShare
Join us on:

Related Posts

Even dull kids can become intelligent chant Saraswati mantra

ಮೂರ್ಖ ಮಕ್ಕಳು ಕೂಡ ವಿದ್ಯಾವಂತರಾಗಲು ಈ ಉಪಾಯ ಮಾಡಿ

by Saaksha Editor
November 10, 2025
0

ಕೆಲವೊಂದು ಬಾರಿ ತರಗತಿಯಲ್ಲಿ ಚೆನ್ನಾಗಿ ಓದುತ್ತಿದ್ದ ಮಕ್ಕಳು ಮಂಕಾಗುತ್ತಾರೆ, ಇನ್ನು ಕೆಲವೊಂದು ಬಾರಿ ತರಗತಿಯಲ್ಲಿ ಕೂತಿದ್ದರು ಸಹ ಮನಸ್ಸು ಮಾತ್ರ ಬೇರೆ ಕಡೆ ಇರುತ್ತದೆ ಮತ್ತು ವಿದ್ಯಾಭ್ಯಾಸದ...

India vs West Indies 2nd Test: Blue Boys Close to Victory Match Highlights

ಭಾರತ-ವಿಂಡೀಸ್‌ 2ನೇ ಟೆಸ್ಟ್‌- ಗೆಲುವಿನ ಸನೀಹದಲ್ಲಿ ಬ್ಲೂ ಬಾಯ್ಸ್‌

by Saaksha Editor
October 13, 2025
0

ವೆಸ್ಟ್‌ ಇಂಡೀಸ್‌ ವಿರುದ್ಧದ ಎರಡನೇ ಟೆಸ್ಟ್‌ ಪಂದ್ಯದಲ್ಲಿ ಭಾರತ (Team India) ಗೆಲುವಿನ ಸನೀಹದಲ್ಲಿದೆ. ಪಂದ್ಯ ಐದನೇ ದಿನ  ಟೀಮ್‌ ಇಂಡಿಯಾಗೆ ಬೇಕಾಗಿರೋದು ಕೇವಲ 58 ರನ್‌...

Chowkidar Gets U/A Certificate After Censor Clearance

ಸೆನ್ಸಾರ್ ಪಾಸಾದ ‘ಚೌಕಿದಾರ್’ಗೆ ಸಿಕ್ತು ಯು/ಎ ಸರ್ಟಿಫಿಕೇಟ್

by Saaksha Editor
September 22, 2025
0

ಸೆನ್ಸಾರ್ ಮಂಡಳಿಯಿಂದ ಚೌಕಿದಾರ್‌ಗೆ (Chowkidar) ಮೆಚ್ಚುಗೆ.. ಪೃಥ್ವಿ-ಧನ್ಯ ಸಿನಿಮಾಗೆ ಯು/ಎ ಸರ್ಟಿಫಿಕೇಟ್ (U/A Certificate) ನೀಡಲಾಗಿದೆ. ಪೃಥ್ವಿ ಅಂಬಾರ್ ಹಾಗೂ ಧನ್ಯಾ ರಾಮ್ಕುಮಾರ್ ಅಭಿನಯದ ಬಹುನಿರೀಕ್ಷಿತ 'ಚೌಕಿದಾರ್'...

Shakti Peetha Darshan Benefits: Attract Wealth and Remove Life Troubles

ಶಕ್ತಿಪೀಠ ದರ್ಶನ ಮಾಡಿದರೆ ಮನೆಯಲ್ಲಿ ಅಷ್ಟೈಶ್ವರ್ಯ ವೃದ್ಧಿ, ಸಂಕಷ್ಟ ದೂರ

by Saaksha Editor
September 21, 2025
0

ತ್ರಿದೇವಿ ಸ್ವರೂಪಿ ಶಕ್ತಿ ಪೀಠ ಶ್ರೀ ಕ್ಷೇತ್ರಕ್ಕೆ ದರ್ಶನ ಮಾಡಿ ಬಂದರೆ ಮನೆಯಲ್ಲಿ ಸದಾಕಾಲ ಅಷ್ಟೈಶ್ವರ್ಯ ವೃದ್ಧಿಯಾಗಿ ಸಂಕಷ್ಟ ದೂರವಾಗುತ್ತದೆ..!! ಇಲ್ಲಿನ ಐತಿಹ್ಯಗಳ ಅನುಸಾರ, ಇಲ್ಲಿ ತಪಸ್ಸು...

India vs Pakistan: Is Handshake Compulsory in Cricket Matches? What the Rules Say

ದಿ…ಶೇಕ್‌ ಹ್ಯಾಂಡ್‌ ರಿಯಲ್‌ ಕಹಾನಿ..!

by Saaksha Editor
September 16, 2025
0

ಶೇಕ್‌ ಹ್ಯಾಂಡ್‌ ಮಾಡಲೇಬೇಕು ಎಂಬ ರೂಲ್ಸ್‌ ಯಾವ ಕ್ರೀಡಾ ರೂಲ್ಸ್‌ ಬುಕ್‌ಗಳಲ್ಲೂ ಇಲ್ಲ. ಅದು ಕ್ರಿಕೆಟ್‌ ಇರಲಿ.. ಬೇರೆ ಯಾವುದೇ ಕ್ರೀಡೆಯೇ ಆಗಿರಲಿ.. ಶೇಕ್‌ ಹ್ಯಾಂಡ್‌ ಅನ್ನೋದು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram