ನವರಾತ್ರಿಯ ಮೂರನೇ ದಿನ ದುರ್ಗೆಯ ಮೂರನೇ ಅವತಾರವಾದ ಚಂದ್ರಘಂಟಾ ದೇವಿಗೆ ಅರ್ಪಿತವಾದ ದಿನ. ತನ್ನ ಭಕ್ತರ ಕಷ್ಟಗಳನ್ನು ಕ್ಷಣಮಾತ್ರದಲ್ಲೇ ನಿವಾರಿಸಿ, ಸಂತೋಷ, ಸಮೃದ್ಧಿಯನ್ನು ನೀಡುವ ತಾಯಿಯೇ ಈಕೆ. ಈಕೆಯನ್ನು ಹಲವಾರು ಮಂತ್ರ, ಸ್ತೋತ್ರ, ಪ್ರಾರ್ಥನೆಗಳಿಂದ ಒಲಿಸಿಕೊಳ್ಳಬಹುದು. ಮೂರನೇ ದಿನದ ಪೂಜಾ ವಿಧಾನ, ತಾಯಿಯನ್ನು ಒಲಿಸಿಕೊಳ್ಳುವ ಮಂತ್ರಗಳ ಕುರಿತು ಹೆಚ್ಚಿನ ಮಾಹಿತಿ…
ಚಂದ್ರ ಘಂಟಾ ದೇವಿಯ ರೂಪ:
ದೇವಿ ಚಂದ್ರಘಂಟೆಯು ಚಿನ್ನದ ಮೈಬಣ್ಣ, ಹತ್ತು ತೋಳು ಹಾಗೂ ಮೂರು ಕಣ್ಣನ್ನು ಹೊಂದಿರುತ್ತಾಳೆ. ಘಂಟೆಯಾಕಾರದ ಚಂದ್ರನನ್ನು ಶಿರದಲ್ಲಿ ಧರಿಸಿದವಳಾದ್ದರಿಂದ ಈಕೆಯನ್ನು ಚಂದ್ರಘಂಟೆಯೆಂಬ ಹೆಸರು ಬಂದಿದೆ. ಈ ತಾಯಿಯನ್ನು ಚಂದ್ರಿಕಾ, ರಣಚಂಡಿಯೆಂದೂ ಕರೆಯುತ್ತಾರೆ. ಇವಳ ಆರಾಧನೆಯಿಂದ ಸಂಪತ್ತು ಹಾಗೂ ಸಮೃದ್ಧಿಯನ್ನು ಪಡೆಯಬಹುದು. ಈಕೆಯ ಆಶೀರ್ವಾದದಿಂದ ಮನೆಯಲ್ಲಿ ಎಂದಿಗೂ ಆಹಾರದ ಕೊರತೆ ಎದುರಾಗದು ಎಂಬ ನಂಬಿಕೆ ಭಕ್ತರದ್ದು.
ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564
ಚಂದ್ರಘಂಟೆಯ ಪೂಜಾ ವಿಧಿ:
1) ಆತ್ಮಪೂಜೆ: ಸ್ವಯಂ ಶುದ್ಧೀಕರಣಕ್ಕಾಗಿ ಆತ್ಮ ಪೂಜೆ ಮಾಡಿ.
2) ತಿಲಕ ಮತ್ತು ಆಚಮನ: ಹಣೆಯ ಮೇಲೆ ತಿಲಕ ಹಾಕಿ, ಅಂಗೈಯಿಂದ ಪವಿತ್ರ ಜಲವನ್ನು ಕುಡಿಯಿರಿ.
3) ಸಂಕಲ್ಪ: ಕೈಯಲ್ಲಿ ನೀರನ್ನು ತೆಗೆದುಕೊಂಡು ದೇವಿಯ ಮುಂದೆ ಸಂಕಲ್ಪ ಮಾಡಿಕೊಳ್ಳಿ.
4) ಆವಾಹನ ಮತ್ತು ಆಸನ: ದೇವಿಗೆ ಹೂವುಗಳನ್ನು ಅರ್ಪಿಸಿ.
5) ಪಾದ್ಯ : ದೇವಿಯ ಚರಣಕ್ಕೆ ಜಲವನ್ನು ಪ್ರೋಕ್ಷಣೆ ಮಾಡಿ.
6) ಆಚಮನ: ಕರ್ಪೂರ ಮಿಶ್ರಿತ ನೀರನ್ನು ದೇವಿಗೆ ಪ್ರೋಕ್ಷಣೆ ಮಾಡಿ.
7) ದುಗ್ದಾಸ್ನಾನ: ಹಸುವಿನ ಶುದ್ಧ ಹಾಲಿನಿಂದ ಅಭಿಷೇಕ.
8) ಘೃತ ಮತ್ತು ಮಧುಸ್ನಾನ: ತುಪ್ಪ ಮತ್ತು ಜೇನುತುಪ್ಪವನ್ನು ಅರ್ಪಿಸಿ.
9) ಶಾರ್ಕರ ಮತ್ತು ಪಂಚಾಮೃತ ಸ್ನಾನ: ಸಕ್ಕರೆ ಮತ್ತು ಪಂಚಾಮೃತ ಸ್ನಾನವನ್ನು ಅರ್ಪಿಸಿ.
10) ವಸ್ತ್ರ: ಧರಿಸಲು ಸೀರೆ ಅಥವಾ ಬಟ್ಟೆಯನ್ನು ದೇವಿಗೆ ಅರ್ಪಣೆ ಮಾಡಿ.
11) ಚಂದನ: ದೇವಿಗೆ ಶ್ರೀಗಂಧದ ತಿಲಕವನ್ನು ಹಚ್ಚಿ. ಕುಂಕುಮ, ಕಾಡಿಗೆ, ದೂರ್ವಪತ್ರೆ ಹಾಗೂ ಬಿಲ್ವಪತ್ರೆಯನ್ನು ಅರ್ಪಿಸಿ. ಧೂಪ, ದೀಪ, ಪ್ರಸಾದಗಳಿಂದ ಅರ್ಚಿಸಿ ಹಾಗೂ ಭಕ್ತಿಯಿಂದ ಧ್ಯಾನವನ್ನು ಮಾಡಿ.
ಚಂದ್ರಘಂಟೆಯ ಮಂತ್ರ:
ಓಂ ದೇವಿ ಚಂದ್ರಘಂಟಾಯೈ ನಮಃ
ಓಂ ದೇವೀ ಚಂದ್ರಘಂಟಾಯೈ ನಮಃ ಪಿಂದಾಜ ಪ್ರವರಾರುಧ ಚಂದಕೋಪಸ್ತ್ರಕೈರ್ಯುತ
ಪ್ರಸಾದಂ ತನುತೇ ಮಧ್ಯಮ ಚಂದ್ರಘಂಟತಿ ವಿಶ್ರುತಾ
ಚಂದ್ರಘಂಟೆಯ ಪ್ರಾರ್ಥನೆ:
ಪಿಂದಾಜ ಪ್ರವರಾರುಧ ಚಂದಕೋಪಸ್ತ್ರಕೈರ್ಯುತ
ಪ್ರಸಾದಂ ತನುತೇ ಮಧ್ಯಮ ಚಂದ್ರಘಂಟತಿ ವಿಶ್ರುತಾ
ಚಂದ್ರಘಂಟೆಯ ಧ್ಯಾನ:
ವಂದೇ ವಂಚಿತಾಲಭಯ ಚಂದ್ರಧಾಕೃತ್ರಶೇಖರಂ
ಸಿಂಹರೂಢ ಚಂದ್ರಘಂಟ ಯಶಸ್ವಿನೀಂ
ಮಣಿಪುರಾ ಸ್ಥಿತಂ ತೃತಿಯಾ ದುರ್ಗಾ ತ್ರಿನೇತ್ರಂ
ಶಂಖ, ಗಧಾ, ತ್ರಿಶೂಲ, ಚಪಶರ, ಪದ್ಮಕಮಂಡಲು ಮಾಲಾ ವರಭಿತಕರಂ
ಪತಂಬರಾ ಪರಿಧಿಂ ಮೃದುಹಾಸ ನಾನಾಲಂಕಾರ ಭೂಷಿತಂ
ಮಂಜೀರಾ, ಹರಾ, ಕೆಯುರಾ, ಕಿಕಿಂಣಿ, ರತ್ನಾಕುಂಡಲ ಮಂಡಿಯಂ
ಪ್ರಫುಲ್ಲ ವಂದನಾ ಬಿಬಾಧಾರ ಕಾಂತಾ ಕಪೋಲಂ ತುಗಂ ಕುಚಂ
ಕಾಮನಿಯಂ ಲಾವಣ್ಯಂ ಕ್ಷಿನಾಕತಿ ನಿತಂಬನಿಂ
ಚಂದ್ರಘಂಟಾ ದೇವಿಯ ಸ್ತೋತ್ರ
ಅಪಾದುದ್ಧಾರಿಣಿ ತ್ವಂಹೀ ಆದ್ಯ ಶಕ್ತಿಃ ಶುಭ್ಪರಂ
ಅನಿಮಾದಿ ಸಿದ್ಧಿಧಾತ್ರಿ ಚಂದ್ರಘಂಟೇ ಪ್ರಣಮಾಮ್ಯಹಂ
ಚಂದ್ರಮಿಖಿ ಇಷ್ಟ ಧಾತ್ರಿ ಇಷ್ಟಂ ಮಂತ್ರ ಸ್ವರೂಪಿಣಿಂ
ಧನಧಾತ್ರಿ, ಆನಂದಧಾತ್ರಿ ಚಂದ್ರಘಂಟೇ ಪ್ರಣಮಾಮ್ಯಹಂ
ನಾನಾರೂಪಧಾರಿಣಿ ಇಚ್ಛಾಮಯಿ ಐಶ್ವರ್ಯದಾಯಿನೀಂ
ಸೌಭಾಗ್ಯಾರೋಗ್ಯದಾಯಿನಿ ಚಂದ್ರಘಂಟೇ ಪ್ರಣಮಾಮ್ಯಹಂ
ಚಂದ್ರಘಂಟಾ ದೇವಿಯ ಕವಚ:
ರಹಸ್ಯಂ ಶ್ರಿನನಿ ವಕ್ಷ್ಯಾಮಿ ಶೈವೇಶಿ ಕಮಲಾನನೇ
ಶ್ರೀ ಚಂದ್ರಘಂಟಸ್ಯ ಕವಚಂ ಸರ್ವಸಿದ್ಧಿದಾಯಕಂ
ಬಿನಾ ನ್ಯಾಸಂ ಬಿನಾ ವಿನಿಯೋಗಂ ಬಿನಾ ಶಪೋಧ ಬಿನಾ ಹೋಮಂ
ಸ್ನಾನಂ ಶೌಚಾದಿ ನಾಸ್ತಿ ಶ್ರದ್ಧಾಮಾತ್ರೇನ ಸಿದ್ಧಿದಾಂ
ಕೌಶಿಶ್ಯಾಂ ಕೌಟಿಲ್ಯ ವಂಚಕಾಯ ನಿಂದಕಾಯ ಚ
ನ ದಾತಾವ್ಯಂ ನ ದಾತಾವ್ಯಂ ನ ದಾತಾವ್ಯಂ ಕದಾಚಿತಂ
ಚಂದ್ರಾಘಂಟಾದೇವಿಯ ಪೂಜೆಯ ಮಹತ್ವ:
ನವರಾತ್ರಿಯ ಮೂರನೇ ದಿನ ಚಂದ್ರಘಂಟಾ ದೇವಿಯ ಪೂಜೆ ಮಾಡುವುದರಿಂದ ಮನಸ್ಸಿನಲ್ಲಿರುವ ಭಯವೆಲ್ಲಾ ನಿವಾರಣೆಯಾಗಿ ಜೀವನದಲ್ಲಿ ಯಶಸ್ಸನ್ನು ಸಾಧಿಸಬಲ್ಲೆ ಎಂಬ ವಿಶ್ವಾಸ ಬೆಳೆಯುವುದು. ಚಂದ್ರಘಂಟಾ ದೇವಿಯ ಮಸ್ತಕದಲ್ಲಿರುವ ಚಂದ್ರಘಂಟೆಯ ನಾದವು ಋಣಾತ್ಮಕ ಶಕ್ತಿ, ದುಷ್ಟಶಕ್ತಿಗಳನ್ನೆಲ್ಲಾ ದೂರ ಮಾಡುವುದು ಹಾಗಾಗಿ ಚಂದ್ರಘಂಟೆಯ ಪೂಜೆಯನ್ನು ಮಾಡಿದರೆ ಮನೆಯಲ್ಲಿರುವ ನಕಾರಾತ್ಮಕ ಶಕ್ತಿಗಳೆಲ್ಲಾ ದೂರವಾಗಿ ಮನೆಶುದ್ಧಿಯಾಗುವುದು.
ಯಾರು ಜೀವನದಲ್ಲಿ ಭರವಸೆಯನ್ನು ಕಳೆದುಕೊಂಡು ವ್ಯವಹಾರದಲ್ಲಿ ಹೊಸ ಹಾದಿಯನ್ನು ತುಳಿಯಲು ಇಚ್ಛಿಸುತ್ತಾರೋ ಅವರು ಚಂದ್ರಘಂಟೆಯ ಪೂಜೆ ಮಾಡಿದರೆ ಅವರು ಸಾಗುವ ದಾರಿಯಲ್ಲಿ ಬೆಳಕನ್ನು ಚೆಲ್ಲಿ, ಯಶಸ್ಸಿನ ಮೆಟ್ಟಿಲೇರಲು ಸಹಕರಿಸುತ್ತಾಳೆ ತಾಯಿ ಚಂದ್ರಘಂಟೆ. ಹೀಗಾಗಿ ನವರಾತ್ರಿಯ ಮೂರನೇ ದಿನ ಚಂದ್ರಘಂಟೆಯ ಪೂಜೆ ಮಾಡಿ, ಮಾತೆಯ ಆಶೀರ್ವಾದ ಪಡೆದುಕೊಳ್ಳಿ.
ಲೇಖನ: ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ಧಾರ್ಮಿಕಚಿಂತಕರು,ಜೋತಿಷ್ಯರು ,ಸಲಹೆಗಾರರು,
ಸಂಶೋಧಕರು. ಹಾಗು ಬರಹಗಾರರು✍